ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಧರಣಿಗೆ ದಿನಾಂಕ ಫಿಕ್ಸ್: ಬೇಡಿಕೆಗಳೇನು?
ಬೆಂಗಳೂರು, ಫೆಬ್ರವರಿ 20: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಾರಿಗೆ ನೌಕರರು ಮತ್ತೆ ಬೀದಿಗೆ ಇಳಿಯಲಿದ್ದಾರೆ. ಸರ್ಕಾರಿ ನೌಕರರ ಸರಿಸಮಾನ ವೇತನ ಸೇರಿದಂತೆ ಹಲವು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ನೌಕರರು ಪ್ರತಿಭಟಿಸಲು ತೀರ್ಮಾನಿಸಿದ್ದಾರೆ.
ಮುಂದಿನ ತಿಂಗಳ ಮಾರ್ಚ್ 4ರಂದು ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲು ತೀರ್ಮಾನಿಸಿದ್ದಾರೆ. ಈ ಹಿಂದಿನ ಸಾರಿಗೆ ನೌಕರರ ಹಿಂದಿನ ಮುಷ್ಕರಗಳಲ್ಲಿ ಸಿಬ್ಬಂದಿ ಮೇಲೆ ದಾಖಲಾದ ಪ್ರಕರಣ ಹಿಂಪಡೆಯಬೇಕು. ನಮಗೂ ಸರಿಸಮಾನ ವೇತನ, ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿರುವ ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ ವತಿಯಿಂದ ಈ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕ ಮಾಹಿತಿ ನೀಡಿದೆ.

60ಕ್ಕೂ ಹೆಚ್ಚು ಕೇಸ್ ರದ್ದಿಗೆ ಆಗ್ರಹ
ಕಳೆದ 2020ರ ಡಿಸೆಂಬರ್ ಹಾಗೂ ನಂತರ ವರ್ಷದ 2021ರ ಏಪ್ರಿಲ್ ಸಾರಿಗೆ ನೌಕರರ ಮುಷ್ಕರಕ್ಕೆ ಸಂಬಂಧಿಸಿ ಕಾರ್ಮಿಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅವರ ವಿರುದ್ಧ ಕೈಗೊಂಡ ಎಲ್ಲಾ ಶಿಸ್ತಿನ ಕ್ರಮಗಳನ್ನು ಹಾಗೂ ದಾಖಲಾದ 60ಕ್ಕೂ ಹೆಚ್ಚು ಪ್ರಕರಣವನ್ನು ರದ್ದುಗೊಳಿಸಬೇಕು ಎಂದು ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಬಿ.ಎಸ್.ಸುರೇಶ್ ಮಾಹಿತಿ ನೀಡಿದರು.
ಇನ್ನೂ ಪೂರ್ವದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸ್ಥಳಕ್ಕೆ ನಿಯೋಜಿಸಬೇಕು. 2020ರ ಜ.1ರಿಂದ ಅನ್ವಯವಾಗುವಂತೆ ನಾಲ್ಕು ಸಾರಿಗೆ ನಿಗಮಗಳ ಸಿಬ್ಬಂದಿಗೆ ಒಂದೇ ಕಂತಿನಲ್ಲಿ ವೇತನದ ಹಿಂಬಾಕಿ ಪಾವತಿಸಬೇಕು. ಅಲ್ಲದೇ 2020ರಿಂದ ನಿವೃತ್ತಿಯಾದ ನೌಕರರಿಗೆ ವೇತನ ವಿಮರ್ಶೆ ಮಾಡಿ ಬಾಕಿ, ಹಿಂಬಾಕಿ ಮೊತ್ತವನ್ನು ತ್ವರಿತವಾಗಿ ಪಾವತಿ ಮಾಡಬೇಕು ಎಂದು ತಿಳಿಸಿದರು.
ಉಚಿತ ಆರೋಗ್ಯ ಭಾಗ್ಯ ಯೋಜನೆ ಜಾರಿಗೊಳಿಸಬೇಕು. ಚುನಾವಣಾ ಪೂರ್ವ ಪ್ರಣಾಳಿಕೆಯಲ್ಲಿರುವಂತೆ ಸಮಾನ ವೇತನ ಮತ್ತು ಸೌಲ ಸೌಭ್ಯವನ್ನು ಸಾರಿಗೆ ನೌಕರರಿಗೂ ಸರ್ಕಾರ ವಿಸ್ತರಣೆ ಮಾಡಬೇಕು. ದಿ ಕಾರ್ಮಿಕರ ಸಂಸ್ಥೆಗೆ ಕೂಡಲೇ ಚುನಾವಣೆ ನಡೆಸಿ, ಮಾನ್ಯತೆ ಪ್ರಶ್ನೆ ಇತ್ಯರ್ಥಗೊಳಿಸಬೇಕು ಎಂದು ಅವರು ಸರ್ಕಾರಕ್ಕೆ ಮನವಿ ಮಾಡಿದರು.
ಈ ಎಲ್ಲ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರಕ್ಕೆ ಒತ್ತಡ ತರಲು ಅನಿರ್ದಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅವರು ವಿವರಿಸಿದರು.
-
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications