ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಲಸೆ ಕಾರ್ಮಿಕರನ್ನು ಕಳುಹಿಸಲು, ಕರೆತರಲು ಮೂರು ರಾಜ್ಯಗಳ ಮಾಸ್ಟರ್ ಪ್ಲಾನ್

|
Google Oneindia Kannada News

ಬೆಂಗಳೂರು, ಏಪ್ರಿಲ್ 30: ಕೊರೊನಾ ಲಾಕ್‌ಡೌನ್ ಸಂಕಷ್ಟದಿಂದ ದೇಶದ ದೊಡ್ಡ ದೊಡ್ಡ ನಗರಗಳಲ್ಲಿ ವಲಸೆ ಕಾರ್ಮಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲಾಗದೇ ತೀವ್ರ ಪಡಿಪಾಟಲು ಪಡುತ್ತಿದ್ದಾರೆ.

Recommended Video

ಕೊರೊನ ನಿಯಮಗಳನ್ನು ಮೀರದೆ ಇದರ ಉಪಯೋಗ ಪಡೆದುಕೊಳ್ಳಬೇಕು - R Ashok | Oneindia Kannada

ಇದನ್ನು ಮನಗಂಡು ಕೇಂದ್ರ ಸರ್ಕಾರ ಈ ವಲಸೆ ಕಾರ್ಮಿಕರನ್ನು, ಪ್ರವಾಸಿ ಸ್ಥಳಗಳನ್ನು ನೋಡಲು ಬಂದು ಲಾಕ್‌ ಆದವರನ್ನು ಹಾಗೂ ವಿದ್ಯಾರ್ಥಿಗಳನ್ನು ಅವರ ಊರುಗಳಿಗೆ ಕಳಿಸಲು ಎಲ್ಲ ರಾಜ್ಯಗಳು ವ್ಯವಸ್ಥೆ ಮಾಡಬೇಕು ಎಂದು ಕೇಂದ್ರ ಗೃಹ ಸಚಿವಾಲಯ ಸೋಮವಾರ ಸೂಚನೆ ನೀಡಿತ್ತು.

ವಾವ್! ಕ್ವಾರಂಟೈನ್ ಕೇಂದ್ರದಲ್ಲಿ ಸುಮ್ಮನೆ ಕೂರಲಿಲ್ಲ ಈ ಕಾರ್ಮಿಕರುವಾವ್! ಕ್ವಾರಂಟೈನ್ ಕೇಂದ್ರದಲ್ಲಿ ಸುಮ್ಮನೆ ಕೂರಲಿಲ್ಲ ಈ ಕಾರ್ಮಿಕರು

ಲಾಕ್‌ಡೌನ್ ನಿಂದ ಅಂತಾರಾಜ್ಯ ಗಡಿಗಳು ಬಂದ್ ಇದ್ದವು. ಹಾಗಾಗಿ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲಾಗದೇ ನರಳುತ್ತಿದ್ದರು. ಈಗ ಕೇಂದ್ರ ಸರ್ಕಾರದ ಸೂಚನೆ ಅನ್ವಯ ಎಲ್ಲ ರಾಜ್ಯಗಳು ವಲಸೆ ಕಾರ್ಮಿಕರನ್ನು ಅವರ ಸ್ವಂತ ಸ್ಥಳಗಳಿಗೆ ಕಳುಹಿಸಲು ವ್ಯವಸ್ಥೆ ಮಾಡುತ್ತಿವೆ. ಈ ನಿಟ್ಟಿನಲ್ಲಿ ನೆರೆಹೊರೆಯ ರಾಜ್ಯಗಳಾದ ಕರ್ನಾಟಕ, ಆಂಧ್ರ ಪ್ರದೇಶ, ತೆಲಂಗಾಣ ರಾಜ್ಯಗಳು ಪರಸ್ಪರ ಒಪ್ಪಿಗೆ ಮೂಲಕ ಸಹಭಾಗಿತ್ವದಲ್ಲಿ ಈ ಕೆಲಸಕ್ಕೆ ಕೈ ಹಾಕಿವೆ.

ವಿವರವಾದ ಮಾರ್ಗಸೂಚಿ

ವಿವರವಾದ ಮಾರ್ಗಸೂಚಿ

ಈಗಾಗಲೇ ಈ ನಿಟ್ಟಿನಲ್ಲಿ ಉತ್ತರ ಪ್ರದೇಶ, ದೆಹಲಿ ಮತ್ತು ಮಹಾರಾಷ್ಟ್ರದಂತಹ ರಾಜ್ಯಗಳು ವಿವರವಾದ ಮಾರ್ಗಸೂಚಿಗಳನ್ನು ರೂಪಿಸಿವೆ. ಇದನ್ನೇ ಅನುಸರಿಸಿ ಈಗ ಕರ್ನಾಟಕ, ತೆಲಂಗಾಣ ಹಾಗೂ ಆಂಧ್ರಪ್ರದೇಶ ರಾಜ್ಯಗಳು ಕೂಡ ವಲಸೆ ಕಾರ್ಮಿಕರನ್ನು, ವಿದ್ಯಾರ್ಥಿಗಳನ್ನು ಕಳುಹಿಸಿ ಕೊಡಲು ವ್ಯವಸ್ಥೆ ಮಾಡಿವೆ.

ಹೊರ ರಾಜ್ಯದಲ್ಲಿರುವ ಕರ್ನಾಟಕದ ಕಾರ್ಮಿಕರಿಗಾಗಿ ಸಹಾಯವಾಣಿಹೊರ ರಾಜ್ಯದಲ್ಲಿರುವ ಕರ್ನಾಟಕದ ಕಾರ್ಮಿಕರಿಗಾಗಿ ಸಹಾಯವಾಣಿ

ಕರ್ನಾಟಕದಲ್ಲಿ ಸಿದ್ದತೆ

ಕರ್ನಾಟಕದಲ್ಲಿ ಸಿದ್ದತೆ

ಊರಿಗೆ ಮರಳಲು ಬಯಸುವ ಎಲ್ಲ ವಲಸೆ ಕಾರ್ಮಿಕರಿಗೆ ಕರ್ನಾಟಕ ಸರ್ಕಾರ ಸಾರಿಗೆ ವ್ಯವಸ್ಥೆ ಮಾಡುತ್ತದೆ ಎಂದು ಸಿಎಂ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಮಾರ್ಗಸೂಚಿನ ಅನ್ವಯ ಬಸ್ ಮೂಲಕ ಸಾಗಿಸಲ ತೀರ್ಮಾನ ತೆಗೆದುಕೊಳ್ಳಲಾಗಿದೆ. ಒಂದು ಬಸ್‌ನಲ್ಲಿ 25 ಜನರಿಗೆ ಅವಕಾಶ ಕಲ್ಪಿಸಲಾಗುತ್ತದೆ. ದಿನಕ್ಕೆ ಪ್ರತಿ ಒಂದು ಲಕ್ಷ ಜನರಿಗೆ 4,000 ಬಸ್ಸುಗಳು ಬೇಕಾಗುತ್ತವೆ . ಈ ಕೆಲಸಕ್ಕೆ ಸುಮಾರು 8 ಕೋಟಿ ರುಪಾಯಿ ಬೇಕಾಗುತ್ತದೆ. ಕರ್ನಾಟಕದಲ್ಲಿ ಅಧಿಕೃತ ಅಂದಾಜಿನ ಪ್ರಕಾರ ಕರ್ನಾಟಕದಲ್ಲಿ 2 ಲಕ್ಷಕ್ಕೂ ಹೆಚ್ಚು ವಲಸೆ ಕಾರ್ಮಿಕರಿದ್ದಾರೆ.

ಲಾಕ್‌ಡೌನ್‌ನಲ್ಲಿ ಸಿಲುಕಿರುವ ಕಾರ್ಮಿಕರು ತವರಿಗೆ ಹೋಗಲು ಸಮ್ಮತಿಲಾಕ್‌ಡೌನ್‌ನಲ್ಲಿ ಸಿಲುಕಿರುವ ಕಾರ್ಮಿಕರು ತವರಿಗೆ ಹೋಗಲು ಸಮ್ಮತಿ

ತೆಲಂಗಾಣದಲ್ಲಿ ಸಿದ್ದತೆ

ತೆಲಂಗಾಣದಲ್ಲಿ ಸಿದ್ದತೆ

ತೆಲಂಗಾಣದಲ್ಲಿ ಸಿಕ್ಕಿಹಾಕಿಕೊಂಡಿರುವ ತಮ್ಮ ರಾಜ್ಯಗಳ ಜನರ ವಿವರಗಳನ್ನು ನೀಡುವಂತೆ ತೆಲಂಗಾಣ ಸರ್ಕಾರ ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದೆ. ತೆಲಂಗಾಣದಲ್ಲಿ ಸಿಲುಕಿರುವ ತಮ್ಮ ರಾಜ್ಯಗಳಿಂದ ಜನರನ್ನು ಕರೆದೊಯ್ಯಲು ಸಾರಿಗೆ ವ್ಯವಸ್ಥೆ ಮಾಡುವಂತೆ ಇತರ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಮಾಡಿದ್ದಾರೆ. ಕೋವಿಡ್ -19 ಗಾಗಿ ವ್ಯಕ್ತಿಗಳನ್ನು ಪರೀಕ್ಷಿಸಲು ವ್ಯವಸ್ಥೆ ಮಾಡುತ್ತದೆ ಎಂದು ತೆಲಂಗಾಣ ಸರ್ಕಾರ ತಿಳಿಸಿದೆ.

ಆಂಧ್ರಪ್ರದೇಶದಲ್ಲಿ ಸಿದ್ದತೆ

ಆಂಧ್ರಪ್ರದೇಶದಲ್ಲಿ ಸಿದ್ದತೆ

ವಲಸೆ ಕಾರ್ಮಿಕರನ್ನು ಸಾಗಿಸಲು ಹೇಗೆ ಅವಕಾಶ ನೀಡಬೇಕು ಎಂಬುದರ ಕುರಿತು ಆಂಧ್ರಪ್ರದೇಶ ಇತರ ರಾಜ್ಯ ಸರ್ಕಾರಗಳೊಂದಿಗೆ ಚರ್ಚೆ ನಡೆಸಿದೆ. ಇದಕ್ಕಾಗಿ ಪರಿಶೀಲನಾ ಸಭೆ ನಡೆಯುತ್ತಿದೆ. ಆಂಧ್ರದಲ್ಲಿದ್ದವರನ್ನು ಸುರಕ್ಷಿತವಾಗಿ ಕಳುಹಿಸಿ ಕೊಡುವುದು ಹಾಗೂ ಆಂಧ್ರದ ಹೊರಗಿದ್ದ ಆಂಧ್ರದವರನ್ನು ಇತರ ರಾಜ್ಯಗಳ ಜೊತೆ ಸಂಪರ್ಕ ಸಾಧಿಸಿ ಕರೆತರಲು ತೀರ್ಮಾನಿಸಿದೆ.

English summary
Karnataka Telangana And Andhra Pradesh Jointly Plans For Lifting Migrant Labours. After central government gives permission for Lifting interstate Migrant Labours.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X