ಕರ್ನಾಟಕ ರಾಷ್ಟ್ರ ಸಮಿತಿ "ಗಾಂಧಿಗಿರಿ" ಹೋರಾಟಕ್ಕೆ ಹೆದರಿದ ಪೊಲೀಸ್ !
ಬೆಂಗಳೂರು, ಮಾರ್ಚ್ 19: ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಭ್ರಷ್ಟಾಚಾರ ವಿರುದ್ಧ ಕರ್ನಾಟಕ ರಾಷ್ಟ್ರ ಸಮಿತಿ ನಡೆಸಿದ "ಗಾಂಧಿಗಿರಿ" ಹೋರಾಟ ಸಾಮಾಜಿಕ ಜಾಲ ತಾಣದಲ್ಲಿ ಸಂಚಲನ ಮೂಡಿಸಿದೆ. ಭೂ ವ್ಯವಹಾರ ಕುದುರಿಸಲು ವ್ಯಕ್ತಿಯೊಬ್ಬರನ್ನು ಎರಡು ದಿನ ಅಕ್ರಮ ಬಂಧನದಲ್ಲಿದ್ದ ಕೆಂಪೇಗೌಡ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಚೇತನ್ ಕುಮಾರ್ ವಿರುದ್ಧ ಸಾಮಾಜಿಕ ಜಾಲ ತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ನಡೆದ ಗಾಂಧಿಗಿರಿ ಹೋರಾಟದ ವಿಡಿಯೋ ವೈರಲ್ ಆಗಿದೆ.
ಎರಡು ದಶಕದಿಂದ ವಾಸವಿದ್ದ ಕುಟುಂಬವನ್ನು ಹೆದರಿಸಿ ಕೆಂಪೇಗೌಡ ಪೊಲೀಸ್ ಠಾಣೆ ಪೊಲೀಸರು ಹೊರ ಹಾಕಿದ್ದಾರೆ. ಮನೆ ಮಾಲೀಕ ಎನ್ನಲಾದ ರಮೇಶ್ ಎಂಬಾತನನ್ನು ಪೊಲೀಸರೇ ವಶಕ್ಕೆ ಪಡೆದು ಎರಡು ದಿನ ಅಕ್ರಮ ಬಂಧನದಲ್ಲಿಟ್ಟಿದ್ದಾರೆ. ಈ ಮೂಲಕ ಮನೆಯೊಂದನ್ನು ಖಾಲಿ ಮಾಡಿಸುವ ಪ್ರಯತ್ನಕ್ಕೆ ಕೆಂಪೇಗೌಡ ನಗರ ಪೊಲೀಸರು ಕೈ ಹಾಕಿದ್ದರು ಎನ್ನಲಾಗಿದೆ. ಪೊಲೀಸ್ ಠಾಣೆಗೆ ವಕೀಲರೊಬ್ಬರನ್ನು ಕರೆಸಿ, ಬಂಧನದಲ್ಲಿದ್ದ ರಮೇಶ್ ಜತೆ ಮಾತುಕತೆ ನಡೆಸಲು ಒತ್ತಡ ಹಾಕಿರುವ ಆರೋಪ ಕೇಳಿ ಬಂದಿತ್ತು. ಮಾತ್ರವಲ್ಲದೇ ಪೊಲೀಸರೇ ಸ್ವತಃ ಲಾರಿ ಬಾಡಿಗೆಗೆ ಪಡೆದು ಮನೆಯಲ್ಲಿದ್ದ ಸಾಮಾನು ಸಾಗಿಸಲು ಪ್ರಯತ್ನ ಮಾಡಿದ್ದರು.

Recommended Video
ಭೂ ವ್ಯಾಜ್ಯಗಳಲ್ಲಿ ಪೊಲೀಸರು ಮೂಗು ತೋರಿಸಬಾರದು ಎಂಬ ನಿಯಮವಿದ್ದರೂ ಮನೆ ಖಾಲಿ ಮಾಡಿಸಲು ಯತ್ನಿಸಿದ ಕೆಂಪೇಗೌಡನಗರ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಚೇತನ್ ಕುಮಾರ್ ಅವರ ಅಮಾನತಿಗೆ ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪೊಲೀಸ್ ಠಾಣೆ ಮುಂದೆ ಕೂತು ಅಮಾನತಿಗೆ ಆಗ್ರಹಿಸಿದರು. ಕರ್ನಾಟಕ ರಾಷ್ಟ್ರ ಸಮಿತಿ ಹೋರಾಟದ ವಿಡಿಯೋ ಇದೀಗ ಬೆಂಗಳೂರಿನಾದ್ಯಂತ ವೈರಲ್ ಆಗಿದೆ. ಪೊಲೀಸರ ಕಾರ್ಯ ಶೈಲಿಗೆ ಬಗ್ಗೆ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿವೆ. ಘಟನಾ ಸ್ಥಳಕ್ಕೆ ಎಸಿಪಿ ಆಗಮಿಸಿ ಶಿಸ್ತು ಕ್ರಮದ ಭರವಸೆ ನೀಡಿದ ಬಳಿಕ ಹೋರಾಟ ಕೈ ಬಿಡಲಾಗಿದೆ.
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications