ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಜ್ಯ ವಿಧಾನಸಭೆ ಅಧಿವೇಶನ: ಬಜೆಟ್ ಮಂಡನೆ ದಿನಾಂಕ ನಿಗದಿ

|
Google Oneindia Kannada News

ಬೆಂಗಳೂರು, ಫೆಬ್ರವರಿ 19: ರಾಜ್ಯ ವಿಧಾನಸಭೆಯ ಬಜೆಟ್ ಅಧಿವೇಶನವು ಮಾರ್ಚ್ 4 ರಿಂದ ನಡೆಯಲಿದೆ. ಮಾರ್ಚ್ 8ರಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ.

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಗುರುವಾರ ನಡೆದ ಸಂಪುಟ ಸಭೆಯಲ್ಲಿ ಬಜೆಟ್ ರೂಪುರೇಷೆಯ ಬಗ್ಗೆ ಚರ್ಚೆ ನಡೆಸಲಾಯಿತು. ಮಾರ್ಚ್ 4ರಿಂದ ಬಜೆಟ್ ಅಧಿವೇಶನ ಆರಂಭಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಮಾರ್ಚ್ 8ರಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬಜೆಟ್ ಮಂಡಿಸಲಿದ್ದಾರೆ ಎಂದು ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಮಾರ್ಚ್ ತಿಂಗಳ ಕೊನೆಯವರೆಗೂ ಅಧಿವೇಶನ ನಡೆಯಲಿದೆ. ಮಾರ್ಚ್ 4 ಮತ್ತು 5ರಂದು ಒಂದು ದೇಶ ಒಂದು ಚುನಾವಣೆ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಬೊಮ್ಮಾಯಿ ಹೇಳಿದ್ದಾರೆ.

Karnataka State Assembly Budget Session Begin March 4, Budget On March 8

Recommended Video

ಈಶಾನ್ಯ ರಾಜ್ಯಗಳಲ್ಲಿ ಪ್ರವಾಸೋದ್ಯಮದ ಹೊಸ ಶಕೆ-ನಮಾಮಿ ಬ್ರಹ್ಮಪುತ್ರ ಉತ್ಸವದಲ್ಲಿ ಮೋದಿ ಭಾಗಿ | Oneindia Kannada

ಕೋವಿಡ್ ಸಂದರ್ಭದಲ್ಲಿ ಚಿಕಿತ್ಸೆ ನೀಡಿದ್ದ ಖಾಸಗಿ ಆಸ್ಪತ್ರೆಗಳಿಗೆ ಸುವರ್ಣ ಕರ್ನಾಟಕ ಆರೋಗ್ಯ ಯೋಜನೆಯಡಿ 700 ಕೋಟಿ ರು ಬಿಡುಗಡೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ. ವಿವಿಧ ಸಮುದಾಯಗಳ ಮೀಸಲಾತಿ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಈ ಬಗ್ಗೆ ಸಚಿವರು ಸಲಹೆಗಳನ್ನು ನೀಡಿದ್ದು, ಮುಂದಿನ ಸಭೆಯಲ್ಲಿ ಅವುಗಳ ಬಗ್ಗೆ ಕಾನೂನು ತಜ್ಞರ ಅಭಿಪ್ರಾಯ ಚರ್ಚೆ ನಡೆಸಲಾಗುತ್ತದೆ ಎಂದಿದ್ದಾರೆ.

English summary
Karnataka State assembly budget session will begin from March 4 and CM Yediyurappa will present budget on March 8.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X