ಅಂಬೇಡ್ಕರ್ ಅವರ ಹೆಸರಿನಲ್ಲಿ ವಿಶ್ವದರ್ಜೆಯ ಬಿಸಿನೆಸ್ ಸ್ಕೂಲ್ : ರಾಯರೆಡ್ಡಿ
ಬೆಂಗಳೂರು ವಿಶ್ವವಿದ್ಯಾಲಯದ ಆವರಣದ 44 ಎಕರೆ ಪ್ರದೇಶದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಹೆಸರಿನಲ್ಲಿ ನಿರ್ಮಿಸುತ್ತಿರುವ ವಿಶ್ವದರ್ಜೆ ಮಟ್ಟದ ಬಿಸಿನೆಸ್ ಸ್ಕೂಲ್ ಆಫ್ ಎಕಾನಾಮಿಕ್ಸ್ ಪ್ರಸಕ್ತ ಏಪ್ರಿಲ್‍ನಲ್ಲಿ ಉದ್ಫಾಟನೆಗೊಳ್ಳಲಿದೆ
ಬೆಂಗಳೂರು, ಜನವರಿ 18: ಬೆಂಗಳೂರು ವಿಶ್ವವಿದ್ಯಾಲಯದ ಆವರಣದ 44 ಎಕರೆ ಪ್ರದೇಶದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಹೆಸರಿನಲ್ಲಿ ನಿರ್ಮಿಸುತ್ತಿರುವ ವಿಶ್ವದರ್ಜೆ ಮಟ್ಟದ ಬಿಸಿನೆಸ್ ಸ್ಕೂಲ್ ಆಫ್ ಎಕಾನಾಮಿಕ್ಸ್ ಪ್ರಸಕ್ತ ಏಪ್ರಿಲ್‍ನಲ್ಲಿ ಉದ್ಫಾಟನೆಗೊಳ್ಳಲಿದೆ ಎಂದು ತಿಳಿಸಿದರು.
ದೇಶದಲ್ಲಿ ಒಟ್ಟು ಒಂದು ಲಕ್ಷ ವಿದೇಶಿ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದು ಅದರಲ್ಲಿ 36,000 ಕ್ಕೂ ಹೆಚ್ಚು ವಿದೇಶಿ ವಿದ್ಯಾರ್ಥಿಗಳು ಕರ್ನಾಟಕದಲ್ಲಿ ಶಿಕ್ಷಣ ಪಡೆಯುತ್ತಿರುವುದು ಹೆಮ್ಮೆಯ ವಿಚಾರ ಎಂದರು.
ರಾಜ್ಯದ 412 ಪದವಿ ಕಾಲೇಜುಗಳಲ್ಲಿ 101 ಕಾಲೇಜುಗಳು ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು ಸ್ವಂತ ಕಟ್ಟಡವಿಲ್ಲ, ಕೆಲ ಕಾಲೇಜುಗಳಲ್ಲಿ ಮೂಲ ಸೌಕರ್ಯದ ಕೊರತೆಯಿದ್ದು ಶಿಕ್ಷಣ ಮಟ್ಟವನ್ನು ಸಹ ಸುಧಾರಿಸುವ ಅಗತ್ಯವಿದೆ.

ಅದಕ್ಕಾಗಿ ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗಾಗಿ ಯೋಜನೆಯೊಂದನ್ನು ರೂಪಿಸಿದ್ದು, ಶೀಘ್ರದಲ್ಲಿ ಸಚಿವ ಸಂಪುಟದ ಅನುಮೋದನೆ ಪಡೆದು ವಿಶ್ವ ಬ್ಯಾಂಕ್ ಸಹಾಯ ಕೋರಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರು ತಿಳಿಸಿದರು.
3,000 ದಿಂದ 3,500 ಕೋಟಿ ರೂ ಗಳ ಅಗತ್ಯವಿದ್ದು ಇದಕ್ಕಾಗಿ ರಾಜ್ಯ ಸರ್ಕಾರ ಗಂಭೀರ ಚಿಂತನೆಯಲ್ಲಿದೆ. ಪ್ರಸುತ್ತ ರಾಜ್ಯದಲ್ಲಿ 9,000 ಉಪನ್ಯಾಸಕರ ಹುದ್ದೆಗಳಿದ್ದು ಅದರಲ್ಲಿ 3,000 ಹುದ್ದೆಗಳು ಖಾಲಿ ಇದ್ದವು. ಇತ್ತೀಚೆಗೆ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ 2,150 ಹುದ್ದೆಗಳನ್ನು ಭರ್ತಿಮಾಡಲಾಗಿದ್ದು, ಉಳಿದ ಹುದ್ದೆಗಳಿಗೆ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುವುದು.
ರಾಜ್ಯದಲ್ಲಿರುವ 412 ಪದವಿ ಕಾಲೇಜುಗಳಲ್ಲಿ 42 ಕಾಲೇಜುಗಳಲ್ಲಿ ಮಾತ್ರ ಖಾಯಂ ಪ್ರಾಂಶುಪಾಲರುಗಳಿದ್ದು, ಉಳಿದ ಕಾಲೇಜುಗಳಲ್ಲಿನ ಪ್ರಾಂಶುಪಾಲ ಹುದ್ದೆಗಳು ಖಾಲಿ ಇವೆ. ನಿಯಮಾವಗಳಿಗಳ ಪ್ರಕಾರ ಕ್ರಮಕೈಗೊಂಡು ಮುಂದಿನ ಶೈಕ್ಷಣಿಕ ವರ್ಷದೊಳಗೆ ಖಾಲಿ ಹುದ್ದೆಗಳನ್ನು ಭರ್ತಿಮಾಡಲು ಕ್ರಮ ಕೈಗೊಳ್ಳಲಿದ್ದೇವೆ ಎಂದು ಹೇಳಿದರು.
ರಾಜ್ಯದಲ್ಲಿ ಶೇ 94 ವಿದ್ಯಾರ್ಥಿಗಳು ಪ್ರಾಥಮಿಕ ಶಿಕ್ಷಣ ಪಡೆಯುತ್ತಿದ್ದು, ಪ್ರೌಢ ಶಿಕ್ಷಣಕ್ಕೆ ನೋಂದಾಯಿಸಿಕೊಳ್ಳುವಷ್ಟರಲ್ಲಿ ಅದು ಶೇ 57 ಕ್ಕೆ ಇಳಿಯುತ್ತದೆ. ಪದವಿ ಶಿಕ್ಷಣಕ್ಕೆ ನೋಂದಾಯಿಸಿಕೊಳ್ಳುತ್ತಿರುವುದು ಕೇವಲ ಶೇ 27 ಮಾತ್ರ ಎಂಬ ಮಾಹಿತಿ ತಿಳಿದು ಬಂದಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಸರ್ಕಾರಿ PU ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ಬರೋಬ್ಬರಿ 9,383 ರೂ. ಲಕ್ಷ ಅನುದಾನ ಮಂಜೂರು -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
CBSE ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಹೊಸ ನಿಯಮ ಜಾರಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ












Click it and Unblock the Notifications