2800 ಪೇದೆಗಳ ನೇಮಕಕ್ಕೆ ಆನ್ ಲೈನ್ ಅರ್ಜಿ ಆಹ್ವಾನ
ಬೆಂಗಳೂರು, ಮೇ 14: ಬೆಂಗಳೂರು ಪೊಲೀಸ್ ಕಮೀಷನರೇಟ್ ಘಟಕದಲ್ಲಿ ಖಾಲಿ ಇರುವ 2,798 ಪೊಲೀಸ್ ಪೇದೆ (ಸಿವಿಲ್) ಹುದ್ದೆಗಳಿಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಪೊಲೀಸ್ ಇಲಾಖೆಯು ಅರ್ಜಿ ಆಹ್ವಾನಿಸಿದೆ.
ರಾಜ್ಯಮಟ್ಟದಲ್ಲಿ ಪುರುಷ ಅಭ್ಯರ್ಥಿಗಳಿಗೆ 2059 ಹುದ್ದೆಗಳು ಹಾಗೂ ಮಹಿಳಾ ಅಭ್ಯರ್ಥಿಗಳಿಗೆ 515 ಹುದ್ದೆಗಳು ಖಾಲಿಯಿವೆ. ಜತೆಗೆ, ಹೈದರಾಬಾದ್-ಕರ್ನಾಟಕ ಪ್ರದೇಶಕ್ಕೆ ಪುರುಷರಿಗೆ 179 ಹುದ್ದೆಗಳು ಹಾಗೂ ಮಹಿಳಾ ಅಭ್ಯರ್ಥಿಗಳಿಗೆ 45 ಹುದ್ದೆಗಳನ್ನು ಮೀಸಲಿಡಲಾಗಿದೆ. ಹೈದರಾಬಾದ್-ಕರ್ನಾಟಕ ಮೀಸಲಾತಿ ಕೋರುವ ಅಭ್ಯರ್ಥಿಗಳನ್ನು ಅದಕ್ಕಾಗಿ ಮೀಸಲಿರುವ ಹುದ್ದೆಗಳಿಗೆ ಮಾತ್ರ ಪರಿಗಣಿಸಲಾಗುತ್ತದೆ. ಹಾಗೂ ರಾಜ್ಯಮಟ್ಟದ ಹುದ್ದೆಗಳಿಗೆ ಹೈ-ಕ ಮೀಸಲು ಕೋರುವವರನ್ನು ಪರಿಗಣಿಸುವುದಿಲ್ಲ.
ಅರ್ಹತೆಗಳು: ಪಿಯುಸಿ ಪಾಸಾಗಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ಕನಿಷ್ಠ 19 ವರ್ಷ ವಯಸ್ಸಾಗಿರಬೇಕು. ಪರಿಶಿಷ್ಠ ಜಾತಿ ಹಾಗೂ ಪರಿಶಿಷ್ಠ ಪಂಗಡ ಅಭ್ಯರ್ಥಿಗಳಿಗೆ ಗರಿಷ್ಠ 27 ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 25 ವರ್ಷ.
ಆನ್ ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು:
ಸಾಮಾನ್ಯ ಅಭ್ಯರ್ಥಿಗಳಿಗೆ 250 ಹಾಗೂ ಪ.ಜಾ/ ಪ.ಪಂ ಅಭ್ಯರ್ಥಿಗಳಿಗೆ 100 ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಕೆ ಮೇ 12ರ ಬೆಳಗ್ಗೆ 10 ಗಂಟೆಯಿಂದ ಆರಂಭವಾಗಿದೆ. ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 10ರ ಸಂಜೆ 6 ಗಂಟೆ. ಕರ್ನಾಟಕ ಸ್ಟೇಟ್ ಪೊಲೀಸ್ ವೆಬ್ ಸೈಟಿನಲ್ಲಿ ಆನ್ ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ.













Click it and Unblock the Notifications