ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಈದ್ ಮಿಲಾದ್ ಆಚರಣೆಗೆ ವಕ್ಫ್ ಮಂಡಳಿಯ ಮಾರ್ಗಸೂಚಿ!

|
Google Oneindia Kannada News

ಬೆಂಗಳೂರು, ಅ. 27: ರಾಜ್ಯದಲ್ಲಿ ಕೊರೊನಾ ವೈರಸ್ ಸಂಕಷ್ಟದ ಹಿನ್ನೆಲೆಯಲ್ಲಿ ಕೋವಿಡ್ ಶಿಷ್ಟಾಚಾರವನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಸರ್ಕಾರವು ನಿರ್ಧರಿಸಿದೆ. ಇದೇ ಹಿನ್ನೆಲೆಯಲ್ಲಿ ಮುಸ್ಲಿಂ ಸಮುದಾಯದ ಬಾಂಧವರು ಇದೇ ಅಕ್ಟೋಬರ್ 30 ರಂದು ಆಚರಿಸಲಿರುವ ಈದ್ ಮಿಲಾದ್, ಮಿಲಾದುನ್ನಬಿ ಹಬ್ಬವನ್ನು ರಾಜ್ಯ ಸರ್ಕಾರ ನೀಡಿರುವ ಆದೇಶಗಳಂತೆ ಹಾಗೂ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಮಾರ್ಗಸೂಚಿಗಳನ್ವಯ ಆಚರಣೆ ಮಾಡಬೇಕೆಂದು ಬೆಂಗಳೂರು ನಗರ ಉತ್ತರ ಜಿಲ್ಲೆಯ ವಕ್ಫ್ ಅಧಿಕಾರಿ ರಝಿಯಾ ಸುಲ್ತಾನಾ ಅವರು ಕೋರಿದ್ದಾರೆ.

ಮಹಾಮಾರಿ ಕೊರೊನಾ ವೈರಸ್ ಸೋಂಕು ಹರಡುವಿಕೆಯ ಹಿನ್ನೆಲೆಯಲ್ಲಿ ಈದ್ ಮಿಲಾದ್ ಹಬ್ಬದ ಆಚರಣೆ ಕುರಿತು ಇರುವ ಸರ್ಕಾರದ ಆದೇಶ ಹಾಗೂ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಹಾಗೂ ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ. ಬೆಂಗಳೂರು ನಗರ ಜಿಲ್ಲೆಯ ಎಲ್ಲ ಮಸೀದಿಗಳು ಹಾಗೂ ವಕ್ಫ್ ಸಂಸ್ಥೆಗಳ ಆಡಳಿತ ಸಮಿತಿಗಳ ಅಧ್ಯಕ್ಷರು, ಕಾರ್ಯದರ್ಶಿ, ಮುತವಲ್ಲಿ ಹಾಗೂ ಆಡಳಿತಾಧಿಕಾರಿಗಳಿಗೆ ವಕ್ಫ್ ಮಂಡಳಿ ಆದೇಶ ಮಾಡಿದ್ದು, ಈ ಬಾರಿಯ ಈದ್ ಮಿಲಾದ್ ಹಬ್ಬದ ಪ್ರಯುಕ್ತ ನೆರವೇರಲಿರುವ ಯಾವುದೇ ರೀತಿಯ ಸಾಮೂಹಿಕ ಮೆರವಣಿಗೆ ಜುಲೂಸ್, ತೆರೆದ ಸ್ಥಳಗಳಲ್ಲಿ ಒಂದೆಡೆ ಸೇರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.

ಡಿಜಿಟಲ್ ಸೌಂಡ್ ಸಿಸ್ಟಮ್ ನಿಷೇಧ

ಡಿಜಿಟಲ್ ಸೌಂಡ್ ಸಿಸ್ಟಮ್ ನಿಷೇಧ

ಮೊಹಲ್ಲಾಗಳಲ್ಲಿ ನಡೆಯುವ ಯಾವುದೇ ರೀತಿಯ ಹಗಲು ಮತ್ತು ರಾತ್ರಿಯ ಪ್ರವಚನ ಕಾರ್ಯಕ್ರಮ, ಸಾಂಸ್ಕೃತಿಕ ಸಭೆ ಸಮಾರಂಭಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.

ಈದ್-ಮಿಲಾದ್: ರಾಜ್ಯ ಸರ್ಕಾರದಿಂದ ಕೊವಿಡ್ 19 ಮಾರ್ಗಸೂಚಿ ಪ್ರಕಟಈದ್-ಮಿಲಾದ್: ರಾಜ್ಯ ಸರ್ಕಾರದಿಂದ ಕೊವಿಡ್ 19 ಮಾರ್ಗಸೂಚಿ ಪ್ರಕಟ

ಮಸೀದಿಗಳಲ್ಲಿ, ದರ್ಗಾಗಳಲ್ಲಿ ಸಾಮಾಜಿಕ ಅಂತರ ಹಾಗೂ ಕೋವಿಡ್-19 ಶಿಷ್ಟಾಚಾರದೊಂದಿಗೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳ ಮೂಲಕ ದೈಹಿಕ ಅಂತರ ಕಾಪಾಡಿಕೊಂಡು ನೆರವೇರಿಸುವುದು. ಸಾರ್ವಜನಿಕ ಪ್ರದೇಶಗಳಲ್ಲಿ ಧ್ವನಿವರ್ಧಕ ಡಿಜಿಟಲ್ ಸೌಂಡ್ ಸಿಸ್ಟಮ್ ಡಿಜೆ ಬಳಕೆಯನ್ನು ನಿಷೇಧಿಸಲಾಗಿದೆ.

ಮಾಸ್ಕ್ ಕಡ್ಡಾಯ ಬಳಕೆ

ಮಾಸ್ಕ್ ಕಡ್ಡಾಯ ಬಳಕೆ

ಮುಖಗವಸು ಅಥವಾ ಮಾಸ್ಕ್‌ಗಳನ್ನು ಕಡ್ಡಾಯವಾಗಿ ಎಲ್ಲರೂ ಉಪಯೋಗಿಸತಕ್ಕದ್ದು. 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ಹತ್ತು ವರ್ಷದೊಳಗಿನ ಮಕ್ಕಳು ಮನೆಯಲ್ಲಿ ಹಬ್ಬವನ್ನು ಆಚರಿಸುವುದು. ಪ್ರವೇಶ ದ್ವಾರಗಳಲ್ಲಿ ಸ್ಯಾನಿಟೈಸರ್ ಹಾಗೂ ಸೋಪಿನೊಂದಿಗೆ ಕೈತೊಳೆಯಲು ಸೂಕ್ತ ವ್ಯವಸ್ಥೆಯನ್ನು ಮಾಡುವುದು ಕಡ್ಡಾಯವಾಗಿದೆ.

ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು

ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು

ಕಡ್ಡಾಯವಾಗಿ ಎಲ್ಲರೂ 6 ಅಡಿ ದೈಹಿಕ ಅಂತರವನ್ನು ಕಾಯ್ದುಕೊಳ್ಳುವುದು. ಖಬರಸ್ಥಾನ ಒಳಗೊಂಡಂತೆ ಯಾವುದೇ ರೀತಿಯ ತೆರೆದ ಜಾಗದಲ್ಲಿ ಪ್ರಾರ್ಥನೆ ಪ್ರವಚನ ಮುಂತಾದವುಗಳನ್ನು ಆಯೋಜಿಸುವಂತಿಲ್ಲ.

Recommended Video

Munirathna : ನಮ್ ಅಮ್ಮ ಸತ್ತು 25 ವರುಷ ಆಗಿದೆ | Oneindia Kannada
ಪೊಲೀಸ್ ಇಲಾಖೆಯ ಮಾರ್ಗಸೂಚಿ

ಪೊಲೀಸ್ ಇಲಾಖೆಯ ಮಾರ್ಗಸೂಚಿ

ಸರಕಾರದ ದಿನಾಂಕ 06.06.2020 ರ ಸುತ್ತೋಲೆಯಲ್ಲಿ ಧಾರ್ಮಿಕ ಸ್ಥಳಗಳಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಅನುಸರಿಸುವುದು. ಈದ್ ಮಿಲಾದ್ ಹಬ್ಬದ ಆಚರಣೆ ಕುರಿತು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ನೀಡಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವುದು.

English summary
The state government has issued sop for Eid Milad celebration. There are many restrictions with the SOP already in effect. Karnataka State Waqf Board has ordered to fallow government guidliens. Know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X