SC Survery: ಮೂರು ಹಂತಗಳಲ್ಲಿ ಎಸ್‌ಸಿ ಜನಗಣತಿ, ಬಿಬಿಎಂಪಿ ಮಹತ್ವದ ಅಪ್ಡೇಟ್

ಬೆಂಗಳೂರು, ಮೇ 16: ಕರ್ನಾಟಕ ರಾಜ್ಯ ಸರ್ಕಾರ ಒಳ ಮೀಸಲಾತಿ ನೀಡುವ ಸಂಬಂಧ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯ ನಡೆಸುತ್ತಿದೆ. ಈಗಾಗಲೇ ಮೇ 05 ರಿಂದ ಎಸ್‌ಸಿ ಜಾತಿ ಜನಗಣತಿ ಆರಂಭವಾಗಿದೆ. ಈ ಸಂಬಂಧ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಹತ್ವದ ಅಪ್ಡೇಟ್ ನೀಡಿದೆ. ಹೇಗೆಲ್ಲ ಸಮೀಕ್ಷೆ ನಡೆಯುತ್ತಿದೆ. ಜಾಗೃತಿ ಕಾರ್ಯಕ್ರಮ ಹೇಗೆ ನಡೆಸಲಾಗುತ್ತಿದೆ ಎಂದೆಲ್ಲ ವಿವರಿಸಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷಾ ಕಾರ್ಯದಲ್ಲಿ ನಾಗರಿಕರು ಸಕ್ರಿಯವಾಗಿ ಪಾಲ್ಗೊಳ್ಳುವ ಉದ್ದೇಶದಿಂದ ಬಿಬಿಎಂಪಿ 8 ವಲಯಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ಸರ್ಕಾರ, ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 8 ವಲಯಗಳಲ್ಲಿ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಕಾರ್ಯವು ಮೇ 5 ರಿಂದ 23ನೇ ಮೇ 2025 ರವೆರೆಗೆ ನಡೆಯಲಿದೆ ಎಂದು ಪಾಲಿಕೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Karnataka SC Survey of 3 Stage at Bengaluru Awareness Program Held

3 ಹಂತಗಳಲ್ಲಿ ಸಮೀಕ್ಷಾ ಕಾರ್ಯ

ಬೆಂಗಳೂರಿನಲ್ಲಿ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷಾ ಕಾರ್ಯವು 3 ಹಂತಗಳಲ್ಲಿ ನಡೆಯುತ್ತಿದೆ. ಮೊದಲನೇ ಹಂತದಲ್ಲಿ ಮೇ 5 ರಿಂದ ಮೇ 17 ರವರೆಗೆ ಗಣತಿದಾರರು ಮನೆ-ಮನೆ ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ. 2ನೇ ಹಂತದಲ್ಲಿ ಮೇ 19 ರಿಂದ ಮೇ 21 ರವರೆಗೆ ಗಣತಿದಾರರಿಂದ ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ನಡೆಯಲಿದೆ. 3ನೇ ಹಂತದಲ್ಲಿ ಮೇ 19 ರಿಂದ 23 ರವರೆಗೆ ಆನ್ ಲೈನ್ ಮೂಲಕ ಸ್ವಯಂ ಘೋಷಣೆ ಮಾಡಿಕೊಳ್ಳಬಹುದು.

58,122 ಪರಿಶಿಷ್ಟ ಮನೆಗಳ ಸಮೀಕ್ಷೆ

ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ 27 ವಿಧಾನಸಭಾ ಕ್ಷೇತ್ರಗಳಲ್ಲಿ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷಾ ಕಾರ್ಯ ಸಕ್ರಿಯವಾಗಿ ನಡೆಯುತ್ತಿದ್ದು, ಸಮೀಕ್ಷೆ ಮಾಡಲು 8,072 ಗಣತಿದಾರರನ್ನು ನಿಯೋಜಿಸಲಾಗಿದೆ. ಈ ಪೈಜಿ ಈಗಾಗಲೇ 58,122 ಪರಿಶಿಷ್ಟ ಮನೆಗಳಿಗೆ ಹಾಗೂ 14,14,716 ಪರಿಶಿಷ್ಟ ಜಾತಿಯಲ್ಲದ ಮನೆಗಳಿಗೆ ಭೇಟಿ ನೀಡಿ ದತ್ತಾಂಶ ಸಂಗ್ರಹಿಸಲಾಗಿದೆ.

ಅಗತ್ಯ ದಾಖಲೆ ನೀಡುವಂತೆ ಕರೆ

ನಗರದ 8 ವಲಯಗಳ ಜನದಟ್ಟಣೆ ಪ್ರದೇಶಗಳಲ್ಲಿ ಅರಿವು ಮೂಡಿಸುವ ಕಾರ್ಯವನ್ನು ಪರಿಣಾಮಕಾರಿಯಾಗಿ ನಡೆಸಲಾಗುತ್ತಿದ್ದು, ಸಮೀಕ್ಷೆಗಾಗಿ ಮನೆ-ಮನೆಗೆ ಬರುವ ಗಣತಿದಾರರಿಗೆ ಅಗತ್ಯ ದಾಖಲಾತಿಗಳನ್ನು ಒದಗಿಸಲು ಕೋರಿದೆ.

* ಪರಿಶಿಷ್ಟ ಜಾತಿಯವರು ತಮ್ಮ ಮೂಲ ಜಾತಿ ದಾಖಲೆಯ ಪ್ರಮಾಣ ಪತ್ರ

* ಶಿಕ್ಷಣ (ವಿದ್ಯಾಭ್ಯಾಸ ದಾಖಲಾತಿಗಳು)

* ವರಮಾನ (ವಾರ್ಷಿಕ ವರಮಾನದ ದಾಖಲಾತಿ)

* ಉದ್ಯೋಗದ ವಿವರ

* ಆಧಾರ್ ಕಾರ್ಡ್ ಸಂಖ್ಯೆ ಅಥವಾ ಪಡಿತರ ಚೀಟಿಯಂತಹ ಇನ್ನಿತರ ಅಗತ್ಯ ದಾಖಲಾತಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+