ಶರತ್ ಮಡಿವಾಳ ಹತ್ಯೆ ಖಂಡಿಸಿ ಜು.12 ರಂದು ಬಿಜೆಪಿ ಪ್ರತಿಭಟನೆ

ಬೆಂಗಳೂರು, ಜುಲೈ 12: ಬಂಟ್ವಾಳದಲ್ಲಿ ಆರ್.ಎಸ್.ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಖಂಡಿಸಿ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರ ಅಪರಾಧಿಗಳನ್ನು ಹಿಡಿಯುವಲ್ಲಿ ತೋರುತ್ತಿರುವ ವಿಳಂಬ ಧೋರಣೆ ವಿರೋಧಿಸಿ ಬಿಜೆಪಿ ಮುಖಂಡರು ಇಂದು(ಜುಲೈ 12) ಪ್ರತಿಭಟನೆ ನಡೆಸಲಿದ್ದಾರೆ.

ಇಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಆನಂದರಾವ್ ವೃತ್ತದ ಬಳಿಯ ಮೌರ್ಯ ಹೋಟೆಲ್ ಮುಂಭಾಗದಲ್ಲಿರುವ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪ್ರತಿಭಟನೆಯ ನೇತೃತ್ವವನ್ನು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ವಹಿಸಲಿದ್ದಾರೆ.

Karnataka State BJP will organised a protest in Bengaluru to oppose murder of RSS worker in Bantwal

ರಾಜ್ಯ ಕಾರ್ಯದರ್ಶಿಗಳಾದ ಎಂ.ಜಯದೇವ್, ಬೆಂಗಳೂರು ನಗರ ಬಿಜೆಪಿ ಅಧ್ಯಕ್ಷ ಪಿ.ಎನ್.ಸದಾಶಿವ , ಶಾಸಕರಾದ ಎಸ್.ಮುನಿರಾಜು , ಜೊತೆಗೆ ಬೆಂಗಳೂರಿನ ಇತರ ಬಿಜೆಪಿ ಶಾಸಕರು, ಬಿಬಿಎಂಪಿ ಸದಸ್ಯರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ.

ಜುಲೈ 4ರಂದು ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿದ್ದ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಚಿಕಿತ್ಸೆ ಫಲಿಸದೆ ನಿನ್ನೆ(ಜು.7) ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು. ಮಂಗಳೂರಿನ ಬಿ.ಸಿ ರೋಡಿನಲ್ಲಿ ಈ ಘಟನೆ ನಡೆದಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+