ಕರ್ನಾಟಕ ಪ್ರವಾಸಕ್ಕೂ ಮುನ್ನ ಸಿಎಂ ಬೊಮ್ಮಾಯಿ ಜೊತೆ ಮೋದಿ ಚರ್ಚೆ

ಬೆಂಗಳೂರು, ಜೂನ್ 9: ಜೂನ್ 20 ಹಾಗೂ 21ರಂದು ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದು ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ರಾಜ್ಯದಲ್ಲಿ ಎರಡು ದಿನಗಳ ಪ್ರವಾಸ ಕೈಗೊಳ್ಳಲಿರುವ ಮೋದಿ ಇಂದು ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿದ್ದಾರೆ. ಈ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರುಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಜೊತೆಗೆ ಪ್ರವಾಸ ಕಾರ್ಯಕ್ರಮದ ವಿವರಗಳ ಕುರಿತು ಚರ್ಚಿಸಿದ್ದಾರೆ.

ಈ ಸಂದರ್ಭದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಉದ್ಘಾಟನೆ ಹಾಗೂ ಶಂಕುಸ್ಥಾಪನೆಗೆ ಪ್ರಸ್ತಾಪಿಸಲಾದ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.

Karnataka tour: Modi speaks with Bommai via video conference

ಸಭೆಯ ನಂತರ ರಾಜ್ಯ ಸರ್ಕಾರದ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ''ಪ್ರಧಾನಿಗಳ ಭೇಟಿ ಕಾರ್ಯಕ್ರಮಕ್ಕೆ ಸಕಲ ರೀತಿಯ ಸಿದ್ಧತೆ ಮಾಡಿಕೊಳ್ಳಿ. ಯಾವುದೇ ರೀತಿಯ ಲೋಪಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಿ'' ಎಂದು ಕಟ್ಟು ನಿಟ್ಟಿನ‌ ಸೂಚನೆ ನೀಡಿದರು. ಯೋಗ ದಿನಾಚರಣೆಗೆ ಸಮರ್ಪಕ ಸಿದ್ಧತೆ ಮಾಡಿಕೊಳ್ಳಿ ಎಂದು ಹೇಳಿದ ಅವರು, ಪ್ರಧಾನಿಗಳ ಎರಡು ದಿನಗಳ ಸಿದ್ಧತೆಗಳ ಕುರಿತು ವಿವರವಾಗಿ ಚರ್ಚಿಸಿದರು.

ಪ್ರಧಾನಿ ಮೋದಿ ಆಗಮನ: ಮೈಸೂರಿನ ರಸ್ತೆಗಳಿಗೆ ಬಂತು ಜೀವ ಕಳೆ

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ಲೋಕೋಪಯೋಗಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಬಿ.ಎಚ್. ಅನಿಲ್ ಕುಮಾರ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಕೌಶಲ್ಯಾಭಿವೃದ್ಧಿ ಮತ್ತು ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಎಸ್.ಸೆಲ್ವಕುಮಾರ್, ಮುಖ್ಯಮಂತ್ರಿಯವರ ಕಾರ್ಯದರ್ಶಿ ಎಂ.ಎಸ್. ಶ್ರೀಕರ್, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ರಶ್ಮಿ ಮಹೇಶ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಮೈಸೂರಲ್ಲಿ ಸಂಭ್ರಮದ ತಯಾರಿ:
ಮೈಸೂರಿನ ಅರಮನೆ ಮೈದಾನದಲ್ಲಿ ಜೂನ್‌ 21 ರಂದು ವಿಶ್ವ ಯೋಗ ದಿನಾಚರಣೆ ನಡೆಯಲಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಈ ಕಾರ್ಯಕ್ರಮ ಜರುಗಲಿದೆ. ಹಾಗಾಗಿ ಇದುವರೆಗೆ ಜಡ್ಡುಗಟ್ಟಿದ್ದ ಪಾಲಿಕೆ ಆಕ್ಟೀವ್ ಮೂಡ್‌ಗೆ ಬಂದಿದ್ದು ಪ್ರಧಾನಿ ನರೇಂದ್ರ ಮೋದಿ ಸಂಚರಿಸುವ ರಸ್ತೆ ಸೇರಿದಂತೆ ನಗರದ ಹೃದಯ ಭಾಗಗಳಲ್ಲಿ ಕಿತ್ತು ಹೋಗಿದ್ದ ರಸ್ತೆಗಳನ್ನು ಸರಿಪಡಿಸುವ ಕಾರ್ಯಕ್ಕೆ ಮುಂದಾಗಿದೆ.

Karnataka tour: Modi speaks with Bommai via video conference

ಪ್ರಧಾನಿ ನರೇಂದ್ರ ಮೋದಿ ಅರಮನೆ ಅಂಗಳದಲ್ಲಿ ನಡೆಯುವ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸಲಿರುವುದರಿಂದ ಕಾರ್ಯಕ್ರಮಕ್ಕೆ ಹೆಚ್ಚಿನ ಪ್ರಾಧ್ಯಾನ್ಯತೆ ದೊರೆತಿದ್ದು, ಹಿಂದೊಮ್ಮೆ ಸ್ವಚ್ಛ ನಗರಿ ಎಂಬ ಖ್ಯಾತಿ ಪಡೆದಿದ್ದ ನಗರವನ್ನು ಪ್ರಧಾನಿ ನೋಡಿ ಖುಷಿಪಡುವಂತೆ ಮಾಡುವ ಕಾರ್ಯ ಸಮಾರೋಪಾದಿಯಲ್ಲಿ ಸಾಗುತ್ತಿದೆ.

Recommended Video

      ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಮೊದಲ ಪಂದ್ಯದಲ್ಲೇ ಸೋಲು | *Cricket | OneIndia Kannada

      ಮೈಸೂರು ಅರಮನೆ ಸುತ್ತಮುತ್ತಲಿನ ಪ್ರದೇಶ, ಪ್ರಧಾನಿಗಳು ಸಂಚರಿಸುವ ಮಾರ್ಗ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಮಳೆ ನೀರು ಚರಂಡಿಗಳಲ್ಲಿ ಬೆಳೆದಿರುವ ಗಿಡ ಗಂಟೆಗಳು, ಒಳ ಚರಂಡಿಗಳಲ್ಲಿ ತುಂಬಿರುವ ಹೂಳು ತೆಗೆದು ಸ್ವಚ್ಛಗೊಳಿಸಲಾಗುತ್ತಿದೆ. ಮಹಾನಗರ ಪಾಲಿಕೆ ಅಧಿಕಾರಿಗಳು ಹಗಲು-ರಾತ್ರಿ ಎನ್ನದೇ ಕಾಮಗಾರಿ ನಡೆಸುತ್ತಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+