ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking; ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ, ಸಂಚಾರ ಮಾರ್ಗ ಬದಲು

|
Google Oneindia Kannada News

ಬೆಂಗಳೂರು, ಅಕ್ಟೋಬರ್ 30; ಮಂಗಳವಾರ ಸಂಜೆ 4 ಗಂಟೆಗೆ ಡಾ. ಪುನೀತ್‌ ರಾಜ್‌ಕುಮಾರ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ. ಈ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ನಡೆದಿದೆ.

ಮಂಗಳವಾರ ಸಂಜೆ 4 ಗಂಟೆಗೆ ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪುನೀತ್‌ ರಾಜ್‌ಕುಮಾರ್‌ಗೆ ಮರಣೋತ್ತರವಾಗಿ ಕರ್ನಾಟಕ ಸರ್ಕಾರದಿಂದ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗುತ್ತಿದೆ.

ಪುನೀತ್‌ಗೆ ಕರ್ನಾಟಕ ರತ್ನ ಪ್ರಶಸ್ತಿ; ಇದುವರೆಗೂ ಪ್ರಶಸ್ತಿ ಪಡೆದ ಸಾಧಕರುಪುನೀತ್‌ಗೆ ಕರ್ನಾಟಕ ರತ್ನ ಪ್ರಶಸ್ತಿ; ಇದುವರೆಗೂ ಪ್ರಶಸ್ತಿ ಪಡೆದ ಸಾಧಕರು

ಬೆಂಗಳೂರು ಸಂಚಾರಿ ಪೊಲೀಸರು ಕಾರ್ಯಕ್ರಮದ ಹಿನ್ನಲೆಯಲ್ಲಿ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಿದ್ದಾರೆ. ವಿಧಾನಸೌಧದ ಮುಂಭಾಗದಲ್ಲಿ ಕಾರ್ಯಕ್ರಮ ನಡೆಯುವುದರಿಂದ ವಿಧಾನಸೌಧ-ಹೈಕೋರ್ಟ್ ನಡುವಿನ ರಸ್ತೆ ಸಂಪೂರ್ಣ ಬಂದ್ ಆಗಿರುತ್ತದೆ.

ರಾಜ್ಯೋತ್ಸವ, ಪುನೀತ್‌ಗೆ ಕರ್ನಾಟಕ ರತ್ನ ಸಿದ್ಧತೆ ಕುರಿತು ಸಿಎಂ ವಿವರಣೆ ರಾಜ್ಯೋತ್ಸವ, ಪುನೀತ್‌ಗೆ ಕರ್ನಾಟಕ ರತ್ನ ಸಿದ್ಧತೆ ಕುರಿತು ಸಿಎಂ ವಿವರಣೆ

Karnataka Ratna Award Function On November 1st Traffic Diversions

ಮಂಗಳವಾರ ಮಧ್ಯಾಹ್ನ 1 ಗಂಟೆಯ ಬಳಿಕ ಕೆ. ಆರ್. ಸರ್ಕಲ್, ವಿಧಾನಸೌಧ, ರಾಜಭವನ ಸುತ್ತಮುತ್ತಲ ಪ್ರದೇಶಗಳಲ್ಲಿ ಸಂಚಾರ ನಡೆಸುವ ಜನರು ಸಂಚಾರ ಮಾರ್ಗ ಬದಲಾವಣೆ ಬಗ್ಗೆ ತಿಳಿಯುವುದು ಅಗತ್ಯವಾಗಿದೆ.

ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭ ಆಯೋಜಿಸಿರುವುದರಿಂದ ಸುಗಮ ಸಂಚಾರ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೆಳಕಂಡಂತೆ ಸಂಚಾರ ವ್ಯವಸ್ಥೆಯನ್ನು ಮಾಡಲಾಗಿರುತ್ತದೆ ಎಂದು ಬೆಂಗಳೂರು ಪೊಲೀಸರು ಟ್ವೀಟ್ ಮಾಡಿದ್ದಾರೆ.

ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ರಜನಿಕಾಂತ್ ಅತಿಥಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ರಜನಿಕಾಂತ್ ಅತಿಥಿ

ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭದ ಮುಖ್ಯ ವೇದಿಕೆಯಲ್ಲಿ 20 ಗಣ್ಯರಿಗೆ ಮಾತ್ರ ಅವಕಾಶವಿದೆ. ವೇದಿಕೆ ಮುಂಭಾಗದಲ್ಲಿ 500 ವಿಐಐಪಿಗಳ ಆಸನಕ್ಕೆ ವ್ಯವಸ್ಥೆ ಮಾಡಲಾಗಿದೆ. ಜನರು ವಿಧಾನಸೌಧ ಮುಂಭಾಗದ ರಸ್ತೆಯಲ್ಲಿ ನಿಂತು ಕಾರ್ಯಕ್ರಮ ವೀಕ್ಷಿಸಬಹುದಾಗಿದೆ.

ಸಾವಿರಾರು ಪುನೀತ್ ರಾಜ್‌ಕುಮಾರ್ ಅಭಿಮಾನಿಗಳು ಕಾರ್ಯಕ್ರಮಕ್ಕೆ ಆಗಮಿಸುತ್ತಾರೆ. ಈಗಾಗಲೇ 7 ಸಾವಿರ ಪಾಸ್‌ಗಳನ್ನು ವಿತರಣೆ ಮಾಡಲಾಗಿದೆ. ಪಾಸ್ ಇದ್ದವರಿಗೆ ಮಾತ್ರ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಆಗಮಿಸಬಹುದು.

ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭಕ್ಕೆ ನಟ ರಜನಿಕಾಂತ್, ಜ್ಯೂನಿಯರ್ ಎನ್‌ಟಿಆರ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಇಬ್ಬರೂ ಅತಿಥಿಗಳ ಸ್ವಾಗತಕ್ಕಾಗಿ ಸಚಿವರಿಗೆ ಉಸ್ತುವಾರಿ ವಹಿಸಲಾಗಿದೆ.

English summary
Karnataka Ratna award for Puneeth Rajkumar on November 1st. Function will be held at Vidhana Soudha Bengaluru. Traffic diversions details.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X