ಸಿಎಂ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ ಬಿ ನಾಗೇಂದ್ರ
ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ ನಾಗೇಂದ್ರ ಗುರುವಾರ ಸಂಜೆ ರಾಜೀನಾಮೆ ನೀಡಿದರು. ಈ ಮೂಲಕ ರಾಜ್ಯ ಸರ್ಕಾರದ ಮೊದಲ ವಿಕೆಟ್ ಪತನವಾಗಿದೆ.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ (ಕೆಎಂವಿಎಸ್‌ಟಿಡಿಸಿ) ಕೆಲಸ ಮಾಡುತ್ತಿದ್ದ ಶಿವಮೊಗ್ಗದ ಖಾತೆಗಳ ಸೂಪರಿಂಟೆಂಡೆಂಟ್ ಆತ್ಮಹತ್ಯೆ ಮಾಡಿಕೊಂಡ 10 ದಿನಗಳ ಬಳಿಕ ಸಚಿವ ರಾಜೀನಾಮೆ ನೀಡಿದ್ದಾರೆ.

ಪಾಲಿಕೆಯ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಪತ್ರ ಬರೆದಿದ್ದ ಅಧಿಕಾರಿ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದರು. ಬಳ್ಳಾರಿ ಉಸ್ತುವಾರಿ ಸಚಿವರೂ ಆಗಿರುವ ನಾಗೇಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದಿರುವ ರಾಜೀನಾಮೆ ಪತ್ರದಲ್ಲಿ ಸ್ವಯಂ ಪ್ರೇರಿತರಾಗಿ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ.
ಪಕ್ಷ ಮತ್ತು ಸರ್ಕಾರದ ಘನತೆ ಕಾಪಾಡುವ ಉದ್ದೇಶದಿಂದ ನಾಗೇಂದ್ರ ರಾಜೀನಾಮೆ ನೀಡುವುದಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದರು.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ನಾಗೇಂದ್ರ ಅವರೊಂದಿಗೆ ನಾನು ಮತ್ತು ಗೃಹ ಸಚಿವರು ಚರ್ಚೆ ನಡೆಸಿದ್ದೇವೆ, ಅವರು ಹಗರಣದಲ್ಲಿ ಭಾಗಿಯಾಗಿಲ್ಲ, ಆದ್ದರಿಂದ ರಾಜೀನಾಮೆ ನೀಡುವ ಅಗತ್ಯವಿಲ್ಲ, ಆದರೆ ಘನತೆ ಕಾಪಾಡಲು ರಾಜೀನಾಮೆ ನೀಡಲು ಮುಂದಾಗಿದ್ದಾರೆ." ಎಂದು ಹೇಳಿದ್ದರಯ.
ಚಂದ್ರಶೇಖರನ್ ಪಿ ಅವರ ಸಾವಿನ ನಂತರ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಜನತಾ ದಳ (ಜಾತ್ಯತೀತ) ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದವು.












Click it and Unblock the Notifications