ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

60 ವಯಸ್ಸಿಗಿಂತ ಮೇಲ್ಪಟ್ಟ ಹಿರಿಯರಿಗೆ ಹೋಂ ಐಸೋಲೇಷನ್

|
Google Oneindia Kannada News

ಬೆಂಗಳೂರು, ಜುಲೈ 5: ರಾಜ್ಯದಲ್ಲಿ ಕೋವಿಡ್‌ ನಿಯಂತ್ರಣದಲ್ಲಿದ್ದು ಜನರು ಆತಂಕಪಡುವ ಅಗತ್ಯವಿಲ್ಲ, ಹಿರಿಯ ನಾಗರಿಕರ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. 60 ವಯಸ್ಸಿಗಿಂತ ಮೇಲ್ಪಟ್ಟ ಹಿರಿಯರನ್ನು ಹೋಂ ಐಸೋಲೇಷನ್ ನಲ್ಲಿರಿಸಲು ಕಾನೂನು ತರಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಹೇಳಿದರು.

ಹಿರಿಯ ನಾಗರೀಕರಿಗೆ ಸೋಂಕು ತಗುಲದಂತೆ ನೋಡಿಕೊಳ್ಳುವ ಸವಾಲು ಎಲ್ಲರ ಮೇಲಿದೆ. ಅದಕ್ಕಾಗಿಯೇ ಅವರನ್ನು ಹೊರ ಕಳುಹಿಸದಂತೆ ನೋಡಿಕೊಳ್ಳುವ ಜವಾಬ್ದಾರಿ ಯುವಜನತೆ ಮೇಲಿದೆ. ಬೇರೆ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ 60 ವಯಸ್ಸಿಗಿಂತ ಮೇಲ್ಪಟ್ಟವರು, ಜ್ವರ ಲಕ್ಷಣಗಳಿರುವ ಹಿರಿಯ ನಾಗರೀಕರನ್ನು ಟೆಸ್ಟ್‌ಗೆ ಒಳಪಡಿಸುವಂತೆ ಕಾಯ೯ಪಡೆಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಕೋವಿಡ್ ನಿರ್ವಹಣೆಗೆ 8000 ಬೂತ್ ಮಟ್ಟದ ಟಾಸ್ಕ್ ಫೋರ್ಸ್: ಸುಧಾಕರ್ಕೋವಿಡ್ ನಿರ್ವಹಣೆಗೆ 8000 ಬೂತ್ ಮಟ್ಟದ ಟಾಸ್ಕ್ ಫೋರ್ಸ್: ಸುಧಾಕರ್

ಹಿರಿಯ ನಾಗರೀಕರನ್ನು ಮನೆಗಳಿಂದ ಹೊರ ಬಿಡಬಾರದು ಎಂಬ ಕಾನೂನು ಜಾರಿಗೂ ಚಿಂತನೆ ನಡೆಸಲಾಗುತ್ತಿದೆ. ತಜ್ಞರು ಮತ್ತು ಪ್ರಮುಖರ ಜತೆ ಈ ಕುರಿತು ಚಚಿ೯ಸಲಾಗುತ್ತಿದೆ ಎಂದು ಸಚಿವ ಸುಧಾಕರ್‌ ತಿಳಿಸಿದರು.

ಪರಿಸ್ಥಿತಿ ನಿಯಂತ್ರಣದಲ್ಲಿದೆ ; ಭಯಬೇಡ

ಪರಿಸ್ಥಿತಿ ನಿಯಂತ್ರಣದಲ್ಲಿದೆ ; ಭಯಬೇಡ

ಕೆಲ ಮಾಧ್ಯಮಗಳ ವರದಿಗಳಿಂದ ಜನರು ಭಯಬೀತರಾಗಿದ್ದಾರೆ. ಇದೊಂದು ಮಾರಣಾಂತಿಕ ರೋಗ ಎಂಬ ಭೀತಿಯಲ್ಲಿ ಅನೇಕರು ಮಾನಸಿಕ ಒತ್ತಡ ಮತ್ತು ಖಿನ್ನತೆಗೆ ಒಳಗಾಗಿದ್ದಾರೆ. ಅಂತಹ ಆತಂಕಕಾರಿ ಪರಿಸ್ತಿತಿ ಇಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಭಾನುವಾರ ತಿಳಿಸಿದರು.

ಜಗತ್ತಿನಾದ್ಯಂತ 1,13,87,499 ಮಂದಿ ಸೋಂಕಿತರಿದ್ದಾರೆ. ಇದರಲ್ಲಿ 64,45,410 ಮಂದಿ ಗುಣಮುಖರಾಗಿದ್ದಾರೆ, ಶೇಕಡವಾರು ಪ್ರಮಾಣ 56.60 ಇದೆ. 5,33,621 ಮಂದಿ ಸಾವಿಗೀಡಾಗಿದ್ದಾರೆ, ಸಾವಿನ ಶೇಕಡಾವಾರು ಪ್ರಮಾಣ 4.68 ರಷ್ಟಿದೆ. ಭಾರತದಲ್ಲಿ 6,74,313ಸೋಂಕಿತರಿದ್ದು, ಶೇಕಡಾ 60.67 ರಷ್ಟು ಮಂದಿ ಗುಣಮುಖರಾಗಿದ್ದಾರೆ. ಸಾವಿನ ಪ್ರಮಾಣ ಶೇಕಡಾ 2.86ರಷ್ಟಿದೆ. ಆದರೆ ರಾಜ್ಯದಲ್ಲಿ ಇದು ರಾಷ್ಟ್ರದ ಪ್ರಮಾಣಕ್ಕಿಂತ ಕಡಿಮೆ. ನಮ್ಮಲ್ಲಿ ಸಾವಿನ ಪ್ರಮಾಣ ಶೇಕಡಾ 1.55 ರಷ್ಟಿದೆ ಎಂದರು.

COVID-19: ಒಟ್ಟು 11,404,116 ಸೋಂಕಿತರು, ಯಾವ ದೇಶದಲ್ಲಿ ಎಷ್ಟು?COVID-19: ಒಟ್ಟು 11,404,116 ಸೋಂಕಿತರು, ಯಾವ ದೇಶದಲ್ಲಿ ಎಷ್ಟು?

ಬೆಂಗಳೂರು ನಗರದಲ್ಲಿ ಮರಣ ಪ್ರಮಾಣ ಕಡಿಮೆ

ಬೆಂಗಳೂರು ನಗರದಲ್ಲಿ ಮರಣ ಪ್ರಮಾಣ ಕಡಿಮೆ

ದೇಶದ ಮಹಾನಗರಗಳಾದ ದಿಲ್ಲಿ, ಮುಂಬಾಯಿ, ಚೆನ್ನೈಗಳಿಗೆ ಹೋಲಿಕೆ ಮಾಡಿದಾಗ ಬೆಂಗಳೂರು ನಗರದಲ್ಲಿ ಮರಣ ಪ್ರಮಾಣ ಶೇಕಡಾ 1.46 ರಷ್ಟು. ಹೀಗಾಗಿ ಯಾರೊಬ್ಬರು ಭಯ ಪಡಬೇಕಿಲ್ಲ ಎಂದು ವಿವರಿಸಿದರು.

ಕಳೆದ ಹತ್ತು ದಿನಗಳಿಂದ ಈಚೆಗೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಅವರಿಗೆ ಚಿಕಿತ್ಸೆ ನೀಡಲು ಮತ್ತು ನಿಗಾ ವಹಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ನಗರದ ವಾಡ್‌೯ನಿಂದ ಗ್ರಾಮದ ಹಂತದವರೆಗೆ ಕಾಯ೯ಪಡೆಗಳನ್ನು ರಚಿಸಲಾಗಿದೆ ಎಂದರು.

ಖಾಸಗಿ ಆಸ್ಪತ್ರೆಗಳಲ್ಲಿ ಕೊವಿಡ್19 ರೋಗಿಗಳಿಗೆ ಬೆಡ್ ಮೀಸಲುಖಾಸಗಿ ಆಸ್ಪತ್ರೆಗಳಲ್ಲಿ ಕೊವಿಡ್19 ರೋಗಿಗಳಿಗೆ ಬೆಡ್ ಮೀಸಲು

ನಮ್ಮಲ್ಲಿ ಒಟ್ಟು 80 ಪ್ರಯೋಗಾಲಯಗಳಿವೆ

ನಮ್ಮಲ್ಲಿ ಒಟ್ಟು 80 ಪ್ರಯೋಗಾಲಯಗಳಿವೆ

ಕಾಯ೯ಪಡೆ ಉಸ್ತುವಾರಿಗಾಗಿಯೇ ಹಿರಿಯ ಅಧಿಕಾರಿ ಅತೀಕ್‌ ಅವರನ್ನು ನಿಯೋಜಿಸಲಾಗಿದೆ. ಈ ಸಮಿತಿಗಳು ಹೊಸದಾಗಿ ಹೊರಡಿಸಿರುವ ಮಾಗ೯ಸೂಚಿ ಅನ್ವಯ ರೋಗ ಲಕ್ಷಣ ಇಲ್ಲದ ರೋಗಿಗಳ ಕ್ವಾರಂಟೈನ್‌ ವ್ಯವಸ್ಥೆ, ಜ್ವರ ಲಕ್ಷಣ ಇರುವವರು, ಇತರೆ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ ಹಿರಿಯ ನಾಗರೀಕರನ್ನು ಗುರುತಿಸಿ ಟೆಸ್ಟ್‌ಗೆ ಒಳಪಡಿಸುವ ಜವಾಬ್ದಾರಿ ನಿವ೯ಹಿಸಲಿದ್ದಾರೆ ಎಂದರು.

ನಮ್ಮಲ್ಲಿ ಒಟ್ಟು 80 ಪ್ರಯೋಗಾಲಯಗಳಿವೆ. ಅವುಗಳ ಪೈಕಿ ಕೆಲ ಲ್ಯಾಬ್‌ಗಳ ಮೇಲೆ ಒತ್ತಡವಿದೆ. ಇದನ್ನು ನಿವಾರಿಸಿ ದಿನದ 24 ತಾಸಿನಲ್ಲಿ ವರದಿ ನೀಡುವ ವ್ಯವಸ್ಥೆ ಜಾರಿಗೊಳಿಸುವ ಸಲುವಾಗಿ ಹಿರಿಯ ಅಧಿಕಾರಿ ಶಾಲಿನಿ ರಜನೀಶ್‌ ಅವರನ್ನು ನೇಮಕ ಮಾಡಲಾಗಿದೆ. ಹಾಗೆಯೇ ಟೆಸ್ಟ್‌ಗಳ ಸಂಖ್ಯೆಯನ್ನು ದಿನವೊಂದಕ್ಕೆ 30 ಸಾವಿರಕ್ಕೆ ಹೆಚ್ಚಿಸುವ ಗುರಿ ಹಾಕಿಕೊಳ್ಳಲಾಗಿದೆ. ಖಾಸಗಿ ಲ್ಯಾಬ್‌ಗಳೂ ಕೂಡ ಪೂಣ೯ ಪ್ರಮಾಣದಲ್ಲಿ ಟೆಸ್ಟ್‌ಗಳನ್ನು ಮಾಡಲೇ ಬೇಕು. ಒಂದು ವೇಳೆ ನಿರಾಕರಿಸಿದರೆ ಕ್ರಮ ಜರುಗಿಸಲಾಗುವುದು. ಅಂತಹ ಖಾಸಗಿ ಮೆಡಿಕಲ್‌ ಕಾಲೇಜುಗಳ ಮಾನ್ಯತೆ ನವೀಕರಣ ಮಾಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ನಮ್ಮಲ್ಲಿ ಹಾಸಿಗೆ ಕೊರತೆ ಇಲ್ಲ. ಹಂಚಿಕೆಯಲ್ಲಿನ ಗೊಂದಲ

ನಮ್ಮಲ್ಲಿ ಹಾಸಿಗೆ ಕೊರತೆ ಇಲ್ಲ. ಹಂಚಿಕೆಯಲ್ಲಿನ ಗೊಂದಲ

ನಮ್ಮಲ್ಲಿ ಕೋವಿಡ್‌ ಕೇರ್‌ , ಸಕಾ೯ರಿ ಮೆಡಿಕಲ್‌ ಕಾಲೇಜು ಆಸ್ಪತ್ರೆಗಳಲ್ಲಿ 819 ಹಾಸಿಗೆಗಳ ಪೈಕಿ 152 ಖಾಲಿಯಿವೆ, ಖಾಸಗಿ ಮೆಡಿಕಲ್‌ ಕಾಲೇಜು ಆಸ್ಪತ್ರೆಗಳಲ್ಲಿ 1899ಹಾಸಿಗೆ ಪೈಕಿ 779 ಲಭ್ಯವಿವೆ, ಸಕಾ೯ರಿ ಆಸ್ಪತ್ರೆಗಳಲ್ಲಿ 611ರಲ್ಲಿ ಇನ್ನೂ105 ಖಾಲಿಯಿವೆ ಮತ್ತು ಖಾಸಗಿ ಆಸ್ಪತ್ರೆಗಳ ಹಾಸಿಗೆಗಳಿವೆ. ಖಾಸಗಿ ಆಸ್ಪತ್ರೆಗಳು ನಮಗೆ 2734ಹಾಸಿಗೆ ನೀಡಬೇಕಿದ್ದು ಇದುವರೆಗೆ 116 ಮಾತ್ರ ನೀಡಿದ್ದಾರೆ. ಹೀಗಾಗಿ ನಮ್ಮಲ್ಲಿ ಹಾಸಿಗೆ ಕೊರತೆ ಇಲ್ಲ. ಹಂಚಿಕೆಯಲ್ಲಿನ ಗೊಂದಲ ನಿವಾರಣೆ ಆಗಿ ಒಂದೆರಡು ದಿನದಲ್ಲಿ ಎಲ್ಲವೂ ಸರಿಯಾಗಲಿದೆ. ಜನರು ಗೊಂದಲಕ್ಕೆ ಒಳಗಾಗುವ, ಆತಂಕಪಡುವ ಅಗತ್ಯವಿಲ್ಲ ಎಂದರು.

ಹೋಮ್ ಐಸೋಲೇಶನ್ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರ್ಕಾರಹೋಮ್ ಐಸೋಲೇಶನ್ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರ್ಕಾರ

ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿದೆ ನಿಜ

ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿದೆ ನಿಜ

ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿದೆ ನಿಜ. ಅದನ್ನು ನಿರೀಕ್ಷಿಸಲಾಗಿತ್ತು, ಇನ್ನೂ ಹೆಚ್ಚಾಗಲಿದೆ. ಅದಕ್ಕೆ ತಕ್ಕಂತೆ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ಮುಖ್ಯಮಂತ್ರಿಯವರು ಇದಕ್ಕಾಗಿ ಹಗಲು ರಾತ್ರಿ ದುಡಿಯುತ್ತಿದ್ದಾರೆ. ನಮ್ಮ ವೈದ್ಯರು ಮತ್ತು ಸಿಬ್ಬಂದಿ ಕೂಡ ಹೈರಾಣಾಗಿದ್ದಾರೆ. ಅವರು ನಾಲ್ಕು ತಿಂಗಳುಗಳಿಂದ ಜೀವದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ. ವಾಸ್ತವ ಸಂಗತಿ ಅಥ೯ ಮಾಡಿಕೊಂಡು ಸಾವ೯ಜನಿಕರು, ಪ್ರತಿ ಪಕ್ಷನಾಯಕರು ಸಕಾ೯ರದ ಜತೆ ಸಹಕರಿಸಬೇಕು ಎಂದು ಮನವಿ ಮಾಡಿದರು.

English summary
Karnataka to bring law for mandatory home isolation of people aged above 60 said Minister Sudhakar said in a press conference here on Sunday at Vidhana Soudha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X