ಸಪ್ತಪದಿ ಯೋಜನೆಗೆ ಮರುಚಾಲನೆ; ಏಪ್ರಿಲ್, ಮೇ ತಿಂಗಳಿನಲ್ಲಿ ಸಾಮೂಹಿಕ ವಿವಾಹ

ಬೆಂಗಳೂರು, ಏಪ್ರಿಲ್ 13: ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ 'ಉಚಿತ ಸಾಮೂಹಿಕ ವಿವಾಹ- ಸಪ್ತಪದಿ' ಕಾರ್ಯಕ್ರಮವನ್ನು ಮರು ಚಾಲನೆಗೊಳಿಸಲು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮದುವೆಯಲ್ಲಿ ದುಂದು ವೆಚ್ಚ ಮಾಡಿ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಒಳಗಾಗುವುದನ್ನು ತಪ್ಪಿಸಲು ಕರ್ನಾಟಕ ಸರ್ಕಾರ ಉಚಿತ 'ಸಪ್ತಪದಿ ಸಾಮೂಹಿಕ ವಿವಾಹ' ಯೋಜನೆಯನ್ನು ಪ್ರಾರಂಭಿಸಿತ್ತು. ಕೋಟ ಶ್ರೀನಿವಾಸ ಪೂಜಾರಿ ಅವರು ಮುಜರಾಯಿ ಸಚಿವರಾಗಿದ್ದಾಗ ಆರಂಭಿಸಿದ್ದರು.

ವಧು ಮತ್ತು ವರನಿಗೆ ಉಡುಗೆ, ಬಂಗಾರದ ಉಡುಗೊರೆ ನೀಡುವ ಜೊತೆಗೆ, ಎರಡೂ ಕಡೆಯ ಬಂಧುಗಳಿಗೆ ಊಟೋಪಚಾರದ ವ್ಯವಸ್ಥೆಯನ್ನು ದೇವಾಲಯ ಆಡಳಿತ ಮಂಡಳಿಗಳೇ ಮಾಡುವುದು ಈ ಯೋಜನೆಯ ವಿಶೇಷವಾಗಿದೆ.

Karnataka Saptapadi Vivah Yojana 2022 Relaunched; Mass Marriages In April And May Month

2019ರ ಕೊನೆಯಲ್ಲಿ ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಸುಮಾರು ಎರಡು ವರ್ಷಗಳಿಂದ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮಗಳನ್ನು ಆಯೋಜಿಸಲಾಗಿರಲಿಲ್ಲ. ಇತ್ತೀಚಿನ ದಿನಗಳಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಕಡಿಮೆಯಾಗಿರುವುದರಿಂದಾಗಿ ಮತ್ತೆ ಸರ್ಕಾರದ ವತಿಯಿಂದ ಸಾಮೂಹಿಕ ವಿವಾಹವನ್ನು ಪ್ರಾರಂಭಿಸುವಂತೆ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಆದೇಶಿಸಿದ್ದಾರೆ.

2022ರ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಆಯ್ದ ಎ ದರ್ಜೆಯ ದೇವಸ್ಥಾನಗಳಲ್ಲಿ, ಕೋವಿಡ್ ನಿಯಮಾವಳಿಗಳನ್ನು ಪಾಲಿಸಿ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಸಪ್ತಪದಿ ನಡೆಸಲು ಅದೇಶ ಹೊರಡಿಸಲಾಗಿದೆ.

Karnataka Saptapadi Vivah Yojana 2022 Relaunched; Mass Marriages In April And May Month

Recommended Video

      ಪಾಕ್ ನ ಹೊಸ PM ರಸಿಕರ ರಾಜ: ಇಮ್ರಾನ್ ಖಾನ್ ನನ್ನು ಮೀರಿಸಿದ ಶಹಬಾಜ್ ಶರೀಫ್ | Oneindia Kannada

      ಕೋವಿಡ್ ಕಾರಣವಾಗಿ ಸ್ಥಗಿತಗೊಳಿಸಲಾಗಿದ್ದ ಸಪ್ತಪದಿ ಕಾರ್ಯಕ್ರಮಗಳಿಗೆ ಮರುಚಾಲನೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ 2022ರ ಏಪ್ರಿಲ್ 28, ಮೇ 11 ಮತ್ತು 25 ರಂದು ಆಯ್ದ ದೇವಸ್ಥಾನಗಳಲ್ಲಿ ಉಚಿತ ಸಾಮೂಹಿಕ ವಿವಾಹವನ್ನು ಆಯೋಜಿಸಲಾಗಿದೆ. ಹೆಚ್ಚಿನ ಸಂಖ್ಯೆಯ ಬಡ ಮತ್ತು ಮಧ್ಯಮ ವರ್ಗದ ಜನರು ಈ ಯೋಜನೆಯ ಲಾಭ ಪಡೆದುಕೊಳ್ಳಲಿ ಎನ್ನುವುದು ನಮ್ಮ ಆಶಯವಾಗಿದೆ ಎಂದು ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+