ಮೇ 11ರ ಮಧ್ಯಾಹ್ನ 3ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ: ಸಿ ಶಿಖಾ

ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶ ಮೇ 11ರಂದು ಪ್ರಕಟವಾಗಲಿದೆ ಎಂದು ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕಿ ಸಿ ಶಿಖಾ ತಿಳಿಸಿದ್ದಾರೆ

ಬೆಂಗಳೂರು, ಏಪ್ರಿಲ್ 29: ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶ ಮೇ 11ರಂದು ಮಧ್ಯಾಹ್ನ 3 ಗಂಟೆಗೆ www.puc.kar.nic.in ವೆಬ್ ಸೈಟ್ ನಲ್ಲಿ ಪ್ರಕಟವಾಗಲಿದೆ ಎಂದು ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕಿ ಸಿ ಶಿಖಾ ತಿಳಿಸಿದ್ದಾರೆ.[ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ, ಈಗ ಲಭ್ಯ]

ಮಾರ್ಚ್ 9ರಿಂದ 27ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು. ಒಟ್ಟಾರೆ ಆರು ಲಕ್ಷದ ಎಂಬತ್ನಾಲ್ಕು ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಕಳೆದ ವರ್ಷ ವಿಜ್ಞಾನ ವಿಷಯದ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿ ವಿದ್ಯಾರ್ಥಿಗಳ ಆತಂಕಕ್ಕೆ ಕಾರಣವಾಗಿತ್ತು. ಆದ್ದರಿಂದ ಈ ವರ್ಷ ಎಚ್ಚೆತ್ತಿದ್ದ ಪದವಿಪೂರ್ವ ಶಿಕ್ಷಣ ಇಲಾಖೆ ತೀವ್ರ ನಿಗಾ ವಹಿಸಿ, ಅಕ್ರಮ ನಡೆಯದಂತೆ ಕ್ರಮ ಕೈಗೊಂಡಿತ್ತು.[ಈ ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗದು: ತನ್ವೀರ್ ಭರವಸೆ]

PUC

ಜತೆಗೆ ಈ ಬಾರಿ ಕೆಎಸ್ ಆರ್ ಟಿಸಿಯಿಂದ ದ್ವಿತೀಯ ಪಿಯು ವಿದ್ಯಾರ್ಥಿಗಳಿಗಾಗಿ ಉಚಿತ ಪ್ರಯಾಣದ ವ್ಯವಸ್ಥೆ ಸಹ ಮಾಡಲಾಗಿತ್ತು. ರಾಜ್ಯದಾದ್ಯಂತ ನಲವತ್ತೆಂಟು ಕೇಂದ್ರಗಳಲ್ಲಿ ಇಪ್ಪತ್ತು ಸಾವಿರಕ್ಕೂ ಹೆಚ್ಚು ಉಪನ್ಯಾಸಕರು ಉತ್ತರ ಪತ್ರಿಕೆಗಳ ಮೌಲ್ಯಮಾಪನದಲ್ಲಿ ತೊಡಗಿದ್ದರು. ಅಂತೂ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಮೇ 10ರಂದು ಪ್ರಕಟವಾಗಲಿದೆ ಎಂಬುದು ಖಾತ್ರಿಯಾಗಿದೆ. ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿಗಳಿಗೂ ಒನ್ ಇಂಡಿಯಾ ಕನ್ನಡದ ಕಡೆಯಿಂದ ಶುಭ ಹಾರೈಕೆಗಳು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+