ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪುನೀತ್‌ಗೆ ಕರ್ನಾಟಕ ರತ್ನ; ಶೀಘ್ರದಲ್ಲೇ ದಿನಾಂಕ ಘೋಷಣೆ

|
Google Oneindia Kannada News

ಬೆಂಗಳೂರು, ಮಾರ್ಚ್ 28; "ಡಾ. ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಸರ್ಕಾರ ಘೋಷಿಸಿದೆ. ಅವರ ಕುಟುಂಬದವರ ಬಳಿ ಮಾತನಾಡಿ ಪ್ರಶಸ್ತಿ ಪ್ರದಾನ ಮಾಡುವ ದಿನಾಂಕವನ್ನು ನಿಗದಿ ಮಾಡಲಾಗುವುದು" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಭಾನುವಾರ ಬಿಬಿಎಂಪಿ ನೌಕರರ ಕನ್ನಡ ಸಂಘ ಡಾ. ರಾಜ್ ಕುಮಾರ್ ಗಾಜಿನ ಮನೆ, ಬಿಬಿಎಂಪಿ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಡಾ. ಪುನೀತ್ ರಾಜ್‍ಕುಮಾರ್ ಕಂಚಿನ ಪುತ್ಥಳಿಯ ಅನಾವರಣ ಹಾಗೂ ಗಂಧದಗುಡಿ ಉದ್ಯಾನವನವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಿದರು.

ಪುನೀತ್‌ಗೆ ಕರ್ನಾಟಕ ರತ್ನ ಪ್ರಶಸ್ತಿ; ಇದುವರೆಗೂ ಪ್ರಶಸ್ತಿ ಪಡೆದ ಸಾಧಕರುಪುನೀತ್‌ಗೆ ಕರ್ನಾಟಕ ರತ್ನ ಪ್ರಶಸ್ತಿ; ಇದುವರೆಗೂ ಪ್ರಶಸ್ತಿ ಪಡೆದ ಸಾಧಕರು

ಬಳಿಕ ಮಾತನಾಡಿದ ಅವರು, "ಪುನೀತ್ ರಾಜ್‍ಕುಮಾರ್ ಅವರ ಪ್ರತಿಭೆ ಹಾಗೂ ಮಾನವೀಯ ಗುಣಗಳಿಗೆ ತಕ್ಕ ರೀತಿಯಲ್ಲಿ ಅರ್ಥಪೂರ್ಣವಾಗಿ ದೊಡ್ಡ ಪ್ರಮಾಣದಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಮಾಡಲು ನೀಡಲು ಚಿಂತನೆ ಮಾಡಿದ್ದು, ತಯಾರಿಯನ್ನೂ ಮಾಡಲಾಗುತ್ತಿದೆ" ಎಂದು ತಿಳಿಸಿದರು.

Video; ಲೈಫ್ ಬಾಯ್ ಸೋಪ್‌ನಲ್ಲಿ ಮೂಡಿದ ಪುನೀತ್ ಚಿತ್ರ Video; ಲೈಫ್ ಬಾಯ್ ಸೋಪ್‌ನಲ್ಲಿ ಮೂಡಿದ ಪುನೀತ್ ಚಿತ್ರ

"ಪುನೀತ್ ರಾಜ್‍ಕುಮಾರ್ ನಿಜವಾಗಿಯೂ ನಮ್ಮ ಕರ್ನಾಟಕದ ರತ್ನ. ಈ ರತ್ನದ ಪುತ್ಥಳಿಯನ್ನು ಬಿಬಿಎಂಪಿ ಕನ್ನಡ ನೌಕರರ ಸಂಘ ಅನಾವರಣ ಮಾಡಿರುವುದು ನಿಜವಾಗಿಯೂ ಪುನೀತ್ ರಾಜ್ ಕುಮಾರ್ ಅವರ ಬಗೆಗಿನ ಪ್ರೀತಿ ಬಹಳ ದೊಡ್ಡದು. ಅದರಲ್ಲಿ ಪ್ರೀತಿ, ವಿಶ್ವಾಸ, ಅಭಿಮಾನದ ಸಂಕೇತವಿದೆ" ಎಂದು ಬಣ್ಣಿಸಿದರು.

ಬೆಂಗಳೂರಿನ ಈ ರಸ್ತೆ ಇನ್ನು ಪುನೀತ್ ರಾಜ್‍ಕುಮಾರ್ ರಸ್ತೆ ಬೆಂಗಳೂರಿನ ಈ ರಸ್ತೆ ಇನ್ನು ಪುನೀತ್ ರಾಜ್‍ಕುಮಾರ್ ರಸ್ತೆ

ಪುನೀತ್ ಕನ್ನಡದ ಉಸಿರು

ಪುನೀತ್ ಕನ್ನಡದ ಉಸಿರು

"ಪುನೀತ್ ರಾಜ್ ಕುಮಾರ್ ಕಾಲವಾದ ಸಂದರ್ಭದಲ್ಲಿ ಕುಟುಂಬ ಅತ್ಯಂತ ಮುತ್ಸದಿತನದಿಂದ ನಡೆದುಕೊಂಡಿದೆ. ಇದನ್ನು ಎಂದಿಗೂ ಮರೆಯಲಾಗದು. ಕಷ್ಟದಲ್ಲಿ ಸಂಯಮವನ್ನು ಉಳಿಸಿಕೊಳ್ಳುವುದು ಬಹಳ ಕಷ್ಟ. ಸಂತುಲನದ ಭಾವ, ಚಿಂತನೆ, ನಡವಳಿಕೆ ಬಹಳ ಮುಖ್ಯ. ಇದು ಅವರ ಕುಟುಂಬದವರು ಪ್ರಬುದ್ಧತೆಯನ್ನು ತೋರುತ್ತದೆ" ಎಂದು ಮುಖ್ಯಮಂತ್ರಿಗಳು ಹೇಳಿದರು.

ಪುನೀತ್ ಕನ್ನಡದ ಉಸಿರು; "ಪುನೀತ್ ರಾಜ್‍ಕುಮಾರ್ ಕೇವಲ ಹೆಸರಾಗಿ ಉಳಿದಿಲ್ಲ. ಪ್ರತಿಯೊಬ್ಬ ಕನ್ನಡಿಗನ ಉಸಿರಾಗಿ ಉಳಿದಿದ್ದಾರೆ. ಒಬ್ಬ ಮನುಷ್ಯ ಹೇಗೆ ಬದುಕಿದ ಎನ್ನುವುದನ್ನು ಅವರು ಇಲ್ಲದೇ ಇರುವಾಗ ತಿಳಿಯುತ್ತದೆ. ಅತ್ಯಂತ ಸಣ್ಣ ವಯಸ್ಸಿನಲ್ಲಿ ನಮ್ಮನ್ನು ನಗುನಗುತ್ತಲೇ ಬಿಟ್ಟು ಹೋಗಿದ್ದಾರೆ. ಕನ್ನಡಿಗರ ಪ್ರತಿಯೊಂದು ಕುಟುಂಬದಲ್ಲಿ ತಮ್ಮ ಕುಟುಂಬದ ಸದಸ್ಯನೊಬ್ಬನನ್ನು ಕಳೆದುಕೊಂಡ ಭಾವನೆ ಇಡೀ ಕರ್ನಾಟದಲ್ಲಿ ಆವರಿಸಿದೆ. ಯಾದಗಿರಿ, ಹಾವೇರಿ, ಮೈಸೂರು ಹೀಗೆ ಕರ್ನಾಟಕದ ಮೂಲೆ ಮೂಲೆಗೆ ಹೋದಲ್ಲಿ ಅವರ ಭಾವಚಿತ್ರಗಳನ್ನು ಪೂಜಿಸುವುದನ್ನು ನಾವು ಕಾಣುತ್ತೇವೆ" ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ನಮ್ಮ ನಡುವೆಯೇ ಇದ್ದಾರೆ

ನಮ್ಮ ನಡುವೆಯೇ ಇದ್ದಾರೆ

"ಅವರ ಸಮಾಧಿಗೆ ಇಂದಿಗೂ ಅವರ ಅಭಿಮಾನಿಗಳ ದಂಡು ಬರುವುದನ್ನು ನೋಡಿದಾಗ ಆಶ್ಚರ್ಯವಾಗುತ್ತದೆ. ಎಷ್ಟು ಅದ್ಭುತವಾದ ಪ್ರೀತಿ ವಿಶ್ವಾಸವನ್ನು ಪುನೀತ್ ರಾಜ್‍ಕುಮಾರ್ ಗಳಿಸಿದ್ದರು ಎಂದು ಸ್ಪಷ್ಟವಾಗಿ ಗೊತ್ತಾಗುತ್ತದೆ. ಪುನೀತ್ ರಾಜ್‍ಕುಮಾರ್ ನಮ್ಮ ನಡುವೆ ಇದ್ದಾರೆ ಎಂಬ ಭಾವನೆಯಿಂದ ನಮ್ಮ ಎಲ್ಲಾ ಕಾರ್ಯಕ್ರಮಗಳನ್ನು ಮಾಡುತ್ತಿದ್ದೇವೆ. ಅವರನ್ನು ನಾವು ಕಳೆದುಕೊಂಡಿಲ್ಲ. ಆದರೆ ಅವರಿಂದ ಬಹಳಷ್ಟನ್ನು ಪಡೆದುಕೊಂಡಿದ್ದೇವೆ" ಎಂದರು.

ಆಕರ್ಷಕ ನಗು; "ಅವರ ನಗು ಕನ್ನಡಿಗರನ್ನಷ್ಟೇ ಅಲ್ಲ ಎಲ್ಲಾ ಭಾಷಿಕರನ್ನು ಆಕರ್ಷಸಿದೆ. ಅವರ ಆತ್ಮೀಯತೆ ಎಲ್ಲಾ ಭಾಷೆಯ ಮೇರು ನಟರನ್ನು ಸೆಳೆದಿದೆ. ಅವರ ಬಗ್ಗೆ ಅಭಿಮಾನದಿಂದ ಮಾತನಾಡಿದಾಗ ಅವರು ಗಳಿಸಿದ್ದ ಸ್ನೇಹ, ವಿಶ್ವಾಸವನ್ನು ತೋರಿಸುತ್ತದೆ. ಅತ್ಯಂತ ಸಣ್ಣ ವಯಸ್ಸಿನಲ್ಲಿಯೇ ನಿರರ್ಗಳವಾಗಿ ಅಭಿನಯಿಸಬಲ್ಲವರಾಗಿದ್ದರು. ನನ್ನ ನಟನೆಗೆ ನಮ್ಮ ತಂದೆಯೇ ಕಾರಣ. ಪಾತ್ರದೊಳಗೆ ಹೋಗಿ ನಟನೆ ಮಾಡು. ತಂದೆ ಎದುರು ಮಾಡುತ್ತಿದ್ದೇನೆ ಎನ್ನುವ ಭಾವ ಇರಬಾರದು ಎಂದು ಅವರ ತಂದೆ ಹೇಳಿಕೊಟ್ಟಿದ್ದರು" ಪುನೀತ್ ಹೇಳಿದ್ದನ್ನು ಮುಖ್ಯಮಂತ್ರಿಗಳು ನೆನಪಿಸಿಕೊಂಡರು.

ಮುಗ್ದತೆ ಉಳಿದುಕೊಂಡಿತ್ತು

ಮುಗ್ದತೆ ಉಳಿದುಕೊಂಡಿತ್ತು

"ಮೊದಲ ಚಿತ್ರದಿಂದ ಕೊನೆ ಚಿತ್ರದವರೆಗೂ ಪುನೀತ್ ಅವರ ನಟನೆಯಲ್ಲಿ ಮುಗ್ದತೆ ಉಳಿದುಕೊಂಡಿತ್ತು. ಮುಗ್ಧತೆ ದೇವರು ಕೊಡುವ ಕಾಣಿಕೆ. ಎಲ್ಲರಿಗೂ ಅದು ಬರುವುದಿಲ್ಲ. ಕೆಲವೇ ಕೆಲವರಿಗೆ ಅದನ್ನು ಕಾಪಾಡಿಕೊಂಡು ಹೋಗುವುದು ಬರುತ್ತದೆ. ಕನ್ನಡ ಚಿತ್ರರಂಗದಲ್ಲಿ ಮುಗ್ಧತೆಯನ್ನು ಕಾಪಾಡಿಕೊಂಡವರು ಡಾ. ರಾಜ್‍ಕುಮಾರ್ ಹಾಗೂ ಪುನೀತ್ ರಾಜ್ ಕುಮಾರ್ ಇಬ್ಬರೇ" ಎಂದರು.

2021ರ ಅಕ್ಟೋಬರ್ 29ರಂದು ನಟ ಪುನೀತ್ ರಾಜ್‌ಕುಮಾರ್ ಹೃದಯಾಘಾತದಿಂದಾಗಿ ಮೃತಪಟ್ಟಿದ್ದರು. ಅಂದಿನಿಂದಲೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅವರ ಹೆಸರಿನಲ್ಲಿ ಹಲವಾರು ಕಾರ್ಯಕ್ರಮಗಳು ನಡೆಯುತ್ತಿವೆ.

Recommended Video

ಒಂದೂ ಪಂದ್ಯವನ್ನ ಗೆದ್ದಿಲ್ಲಾ ಇವ್ರು !! | Oneindia Kannada
ಕರ್ನಾಟಕ ರತ್ನ ಘೋಷಣೆ

ಕರ್ನಾಟಕ ರತ್ನ ಘೋಷಣೆ

ನವೆಂಬರ್ 16ರಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ದಿ. ಪುನೀತ್ ರಾಜ್‌ಕುಮಾರ್ ಸ್ಮರಣಾರ್ಥ 'ಪುನೀತ ನಮನ' ಕಾರ್ಯಕ್ರಮ ಆಯೋಜನೆ ಮಾಡಿತ್ತು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಾಲ್ಗೊಂಡಿದ್ದರು. ಪುನೀತ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವುದಾಗಿ ಘೋಷಣೆ ಮಾಡಿದ್ದರು.

ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪುನೀತ್‌ ರಾಜ್‌ಕುಮಾರ್‌ಗೆ ನೀಡಲಾಗುತ್ತಿದೆ. ಕರ್ನಾಟಕ ಸರ್ಕಾರ ನೀಡುವ ಅತ್ಯುನ್ನತ ಪ್ರಶಸ್ತಿ ಇದಾಗಿದೆ. ಪ್ರಶಸ್ತಿ 50 ಗ್ರಾಂ ತೂಕದ ಚಿನ್ನದ ಪದಕ, ಸನ್ಮಾನ ಪತ್ರ, ನೆನಪಿನ ಕಾಣಿಕೆ ಮತ್ತು ಶಾಲನ್ನು ಒಳಗೊಂಡಿದೆ.

English summary
Karnataka chief minister Basavaraj Bommai said that govt will fix date for Karnataka Ratna award function for late Kannada actor Puneeth Rajkumar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X