ಬೆಂಗಳೂರು ಅಭಿವೃದ್ಧಿಗೆ ಕರ್ನಾಟಕ ಸರಕಾರದಿಂದ ರೂ. 11,797 ಕೋಟಿ

ಬೆಂಗಳೂರು, ಜನವರಿ 31: ಬೃಹತ್ ಬೆಂಗಳೂರು ಅಭಿವೃದ್ಧಿಗೆ ಕರ್ನಾಟಕ ಸರಕಾರ ರೂಪಾಯಿ 11,797 ಕೋಟಿ ಖರ್ಚು ಮಾಡಲಿದೆ. 2019-20ರ ಮೊದಲು ಈ ಹಣವನ್ನು ಖರ್ಚು ಮಾಡಲಾಗುತ್ತದೆ ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೆಜೆ ಜಾರ್ಜ್ ಹೇಳಿದ್ದಾರೆ.

ರೂ. 3,602 ಕೋಟಿ ವೆಚ್ಚದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳಲಿದೆ ಎಂದು ಜಾರ್ಜ್ ಮಾಹಿತಿ ನೀಡಿದ್ದಾರೆ.

ಇದರಲ್ಲಿ 150 ಕಿಲೋಮೀಟರ್ ರಸ್ತೆಗೆ 1,000 ಕೋಟಿ ರೂಪಾಯಿ ವೆಚ್ಚದಲ್ಲಿ ವೈಟ್ ಟ್ಯಾಪಿಂಗ್, ಕೆರೆ ಅಭಿವೃದ್ಧಿಗೆ 200 ಕೋಟಿ ರೂಪಾಯಿ, ಗ್ರೇಡ್ ಪ್ರತ್ಯೇಕತೆಗೆ ರೂ. 400 ಕೋಟಿ, ಪ್ರವಾಹ ಮತ್ತು ಮಳೆ ನೀರು ನಿರ್ವಹಣೆಗೆ ರೂ. 672 ಕೋಟಿ ರೂಪಾಯಿ, 6 ಬಹು ಅಂತಸ್ತಿನ ಪಾರ್ಕಿಂಗ್ ಕಟ್ಟಡಗಳ ನಿರ್ಮಾಣಕ್ಕೆ ರೂ. 200 ಕೋಟಿ ವೆಚ್ಚ ಮಾಡಲಾಗುವುದು ಎಂದು ಜಾರ್ಜ್ ಹೇಳಿದ್ದಾರೆ.

Karnataka to spend Rs 11,797 Cr for Bengaluru Development

ಇನ್ನು ಸದ್ಯ ನಡೆಯುತ್ತಿರುವ ಕಾಮಗಾರಿಗಳಿಗೆ ರೂ. 5066 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಜಾರ್ಜ್ ಭರವಸೆ ನೀಡಿದ್ದಾರೆ. ಒಟ್ಟಾರೆ 2018 - 19ರಲ್ಲಿ ರೂ. 7804 ಕೋಟಿ ಹಾಗೂ 2019-20ರಲ್ಲಿ ರೂ. 3993 ಕೋಟಿ ರೂಪಾಯಿ ಖರ್ಚು ಮಾಡಲಾಗುವುದು ಎಂದು ಜಾರ್ಜ್ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+