ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ರಾಜೀನಾಮೆ?

Recommended Video

      ಅಣ್ಣಾಮಲೈ ರಾಜೀನಾಮೆ ಸಲ್ಲಿಸುತ್ತಿರೋದು ಯಾಕೆ ಗೊತ್ತಾ..? | Oneindia Kannada

      ಬೆಂಗಳೂರು, ಮೇ 28: ಪಾರದರ್ಶಕ ಹಾಗೂ ಕಠಿಣ ಕ್ರಮಗಳಿಂದ ಕರ್ನಾಟಕದಲ್ಲಿ ಹೆಸರುವಾಸಿಯಾಗಿದ್ದ ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ರಾಜೀನಾಮೆ ವದಂತಿ ಹಬ್ಬಿದೆ.

      ಆದರೆ ಅವರು ರಾಜೀನಾಮೆ ನೀಡಿ ಮುಂದೇನು ಮಾಡುತ್ತಾರೆ ಎನ್ನುವುದರ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ, ಆದರೆ ರಾಜೀನಾಮೆ ನೀಡುವುದು ಪಕ್ಕಾ ಎನ್ನುವ ಮಾತು ಕೇಳಿಬರುತ್ತಿದೆ.

      ಅಣ್ಣಾಮಲೈ ಇದೀಗ ರಾಜಕೀಯ ಪ್ರವೇಶ ಮಾಡಲು ಸಿದ್ಧತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಆಗಿ ಕಾರ್ಯನಿರ್ವಹಿಸುತ್ತಿರುವ ಅಣ್ಣಾಮಲೈ ಅವರು ಜೂನ್ ಮೊದಲ ವಾರದಲ್ಲಿ ರಾಜೀನಾಮೆ ನೀಡಿ ರಾಜಕೀಯಕ್ಕೆ ಧುಮುಕಲಿದ್ದಾರೆ ಎನ್ನಲಾಗಿದೆ.

      Karnataka Singham Annamalai to resign from police force

      ಸಾಮಾಜ ಸೇವೆಯಲ್ಲಿ ಮತ್ತಷ್ಟು ತೊಡಗಿಸಿಕೊಳ್ಳುವ ಉದ್ದೇಶದಿಂದ ರಾಜಕೀಯಕ್ಕೆ ಬರಲಿದ್ದಾರೆ ಎನ್ನಲಾಗಿದ್ದು, ತಮಿಳುನಾಡಿನಲ್ಲಿ ತಮ್ಮ ರಾಜಕೀಯ ಜೀವನ ಆರಂಭಿಸಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

      ಅಣ್ಣಾಮಲೈ ಅವರು ಈ ಸಂಬಂಧ ನಾಳೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡುತ್ತಿದ್ದು, ರಾಜೀನಾಮೆ ಕುರಿತು ಮಾಹಿತಿ ನೀಡಲಿದ್ದಾರೆ ಎನ್ನಲಾಗಿದೆ.

      2011ನೇ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿರುವ ಅಣ್ಣಾಮಲೈ ಅವರು ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಎಸ್​ಪಿಯಾಗಿ ಕಾರ್ಯನಿರ್ವಹಿಸಿದ್ದು, ದಿಢೀರ್ ರಾಜೀನಾಮೆ ನಿರ್ಧಾರ ಸಾಕಷ್ಟು ಕುತೂಹಲ ಮೂಡಿಸಿದೆ.

      ಅಣ್ಣಾಮಲೈ ಅವರು ರಾಜೀನಾಮೆ ನೀಡಿದ ಬಳಿ ಡಿಎಂಕೆ ಸೇರ್ಪಡೆಯಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, 2021ರಲ್ಲಿ ಕೊಯಮತ್ತೂರು ಕ್ಷೇತ್ರದಿಂದ ತಮಿಳುನಾಡು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎನ್ನುವ ಸುದ್ದಿ ಎಲ್ಲೆಡೆ ಹಬ್ಬಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+