Karnataka SSLC Time Table 2023 : ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷೆ 2023ರ ಅಂತಿಮ ವೇಳಾಪಟ್ಟಿ ಪ್ರಕಟ, ಇಲ್ಲಿದೆ ವಿವರ
ಬೆಂಗಳೂರು, ಡಿಸೆಂಬರ್, 05: 2023ರ ಮಾರ್ಚ್-ಏಪ್ರಿಲ್ನಲ್ಲಿ ನಡೆಯಲಿರುವ ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ಎಸ್ಎಸ್ಎಲ್ ಪರೀಕ್ಷೆಗಳು ನಡೆಯಲಿವೆ. ವೇಳಾಪಟ್ಟಿ ಪ್ರಕಾರ ಯಾವ ದಿನ ಯಾವ ಪರೀಕ್ಷೆ ನಡೆಯುತ್ತದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ಕರ್ನಾಟಕ SSLC ಪರೀಕ್ಷೆ 2023ರ ಅಂತಿಮ ವೇಳಾಪಟ್ಟಿ ಪ್ರಕಟ
— oneindiakannada (@OneindiaKannada)
2023ರ ಮಾರ್ಚ್-ಏಪ್ರಿಲ್ನಲ್ಲಿ ನಡೆಯಲಿರುವ ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಪರೀಕ್ಷಾ ದಿನಾಂಕಗಳ ಬಗ್ಗೆ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.#SSLCExam #SSLCExam2023 #SSLCExamSchedule pic.twitter.com/lpQrHV4Kphಮಾರ್ಚ್ 31ರಂದು, ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್ (NCERT) ಸಂಸ್ಕೃತ ವಿಷಯಗಳ ಪರೀಕ್ಷೆಗಳು ನಡೆಯಲಿವೆ. ಏಪ್ರಿಲ್ 4ರಂದು ಗಣಿತ, ಸಮಾಜ ಶಾಸ್ತ್ರ ಪರೀಕ್ಷೆಗಳು ನಡೆಯಲಿದ್ದು, ಏಪ್ರಿಲ್ 6ರಂದು ದ್ವಿತೀಯ ಭಾಷೆ ಇಂಗ್ಲೀಷ್, ಕನ್ನಡ ಪರೀಕ್ಷೆಗಳು ನಡೆಯಲಿವೆ. ಏಪ್ರಿಲ್ 8ಕ್ಕೆ ಅರ್ಥಶಾಸ್ತ್ರ, ಏಪ್ರಿಲ್ 10 ವಿಜ್ಞಾನ, ರಾಜ್ಯಶಾಸ್ತ್ರ, ಏಪ್ರಿಲ್ 12ರಂದು ತೃತೀಯ ಭಾಷೆ- ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಉರ್ದು ಸಂಸ್ಕೃತ, ಏಪ್ರಿಲ್ 15ರಂದು ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ.
ಕರ್ನಾಟಕ ಎಸ್ಎಸ್ಎಲ್ಸಿ ಅಂತಿಮ ಪರೀಕ್ಷಾ ವೇಳಾಪಟ್ಟಿ 2023 ಅಧಿಕೃತ ವೆಬ್ಸೈಟ್ sslc.karnataka.gov.in ನಲ್ಲಿ ಲಭ್ಯವಿದೆ. KSEEB ಎಸ್ಎಸ್ಎಲ್ಸಿ ಪರೀಕ್ಷೆಯ ವೇಳಾಪಟ್ಟಿಯು ಪರೀಕ್ಷೆಯ ದಿನಾಂಕ, ಸಮಯ ಮತ್ತು ಪರೀಕ್ಷೆಗಳಿಗೆ ಸೂಚನೆಗಳಂತಹ ವಿವರಗಳನ್ನು ಇಲ್ಲಿ ನೀಡಲಾಗಿದೆ.












Click it and Unblock the Notifications