• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಇಂದಿನಿಂದ ಹಂತ ಹಂತವಾಗಿ ಕರ್ನಾಟಕ ಅನ್‌ಲಾಕ್: 11 ಜಿಲ್ಲೆಗಳಲ್ಲಿ ಲಾಕ್‌ಡೌನ್ ಯಥಾಸ್ಥಿತಿ

|
Google Oneindia Kannada News

ಬೆಂಗಳೂರು, ಜೂನ್ 14: ಕಳೆದ ಏಪ್ರಿಲ್ 27ರಿಂದ ಕರ್ನಾಟಕದಲ್ಲಿ ಜಾರಿ ಮಾಡಲಾಗಿದ್ದ ಕೋವಿಡ್ -19 ಲಾಕ್‌ಡೌನ್‌ನ್ನು ಇಂದಿನಿಂದ (ಸೋಮವಾರ) ಅಲ್ಪ ಸಡಿಲಿಕೆ ಮಾಡಲಾಗುತ್ತಿದೆ.

ಕೊರೊನಾ ಸೋಂಕಿನ ಪ್ರಮಾಣ ಕಡಿಮೆಯಾಗದ 11 ಜಿಲ್ಲೆಗಳನ್ನು ಹೊರತುಪಡಿಸಿ, ರಾಜ್ಯಾದ್ಯಂತ ಹಂತ ಹಂತವಾಗಿ ಅನ್‌ಲಾಕ್ ಪ್ರಕ್ರಿಯೆ ಪ್ರಾರಂಭವಾಗಿದೆ.

ಸೋಮವಾರದಿಂದ ಬಿಎಂಟಿಸಿ ಬಸ್ ಸಂಚಾರ; ಷರತ್ತು ಅನ್ವಯಸೋಮವಾರದಿಂದ ಬಿಎಂಟಿಸಿ ಬಸ್ ಸಂಚಾರ; ಷರತ್ತು ಅನ್ವಯ

"ಕೋವಿಡ್- 19 ತಾಂತ್ರಿಕ ಸಲಹಾ ಸಮಿತಿ ನೀಡಿದ ಸಲಹೆಗಳ ಆಧಾರದ ಮೇಲೆ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಕಳೆದ ಗುರುವಾರ ಹೇಳಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ ಬಂದರೆ ಅದು ಮತ್ತಷ್ಟು ಅನ್‌ಲಾಕ್ ಘೋಷಿಸಲು ಸರ್ಕಾರಕ್ಕೆ ಅನುಕೂಲವಾಗುತ್ತದೆ ಮತ್ತು ಈ ನಿಟ್ಟಿನಲ್ಲಿ ಜನರ ಸಹಕಾರವನ್ನು ಕೋರುತ್ತಿದ್ದೇನೆ'' ಎಂದು ಹೇಳಿದ್ದರು.

ಕರ್ನಾಟಕ ಸರ್ಕಾರ ಏಪ್ರಿಲ್ 27 ರಿಂದ 14 ದಿನಗಳ ಲಾಕ್‌ಡೌನ್ ಘೋಷಿಸಿತ್ತು ಮತ್ತು ನಂತರ ಕೋವಿಡ್ -19 ಪ್ರಕರಣಗಳು ಹೆಚ್ಚಾದ ಬಳಿಕ ಮೇ 10ರಿಂದ ಮೇ 24 ರವರೆಗೆ ಸಂಪೂರ್ಣ ಲಾಕ್‌ಡೌನ್ ವಿಧಿಸಿತು. ಲಾಕ್‌ಡೌನ್‌ನಿಂದ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಕಡಿಮೆಯಾಗುತ್ತಿವೆ ಎಂದು ತಜ್ಞರು ಹೇಳಿದ್ದರಿಂದ ಇದನ್ನು ಜೂನ್ 7ರಿಂದ ಜೂನ್ 14ರವರೆಗೆ ವಿಸ್ತರಿಸಲಾಯಿತು.

   ಗುಜರಾತ್ ಬದಲಾಗುತ್ತೆ ಅಂತ ಟ್ವೀಟ್ ಮಾಡಿದಾರೆ ಕೇಜ್ರಿವಾಲ್!! | Oneindia Kannada

   ಈಗಿರುವ ಲಾಕ್‌ಡೌನ್ ನಿಯಮಗಳು ಚಿಕ್ಕಮಗಳೂರು, ದಾವಣಗೆರೆ, ಮೈಸೂರು, ಹಾಸನ, ಚಾಮರಾಜನಗರ, ಮಂಡ್ಯ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಬೆಳಗಾವಿ ಮತ್ತು ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ಪರೀಕ್ಷಾ ಸಕಾರಾತ್ಮಕ ದರ (ಟಿಪಿಆರ್) ಯೊಂದಿಗೆ ಮುಂದುವರಿಯುತ್ತದೆ. 11 ಜಿಲ್ಲೆಗಳ ಉಸ್ತುವಾರಿ ಸಚಿವರೊಂದಿಗೆ ಸಮಾಲೋಚಿಸಿ ಕಠಿಣ ಕ್ರಮಗಳನ್ನು ಜಾರಿಗೆ ತರಲು ಸರ್ಕಾರ ಜಿಲ್ಲಾಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ನೀಡಿದೆ.

   English summary
   Karnataka Lockdown Update: 19 Districts to Partly Unlock From Today. Check Guidelines, Timings and lockdown to continue in 11 districts.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X