ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಬಿಎಂಪಿ ವಿಭಜನೆ ವಿರುದ್ಧ ರಕ್ಷಣಾ ವೇದಿಕೆ ಪ್ರತಿಭಟನೆ

|
Google Oneindia Kannada News

ಬೆಂಗಳೂರು, ಏ. 13 : ಒಡೆಯಬೇಡಿ ಒಡೆಯಬೇಡಿ...ಬೆಂಗಳೂರು ಒಡೆಯಬೇಡಿ, ಒಡೆದು ಆಳು ನೀತಿ ಕೈಬಿಡಿ...ಕೈ ಬಿಡಿ, ಬೆಂಗಳೂರಿನ ಜನರ ಭಾವನೆಗೆ ಬೆಲೆಕೊಡಿ...ಬೆಲೆಕೊಡಿ. ಇದು ಕರ್ನಾಟಕ ರಕ್ಷಣಾ ವೇದಿಕೆ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಕೇಳಿಬಂದ ಘೋಷಣೆಗಳು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಮೂರು ಭಾಗಗಳಾಗಿ ವಿಂಗಡಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡರ ಬಣ ಸೋಮವಾರ ಬೃಹತ್ ಪ್ರತಿಭಟನೆ ನಡೆಸಿತು. [ಅಖಂಡ ಬೆಂಗಳೂರನ್ನು ಒಡೆಯಬೇಡಿ : ಬಿಜೆಪಿ ಒತ್ತಾಯ]

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗೃಹ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ನಾರಾಯಣ ಗೌಡ ಮತ್ತು ನೂರಾರು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ಬಿಬಿಎಂಪಿ ವಿಭಜನೆ ಮಾಡುವ ನಿರ್ಧಾರವನ್ನು ಸರ್ಕಾರ ತಕ್ಷಣ ಕೈಬಿಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. [ಬಿಬಿಎಂಪಿ ವಿಭಜನೆ ಹೇಗೆ?, ಸಂಕ್ಷಿಪ್ತ ಮಾಹಿತಿ]

ಸಿದ್ದರಾಮಯ್ಯ ಅವರು ಬೆಂಗಳೂರಿನ ಜನರ ಭಾವನೆಗೆ ಬೆಲೆಕೊಟ್ಟು ಬಿಬಿಎಂಪಿ ವಿಭಜನೆ ನಿರ್ಧಾರವನ್ನು ವಾಪಸ್ ಪಡೆಯಬೇಕು. ಇಲ್ಲವಾದಲ್ಲಿ ಮುಖ್ಯಮಂತ್ರಿಗಳು ಪಾಲ್ಗೊಳ್ಳುವ ಕಾರ್ಯಕ್ರಮಗಳಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ ಅವರ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ನಾರಾಯಣ ಗೌಡರು ಎಚ್ಚರಿಕೆ ನೀಡಿದರು.

ಬಿಬಿಎಂಪಿ ವಿಭಜನೆ ಖಂಡಿಸಿ, ಕರವೇ ಪ್ರತಿಭಟನೆ

ಬಿಬಿಎಂಪಿ ವಿಭಜನೆ ಖಂಡಿಸಿ, ಕರವೇ ಪ್ರತಿಭಟನೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಮೂರು ಭಾಗಗಳಾಗಿ ವಿಂಗಡಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡರ ಬಣ ಸೋಮವಾರ ಬೃಹತ್ ಪ್ರತಿಭಟನೆ ನಡೆಸಿತು.

ರೇಸ್‌ಕೋರ್ಸ್ ರಸ್ತೆ ಬಳಿ ಕಾರ್ಯಕರ್ತರ ಬಂಧನ

ರೇಸ್‌ಕೋರ್ಸ್ ರಸ್ತೆ ಬಳಿ ಕಾರ್ಯಕರ್ತರ ಬಂಧನ

ಬಿಬಿಎಂಪಿ ವಿಭಜನೆ ವಿರೋಧಿಸಿ ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕಲು ಗಾಂಧಿನಗರದಿಂದ ಹೊರಟ 500ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ರೇಸ್‌ಕೋರ್ಸ್ ಬಳಿ ಪೊಲೀಸರು ತಡೆದರು. ಅಲ್ಲಿಯೇ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು ಬಿಬಿಎಂಪಿ ವಿಭಜನೆ ಮಾಡಬೇಡಿ ಎಂದು ಒತ್ತಾಯಿಸಿದರು.

ಕಪ್ಪು ಬಾವುಟ ತೋರಿಸುವ ಎಚ್ಚರಿಕೆ

ಕಪ್ಪು ಬಾವುಟ ತೋರಿಸುವ ಎಚ್ಚರಿಕೆ

ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಟಿಎ ನಾರಾಯಣ ಗೌಡ ಅವರು ಸಿದ್ದರಾಮಯ್ಯ ಅವರು ಬೆಂಗಳೂರಿನ ಜನರ ಭಾವನೆಗೆ ಬೆಲೆಕೊಟ್ಟು ಬಿಬಿಎಂಪಿ ವಿಭಜನೆ ನಿರ್ಧಾರವನ್ನು ವಾಪಸ್ ಪಡೆಯಬೇಕು. ಇಲ್ಲವಾದಲ್ಲಿ ಮುಖ್ಯಮಂತ್ರಿಗಳು ಪಾಲ್ಗೊಳ್ಳುವ ಕಾರ್ಯಕ್ರಮಗಳಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ ಅವರ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಾಮಾಜಿಕ ಅಸಮತೋಲನ ಉಂಟಾಗುತ್ತದೆ

ಸಾಮಾಜಿಕ ಅಸಮತೋಲನ ಉಂಟಾಗುತ್ತದೆ

ಸರ್ಕಾರ ಮೊಂಡುತನದಿಂದ ಅಖಂಡವಾಗಿರುವ ಬೆಂಗಳೂರನ್ನು ಒಡೆಯಲು ಪ್ರಯತ್ನಿಸಿಬಾರದು. ಪ್ರಸ್ತುತ ರಾಜಧಾನಿಯಲ್ಲಿ ಇರುವ ಪರಿಸ್ಥಿತಿ ನೋಡಿದರೆ ಮುಂದೆ ಸಾಮಾಜಿಕ ಅಸಮತೋಲನ ಉಂಟಾಗಿ ಕನ್ನಡಿಗರೇ ಪರಕೀಯರಾಗಬೇಕಾಗುತ್ತದೆ ಎಂದು ನಾರಾಯಣ ಗೌಡರು ಆತಂಕ ವ್ಯಕ್ತಪಡಿಸಿದರು.

ಕಳೆದವಾರದಿಂದ ಪ್ರತಿಭಟನೆ

ಕಳೆದವಾರದಿಂದ ಪ್ರತಿಭಟನೆ

ಕಳೆದ ವಾರವೂ ಕರ್ನಾಟಕ ರಕ್ಷಣಾ ವೇದಿಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ವಿಭಜನೆ ಮಾಡಬಾರದು ಎಂದು ಒತ್ತಾಯಿಸಿ ಪಂಜಿನ ಮೆರವಣಿಗೆ ನಡೆಸಿ ಸರ್ಕಾರವನ್ನು ಒತ್ತಾಯಿಸಿತ್ತು, ಈ ಕುರಿತು ರಾಜ್ಯಪಾಲರಿಗೂ ಮನವಿ ಸಲ್ಲಿಸಿತ್ತು.

English summary
On Monday, April 13 Karnataka Rakshana Vedike protest against splitting Bruhat Bengaluru Mahanagara Palike (BBMP) into three parts.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X