ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಜೆಟ್ 2021: ಕರ್ನಾಟಕಕ್ಕೆ ಅನ್ಯಾಯದ ಸರಣಿ ಮುಂದುವರೆದಿದೆ ಎಂದ ಕರ್ನಾಟಕ ರಕ್ಷಣಾ ವೇದಿಕೆ

|
Google Oneindia Kannada News

ಬೆಂಗಳೂರು, ಫೆಬ್ರವರಿ 02: ಕರ್ನಾಟಕಕ್ಕೆ ಅನ್ಯಾಯದ ಸರಣಿ ಮುಂದುವರೆದಿದೆ, ಸರ್ಕಾರದ 2021-22 ರ ಬಜೆಟ್ ನಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಮತ್ತಷ್ಟು ಕಡಿಮೆ ಅನುದಾನ ಬರುವುದಾಗಿ ತಿಳಿದುಬಂದಿದೆ.

. ಇದು ಕರ್ನಾಟಕ ಸರ್ಕಾರ ಮತ್ತು 28 ಲೋಕಸಭಾ ಸದಸ್ಯರ ಸಾಮೂಹಿಕ ಸೋಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿಎ ನಾರಾಯಣಗೌಡ ಹೇಳಿದ್ದಾರೆ.

ಬಜೆಟ್; ಬೆಂಗಳೂರು ಏರ್ ಪೋರ್ಟ್‌ ಮೆಟ್ರೋಗೆ ಕೇಂದ್ರದ ಒಪ್ಪಿಗೆಬಜೆಟ್; ಬೆಂಗಳೂರು ಏರ್ ಪೋರ್ಟ್‌ ಮೆಟ್ರೋಗೆ ಕೇಂದ್ರದ ಒಪ್ಪಿಗೆ

ಹೈಕಮಾಂಡ್ ಗುಲಾಮಗಿರಿಗೆ ಒಗ್ಗಿಹೋಗಿರುವ ನಮ್ಮ ಸಂಸದರಿಗೆ, ಜನಪ್ರತಿನಿಧಿಗಳಿಗೆ ಇದು ಅವಮಾನ ಎನ್ನಿಸದಿರಬಹುದು. ಆದರೆ ವಿಶ್ವಾಸವಿಟ್ಟು ಮತ ಚಲಾಯಿಸಿದ ರಾಜ್ಯದ ಜನತೆಯ ಪಾಲಿಗೆ ಇದು ಘೋರ ಅಪಮಾನವಾಗಿದೆ.

ಒಟ್ಟಾರೆಯಾಗಿ ಈ ಬಾರಿಯ ಒಕ್ಕೂಟ ಸರ್ಕಾರದ ಬಜೆಟ್, ಕನ್ನಡಿಗರ ಪಾಲಿಗೆ ಖಾಲಿ ಸೊನ್ನೆಯನ್ನು ಸುತ್ತಿದೆ. ಜಾತಿ, ಧರ್ಮದ ಹೆಸರಿನಲ್ಲಿ ಕನ್ನಡಿಗರ ಮತ ಪಡೆಯಬಹುದು, ಅಭಿವೃದ್ಧಿ ಯಾಕೆ ಎಂಬುದು ಅವರ ಆಲೋಚನೆ. ಕನ್ನಡಿಗರು ಈಗಲಾದರೂ ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದ್ದಾರೆ.

ಹೆದ್ದಾರಿಗೆ ಅನುದಾನ, ಕರ್ನಾಟಕವನ್ನು ಮರೆತ ಕೇಂದ್ರ

ಹೆದ್ದಾರಿಗೆ ಅನುದಾನ, ಕರ್ನಾಟಕವನ್ನು ಮರೆತ ಕೇಂದ್ರ

ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂನಂಥ ರಾಜ್ಯಗಳಿಗೆ ಪ್ರತ್ಯೇಕವಾಗಿ ಹೆದ್ದಾರಿಗಳಿಗೆ ಅನುದಾನ ಬಿಡುಗಡೆ ಮಾಡಿರುವ ಒಕ್ಕೂಟ ಸರ್ಕಾರ 25 ಜನ ಲೋಕಸಭಾ ಸದಸ್ಯರನ್ನು ಆಯ್ಕೆ ಮಾಡಿರುವ ಕರ್ನಾಟಕವನ್ನು ಮರೆತಿರುವುದು ಕನ್ನಡಿಗರಿಗೆ ಎಸಗಿದ ದ್ರೋಹ.

ಬಂದರುಗಳ ನಿರ್ಮಾಣ

ಬಂದರುಗಳ ನಿರ್ಮಾಣ

ಮೀನುಗಾರಿಕೆ ಕೂಡ ಕರ್ನಾಟಕದ ಒಂದು ಬಹುಮುಖ್ಯವಾದ ಉದ್ಯಮ. ಬಜೆಟ್ ನಲ್ಲಿ ಮೀನುಗಾರಿಕೆಗೆ ಸಂಬಂಧಿಸಿದಂತೆ 7 ಮುಖ್ಯವಾದ ಮೀನುಗಾರಿಕೆಯ ಬಂದರುಗಳನ್ನು ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಲಾಗಿದ್ದು ಕರ್ನಾಟಕವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ.

ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ

ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ

ಪೆಟ್ರೋಲ್/ಡೀಸೆಲ್ ಬೆಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಸಾಮಾನ್ಯ ಜನರು ತೊಂದರೆಗೊಳಗಾಗುತ್ತಿದ್ದಾರೆ. ಪೆಟ್ರೋಲ್/ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸುವ ಬಗ್ಗೆ ನಿರೀಕ್ಷೆ ಇರಿಸಿಕೊಳ್ಳಲಾಗಿತ್ತು. ಈ ನಿರೀಕ್ಷೆಯನ್ನೂ ಹುಸಿಗೊಳಿಸಲಾಗಿದೆ.

Recommended Video

ಅಸಮಾಧಾನ ಶಮನಕ್ಕೆ ಸಿಎಂ ಬಿಎಸ್‌ವೈ ಭೋಜನಕೂಟ, ಹಲವರು ಶಾಸಕರು ಗೈರು | Oneindia Kannada
ನಮ್ಮ ಮೆಟ್ರೋ ಯೋಜನೆ

ನಮ್ಮ ಮೆಟ್ರೋ ಯೋಜನೆ

ಬೆಂಗಳೂರಿನ ನಮ್ಮ ಮೆಟ್ರೋ ಯೋಜನೆಯ 2‌A ಮತ್ತು 2‌B ಯೋಜನೆಗಳಿಗೆ ಎಷ್ಟು ಅನುದಾನ ನೀಡಲಾಗುವುದು ಎನ್ನುವುದನ್ನು ಸ್ಪಷ್ಟವಾಗಿ ತಿಳಿಸಿಲ್ಲದಿರುವುದು ಎದ್ದುಕಾಣಿಸುತ್ತಿದೆ. ಸದ್ಯದಲ್ಲೇ ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಹೆಚ್ಚು ಹೆಚ್ಚು ಅನುದಾನ ನೀಡಿರುವುದು ಸ್ಪಷ್ಟವಾಗಿ ಕಾಣಿಸುತ್ತಿದೆ. ಆದರೆ ಕರ್ನಾಟಕದಲ್ಲಿ ಚುನಾವಣೆ ಇದ್ದರೂ ಇಲ್ಲದೇ ಇದ್ದರೂ ಅನುದಾನ ನೀಡುವುದಿಲ್ಲ. ಕನ್ನಡಿಗರೆಂದರೆ ಅಷ್ಟು ಕೇವಲ ತಾತ್ಸಾರ ಒಕ್ಕೂಟ ಸರ್ಕಾರಕ್ಕೆ.

English summary
A series of injustices are continuing for Karnataka, with the government's budget for 2021-22 showing that there will be even fewer Budget compared to last year Says Karnataka Rakshana Vedike President TA Narayana Gowda.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X