ಸಿದ್ದರಾಮಯ್ಯ ಕಾಲ್ಗುಣವೇ ಸರಿಯಿಲ್ಲ! ಬಿಎಸ್ವೈ ವ್ಯಂಗ್ಯ
ಸಿದ್ದರಾಮಮಯ್ಯ ಕಾಲಿಟ್ಟ ದಿನದಿಂದ ರಾಜ್ಯದಲ್ಲಿ ಬರಗಾಲ ಶುರುವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಾಗ್ಬಾಣ ತೂರಿಸಿದ್ದಾರೆ.
ಬೆಂಗಳೂರು, ಜೂನ್ 3: ಸಿದ್ದರಾಮಮಯ್ಯ ಕಾಲಿಟ್ಟ ದಿನದಿಂದ ರಾಜ್ಯದಲ್ಲಿ ಬರಗಾಲ ಶುರುವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಾಗ್ಬಾಣ ತೂರಿಸಿದರು. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುತ್ತಿದ್ದಂತೆಯೇ ರಾಜ್ಯದ ಜನರಿಗೆ ಗ್ರಹಚಾರ ಶುರುವಾಗಿದೆ, ಮಳೆ ಬೆಳೆ ಆಗುತ್ತಿಲ್ಲ ಎಂದು ವ್ಯಂಗ್ಯವಾಗಿ ಹೇಳಿದರು.

ಬೆಂಗಳೂರಿನ ಕೆ.ಆರ್.ಪುರಂ ನ ಕೆ.ಆರ್.ಇನ್ ಹೊಟೆಲ್ ನಲ್ಲಿ ನಡೆದ ಬೆಂಗಳೂರು ನಗರ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.
ಜುಲೈ 10 ರಂದು ರಾಜ್ಯದ ಲಕ್ಷಾಂತರ ರೈತರನ್ನು ಸೇರಿಸಿ, ರಾಜ್ಯ ಸರ್ಕಾರದ ವಿರುದ್ಧ ಮೆರವಣಿಗೆ ಮೂಲಕ ಪ್ರತಿಭಟಿಸುವುದಾಗಿ ಇದೇ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.












Click it and Unblock the Notifications