ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು: ಅಪಾರ್ಟ್‌ಮೆಂಟ್‌ಗಳಲ್ಲಿ ಕೊರೊನಾ ಲಸಿಕಾ ಕೇಂದ್ರ ಸ್ಥಾಪನೆ?

|
Google Oneindia Kannada News

ಬೆಂಗಳೂರು, ಮಾರ್ಚ್ 17: ಇನ್ನುಮುಂದೆ ಅಪಾರ್ಟ್‌ಮೆಂಟ್‌ಗಳಲ್ಲೂ ಕೊರೊನಾ ಲಸಿಕಾ ಕೇಂದ್ರ ಸ್ಥಾಪನೆ ಮಾಡಲು ರಾಜ್ಯ ಸರ್ಕಾರ ಆಲೋಚಿಸುತ್ತಿದೆ.

ರಾಜ್ಯದ 7 ಜಿಲ್ಲೆಗಳಲ್ಲಿರುವ ದೊಡ್ಡ ಅಪಾರ್ಟ್‌ಮೆಂಟ್ ಸಂಕೀರ್ಣದಲ್ಲಿ ಲಸಿಕೆ ಕೇಂದ್ರಗಳನ್ನು ಸ್ಥಾಪಿಸಲು ಮುಂದಾಗಿದೆ. ಲಸಿಕೆ ಪ್ರಕ್ರಿಯೆಯನ್ನು ವೇಗಗೊಳಿಸಲು ಈ ರೀತಿಯ ಕ್ರಮವು ಸಹಾಯ ಮಾಡುತ್ತದೆ ಎಂದು ಇತ್ತೀಚಿಗೆ ನಡೆದ ಕೋವಿಡ್ ಸಲಹಾ ಸಮಿತಿಯು ಈ ಸಲಹೆಯನ್ನು ನೀಡಿದೆ.

ಬೆಂಗಳೂರಿನಲ್ಲಿ ಹೆಚ್ಚಾದ‌ ಕೊರೋನಾ ಆತಂಕ, 6 ಏರಿಯಾಕ್ಕೆ ಎಚ್ಚರ!ಬೆಂಗಳೂರಿನಲ್ಲಿ ಹೆಚ್ಚಾದ‌ ಕೊರೋನಾ ಆತಂಕ, 6 ಏರಿಯಾಕ್ಕೆ ಎಚ್ಚರ!

ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳೊಂದಿಗಿನ ಪ್ರಧಾನ ಮಂತ್ರಿಗಳ ವಿಡಿಯೋ ಸಮ್ಮೇಳನದಲ್ಲಿ, ಆರೋಗ್ಯ ಸ್ಥಿತಿ ವಯೋಮಾನವನ್ನು ಸಡಿಲಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಬೇಕು ಎಂದು ಸಮಿತಿ ಸದಸ್ಯರು ಹೇಳಿದ್ದಾರೆ.

 ಮನೆ ಬಾಗಿಲಿಗೇ ಕೊರೊನಾ ಲಸಿಕೆ

ಮನೆ ಬಾಗಿಲಿಗೇ ಕೊರೊನಾ ಲಸಿಕೆ

ಹೆಚ್ಚಿನ ಜನಸಂಖ್ಯೆ ಇರುವ ಸ್ಥಳಗಳಲ್ಲಿ ಮೊಬೈಲ್ ವ್ಯಾಕ್ಸಿನೇಷನ್ ಕೇಂದ್ರಗಳನ್ನು ಸ್ಥಾಪಿಸಲು ಅದಿಕ ಸಮಯ ತೆಗೆದುಕೊಳ್ಳುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಹಿರಿಯ ನಾಗರಿಕರು ಆಸ್ಪತ್ರೆಗಳಿಗೆ ಕರೆತರಲು ಬೇರೊಬ್ಬರನ್ನು ಅವಲಂಬಿಸಬೇಕಾಗಿಲ್ಲವಾದ್ದರಿಂದ ಮನೆ ಬಾಗಿಲಿಗೆ ಹೋಗಿ ಲಸಿಕೆ ನೀಡುವುದರಿಂದ ಅವರಿಗೆ ಸಹಾಯವಾಗುತ್ತದೆ.

 ತುರ್ತಾಗಿ ಆಸ್ಪತ್ರೆಗೆ ದಾಖಲಿಸಬಹುದು

ತುರ್ತಾಗಿ ಆಸ್ಪತ್ರೆಗೆ ದಾಖಲಿಸಬಹುದು

ಸೌಲಭ್ಯಗಳು ಹಾಗೂ ಫಲಾನುಭವಿಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಬಹುದು. ಆ್ಯಂಬುಲೆನ್ಸ್ ಗಳಿಂದ ತುರ್ತಾಗಿ ಆಸ್ಪತ್ರೆಗೆ ದಾಖಲಿಸಬಹುದಾಗಿದೆ ಎಂದು ಕಮಿಟಿಯ ಮತ್ತೊಬ್ಬ ಸದಸ್ಯ ಹೇಳಿದ್ದಾರೆ.

 ಅಪಾರ್ಟ್‌ಮೆಂಟ್‌ಗಳಲ್ಲಿ ಕೊರೊನಾ ಲಸಿಕಾ ಕೇಂದ್ರ

ಅಪಾರ್ಟ್‌ಮೆಂಟ್‌ಗಳಲ್ಲಿ ಕೊರೊನಾ ಲಸಿಕಾ ಕೇಂದ್ರ

ಅಪಾರ್ಟ್ ಮೆಂಟ್ ಸಂಕೀರ್ಣಗಳಲ್ಲಿ ಲಸಿಕಾ ಕೇಂದ್ರ ತೆರೆಯುವಂತೆ ಸರ್ಕಾರಕ್ಕೆ ಸಲಹೆ ನೀಡಿದ್ದೇವೆ, ಅಲ್ಲಿ ನಾವು ಲಸಿಕೆಗಳ ಮೇಲ್ವಿಚಾರಣೆ ಮತ್ತು ಸಂಗ್ರಹಣೆಗಾಗಿ ಎಲ್ಲಾ ಸೌಲಭ್ಯಗಳನ್ನು ಹೊಂದಿರುವ ಮೊಬೈಲ್ ವ್ಯಾನ್‌ಗಳನ್ನು ಹೊಂದಬಹುದು, ಹಾಗೂ ಮನೆ ಬಾಗಲಿಗೆ ತೆರಳಿ ಲಸಿಕೆ ನೀಡಲು ಸಹಯವಾಗುತ್ತದೆ ಎಂದು ಸಲಹ ಸಮಿತಿ ಸದಸ್ಯ ಡಾ.ಸಿಎನ್ ಮಂಜುನಾಥ್ ಹೇಳಿದ್ದಾರೆ.

Recommended Video

ಕೊರೊನಾ ನಿಯಂತ್ರಣಕ್ಕೆ ಜಿಲ್ಲಾಡಳಿತದಿಂದ ಕಟ್ಟುನಿಟ್ಟಿನ ಕ್ರಮ, ಮಾಸ್ಕ್‌ ಧರಿಸದಿದ್ದರೆ ದಂಡ ಹಾಕಲು ಸೂಚನೆ | Oneindia Kannada
 ಮೊಬೈಲ್ ವ್ಯಾಕ್ಸಿನೇಷನ್ ಕೇಂದ್ರಗಳ ಸ್ಥಾಪನ

ಮೊಬೈಲ್ ವ್ಯಾಕ್ಸಿನೇಷನ್ ಕೇಂದ್ರಗಳ ಸ್ಥಾಪನ

ತಜ್ಞರ ಪ್ರಕಾರ, ಅಂತಹ ಕೇಂದ್ರವನ್ನು ಸ್ಥಾಪಿಸುವ ಲಾಜಿಸ್ಟಿಕ್ಸ್ ಅನ್ನು ರೂಪಿಸಲಾಗುತ್ತಿದೆ ಮತ್ತು ಶೀಘ್ರದಲ್ಲೇ ಅದನ್ನು ಕಾರ್ಯಗತಗೊಳಿಸಲಾಗುತ್ತದೆ.

English summary
The Karnataka government may soon set up vaccination centres on the lines of testing centres at big apartment complexes in seven districts.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X