ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

54 ಬಾಕ್ಸ್, 6.48 ಲಕ್ಷ ಡೋಸ್ ಲಸಿಕೆ ಎಲ್ಲವೂ ಸುರಕ್ಷಿತ : ಸುಧಾಕರ್

|
Google Oneindia Kannada News

ಬೆಂಗಳೂರು, ಜನವರಿ 12: ರಾಜ್ಯಕ್ಕೆ 54 ಬಾಕ್ಸ್ ಗಳಲ್ಲಿ 6.48 ಲಕ್ಷ ಡೋಸ್ ಲಸಿಕೆ ಬಂದಿದೆ ಎಲ್ಲವೂ ಸುರಕ್ಷಿತವಾಗಿವೆ ಎಂದು ಆನಂದರಾವ್ ವೃತ್ತದ ಸಮೀಪ ಇರುವ ಕೊರೊನಾ ಲಸಿಕೆ ಸಂಗ್ರಹ ಕೇಂದ್ರದ ಬಳಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

6.48 ಲಕ್ಷ ಡೋಸ್ 54 ಬಾಕ್ಸ್ ಗಳಲ್ಲಿ ಬಂದಿದ್ದು, ಉತ್ತಮವಾಗಿ ಪ್ಯಾಕೇಜ್ ಮಾಡಿ ತರಲಾಗಿದೆ. ನಿರ್ದಿಷ್ಟ ತಾಪಮಾನದಲ್ಲಿ ತಂದ ಲಸಿಕೆಯನ್ನು ಸಂಗ್ರಹ ಕೇಂದ್ರದಲ್ಲಿ ಇಡಲಾಗಿದೆ. ನಾಳೆ(ಜನವರಿ 13) ಬೆಳಗಾವಿಗೆ 1.40 ಲಕ್ಷ ಡೋಸ್ ಲಸಿಕೆ ಬರಲಿದೆ. ಎಂದರು.

16 ಲಕ್ಷ ಕೊರೊನಾ ಯೋಧರಿಗೆ 2 ಡೋಸ್ ಲಸಿಕೆ: ಸುಧಾಕರ್16 ಲಕ್ಷ ಕೊರೊನಾ ಯೋಧರಿಗೆ 2 ಡೋಸ್ ಲಸಿಕೆ: ಸುಧಾಕರ್

ಇದಕ್ಕಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಆತ್ಮನಿರ್ಭರ ಭಾರತ ಪರಿಕಲ್ಪನೆಯಡಿ ಪ್ರಧಾನಿ ಮೋದಿಯವರು ಕಂಪನಿಗಳಿಗೆ ಸಹಕಾರ ನೀಡಿರುವುದರಿಂದ ಕೇವಲ 210 ರೂ.ಗೆ ಲಸಿಕೆ ದೊರೆಯುತ್ತಿದೆ. ಕೊರೊನಾ ನಿಯಂತ್ರಣಕ್ಕೆ ಶ್ರಮಿಸಿದ ಎಲ್ಲ ಸಿಬ್ಬಂದಿ ಜನವರಿ 16 ರಿಂದ ಆರಂಭವಾಗುವ ಲಸಿಕೆ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು. ಇದಕ್ಕಾಗಿ ಮಾರ್ಗಸೂಚಿ ನೀಡಲಾಗುವುದು ಎಂದರು.

ಇನ್ನೂ ನಾಲ್ಕು ಕಂಪನಿಗಳು ಲಸಿಕೆ ತಯಾರಿಸಲಿವೆ

ಇನ್ನೂ ನಾಲ್ಕು ಕಂಪನಿಗಳು ಲಸಿಕೆ ತಯಾರಿಸಲಿವೆ

ಇನ್ನೂ ನಾಲ್ಕು ಕಂಪನಿಗಳು ಲಸಿಕೆ ತಯಾರಿಸಲಿವೆ. ಅದು ಬಂದ ಬಳಿಕ ಹೆಚ್ಚು ಜನರಿಗೆ ಲಸಿಕೆ ನೀಡಲು ಸಾಧ್ಯವಾಗುತ್ತದೆ. ಲಸಿಕೆಗಳನ್ನು ಸುರಕ್ಷಿತವಾಗಿ ತಂದು ದಾಸ್ತಾನು ಮಾಡುವ ಅನುಭವ ನಮ್ಮ ಸಿಬ್ಬಂದಿಗಿದೆ. ಆರೋಗ್ಯ ಇಲಾಖೆಯ ಅಧಿಕಾರಿಗಳ ಕಾರ್ಯಕ್ಷಮತೆ ಮೇಲೆ ಯಾರಿಗೂ ಅಪನಂಬಿಕೆ ಬೇಡ. ಎಲ್ಲ ಪ್ರಕ್ರಿಯೆಗಳು ನಿಯಮದಂತೆ ನಡೆಯುತ್ತಿವೆ ಎಂದರು.

2 ಲಕ್ಷಕ್ಕೂ ಹೆಚ್ಚು ಸಿಬ್ಬಂದಿಗೆ ಲಸಿಕೆ ನೀಡುವ ತರಬೇತಿ

2 ಲಕ್ಷಕ್ಕೂ ಹೆಚ್ಚು ಸಿಬ್ಬಂದಿ ಲಸಿಕೆ ನೀಡಲಿದ್ದು, ಎಲ್ಲರಿಗೂ ತರಬೇತಿ ನೀಡಲಾಗಿದೆ. ಅಡ್ಡಪರಿಣಾಮಗಳು ಬರಲು ಸಾಧ್ಯವೇ ಇಲ್ಲ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಲಸಿಕೆ ನೀಡುವ ಸ್ಥಳದಲ್ಲಿ ನಿಗಾ ಇರಿಸಲು ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಲಸಿಕೆ ಬಾಕ್ಸ್ ಬಹಳ ಭಾರವಾಗಿದ್ದು, ಸಿಬ್ಬಂದಿಯೊಬ್ಬರ ಕೈ ತಪ್ಪಿ ಸ್ವಲ್ಪ ಜಾರಿದೆ. ಇದರಿಂದ ಏನೂ ಸಮಸ್ಯೆಯಾಗಿಲ್ಲ. ಆತಂಕ ಬೇಡ ಎಂದು ಸ್ಪಷ್ಟಪಡಿಸಿದರು.

ಕೋವಿಶೀಲ್ಡ್ ಲಸಿಕೆಗೆ ಈಗಾಗಲೇ ಪರವಾನಗಿ ನೀಡಿದೆ

ಕೋವಿಶೀಲ್ಡ್ ಲಸಿಕೆಗೆ ಈಗಾಗಲೇ ಪರವಾನಗಿ ನೀಡಿದೆ

ಡ್ರಗ್ಸ್ ಕಂಟ್ರೋಲ್ ಜನರಲ್ ಆಫ್ ಇಂಡಿಯಾ ಕೋವಿಶೀಲ್ಡ್ ಲಸಿಕೆಗೆ ಈಗಾಗಲೇ ಪರವಾನಗಿ ನೀಡಿದೆ. ಕೇಂದ್ರ ಸರ್ಕಾರ 1.1 ಕೋಟಿ ಡೋಸ್ ಲಸಿಕೆ ಖರೀದಿ ಮಾಡಿದೆ. ಒಂದು ಡೋಸ್ ಗೆ 210 ರೂ. ನಿಗದಿ ಮಾಡಿದ್ದು, ಬೇರೆ ಯಾವ ದೇಶವೂ ಇಷ್ಟು ಕಡಿಮೆ ದರ ನಿಗದಿ ಮಾಡಿಲ್ಲ. ಸೀರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ ಲಸಿಕೆ ಖರೀದಿಸಲಾಗಿದೆ. ಲಸಿಕೆ ಖರೀದಿಗೆ ಒಟ್ಟು 231 ಕೋಟಿ ರೂ. ಖರ್ಚು ಮಾಡಲಾಗಿದೆ.

ಎಲ್ಲವೂ ಮಾರ್ಗಸೂಚಿ ಪ್ರಕಾರ ನಡೆಯಲಿದೆ

ಎಲ್ಲವೂ ಮಾರ್ಗಸೂಚಿ ಪ್ರಕಾರ ನಡೆಯಲಿದೆ

ಪ್ರತಿ ಡೋಸ್ ನಲ್ಲಿ 0.5 ಎಂಎಲ್ ಪ್ರಮಾಣವಿರುತ್ತದೆ. ಒಂದು ವೈಲ್ ನಲ್ಲಿ 10 ಮಂದಿಗೆ ಲಸಿಕೆ ನೀಡಬಹುದು. ಮೊದಲ ಡೋಸ್ ಪಡೆದ 28 ದಿನಗಳ ಬಳಿಕ ಎರಡನೇ ಡೋಸ್ ಪಡೆಯಬೇಕು. ಲಸಿಕೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಉತ್ಪತ್ತಿಯಾಗುತ್ತದೆ. ಇದು ಸಂಪೂರ್ಣ ಸುರಕ್ಷಿತ ಎಂದರು.

ಈ ಎಲ್ಲ ಪ್ರಕ್ರಿಯೆ ಕೇಂದ್ರ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಾರ ನಡೆಯಲಿದೆ. ಲಸಿಕೆ ಪಡೆದ ಬಳಿಕ ಅವರ ಮೇಲೆ ಕೆಲ ಸಮಯದವರೆಗೆ ಸೂಕ್ಷ್ಮವಾಗಿ ನಿಗಾ ಇರಿಸಲಾಗುತ್ತದೆ ಎಂದರು.

English summary
Karnataka State received its first consignment of Covid-19 vaccine of 6.48 lakh doses. Vaccine is completely safe and another consignment will be received soon: Health & Medical Education Minister Dr.K.Sudhakar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X