ಬರಪೀಡಿತ ಪ್ರದೇಶಗಳ ಹೆಸರು-ವಿವರ ಶೀಘ್ರ ಘೋಷಣೆ: ಸಿದ್ದರಾಮಯ್ಯ

ಬೆಂಗಳೂರು, ಜುಲೈ 18: ವಸ್ತು ಸ್ಥಿತಿಯನ್ನು ಅವಲೋಕಿಸುತ್ತಿರುವ ರಾಜ್ಯ ಸರಕಾರ ಸದ್ಯದಲ್ಲೇ ಬರ-ಪೀಡಿತ ಪ್ರದೇಶಗಳ ಹೆಸರು-ವಿವರಗಳನ್ನು ಘೋಷಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಹೇಳಿದರು.

ರಾಜ್ಯದ 176 ತಾಲೂಕು ಪೈಕಿ ಕಳೆದ ವರ್ಷ ಮುಂಗಾರು ವೈಫಲ್ಯದಿಂದಾಗಿ 139 ತಾಲೂಕನ್ನು ಹಾಗೂ ಹಿಂಗಾರು ವೈಫಲ್ಯದ ಹಿನ್ನೆಲೆಯಲ್ಲಿ 160 ತಾಲೂಕುಗಳನ್ನು ಬರ-ಪೀಡಿತ ಎಂದು ಘೋಷಿಸಲಾಗಿತ್ತು.

ಈ ವರ್ಷ ಜುಲೈ ತಿಂಗಳಲ್ಲಿ ಅರ್ಧ ಭಾಗವೇ ಕಳೆದರೂ ವರುಣ ಕೃಪೆ ತೋರಿಲ್ಲ. ಜಲಾಶಯಗಳಲ್ಲಿ ನೀರಿಲ್ಲ! ಕಾವೇರಿ ಜಲಾನಯನ ಪ್ರದೇಶದ ನಾಲ್ಕು ಜಲಾಶಯಗಳಲ್ಲಿ ಕಳೆದ ವರ್ಷ ಈ ಅವಧಿಯಲ್ಲಿ 84 ಟಿಎಂಸಿ ಅಡಿ ನೀರು ಸಂಗ್ರಹವಾಗಿತ್ತು. ಆದರೆ ಈ ಬಾರಿ ಅರ್ಧಕ್ಕಿಂತಲೂ ಕಡಿಮೆ ಅಂದರೆ ಕೇವಲ 40 ಟಿಎಂಸಿ ಅಡಿಯಷ್ಟು ನೀರು ಸಂಗ್ರಹ ಇದೆ.

Siddaramaiah

ಪ್ರಸಕ್ತ ಸಾಲಿನ ಮುಂಗಾರಿನಲ್ಲಿ ರಾಜ್ಯದಲ್ಲಿ ವಾಡಿಕೆ ಮಳೆಗಿಂತಲೂ ಶೇಕಡಾ 24 ರಷ್ಟು ಮಳೆಯ ಕೊರತೆ ಉಂಟಾಗಿದೆ. ರಾಜ್ಯದಲ್ಲಿ ಈ ವೇಳೆಗಾಗಲೇ 73 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಬೇಕಿತ್ತು. ಆದರೆ ಇದೀಗ 28 ಲಕ್ಷ ಹೆಕ್ಟೇರ್ ಪ್ರದೇಶಲ್ಲಿ ಮಾತ್ರ ಬಿತ್ತನೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+