AI: ಎಐ ಕ್ಷೇತ್ರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಮೈಲಿಗಲ್ಲು: ದೇಶದ ಮೊದಲ ಎಐ ವಿಶ್ವವಿದ್ಯಾಲಯ ಸೇರಿ ಮಹತ್ವದ ಘೋಷಣೆ

AI: ವಿಶ್ವದಾದ್ಯಂತ ಸುದ್ದಿಯಲ್ಲಿರುವ ಕೃತಕ ಬುದ್ಧಿಮತ್ತೆ (Artificial Intelligence)ಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರವು ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದೆ. ದೇಶದಲ್ಲಿ ಎಐ ವಿಷಯದಲ್ಲಿ ಬೆಂಗಳೂರು ಸಹ ಮುಂಚೂಣಿಯಲ್ಲಿದೆ. ವಿವಿಧ ನಗರಗಳು ಬೆಂಗಳೂರಿಗೆ ಪೈಪೋಟಿ ನೀಡುತ್ತಿವೆಯಾದರೂ ಸಹ ಬೆಂಗಳೂರು ವಿವಿಧ ವಿಚಾರಗಳಲ್ಲಿ ಮುಂಚೂಣಿಯಲ್ಲಿದೆ. ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರವು ತೆಗೆದುಕೊಂಡಿರುವ ಹೊಸ ಕ್ರಮಗಳ ಬಗ್ಗೆ ವಿವರಿಸಲಾಗಿದೆ.

ಕೃತಕ ಬುದ್ಧಿಮತ್ತೆ (AI) ಮಾನವೀಯತೆಯ ಪರವಾಗಿ ಕೆಲಸ ಮಾಡಿದಾಗ ಮಾತ್ರ ಅದರ ನಿಜವಾದ ಶಕ್ತಿ ಅನಾವರಣಗೊಳ್ಳುತ್ತದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದಾರೆ. ವೊಲ್ವರ್‌ಹ್ಯಾಂಪ್ಟನ್-ಬೆಂಗಳೂರು ಸಂಶೋಧನೆ ಮತ್ತು ನಾವೀನ್ಯತಾ ಕೇಂದ್ರ ಆಯೋಜಿಸಿದ್ದ "Leveraging Artificial Intelligence to Advance Sustainable Development Goals" ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಅವರು ಮಾತನಾಡಿದ್ದು, ಕೆಲವೊಂದು ಪ್ರಮುಖ ಮಾಹಿತಿ ಹಂಚಿಕೊಂಡಿದ್ದಾರೆ.

AI

ಆರೋಗ್ಯ, ಕೃಷಿ, ಶಿಕ್ಷಣ, ಆಡಳಿತ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲೂ ಕೃತಕ ಬುದ್ಧಿಮತ್ತೆ ಜನರ ಬದುಕನ್ನು ಉತ್ತಮಗೊಳಿಸುವ ದಿಕ್ಕಿನಲ್ಲಿ ಬಳಸಬೇಕು. ವಿದ್ಯಾರ್ಥಿಗಳು ಮತ್ತು ವಿಶ್ವವಿದ್ಯಾಲಯಗಳು AI ಕೌಶಲ್ಯಗಳ ಜೊತೆಗೆ ಸಂಶೋಧನೆ, ನಾವೀನ್ಯತೆ, ವೈಜ್ಞಾನಿಕ ಮನೋಭಾವ ಹಾಗೂ ವಿಮರ್ಶಾತ್ಮಕ ಚಿಂತನೆಯನ್ನು ಬೆಳೆಸಿಕೊಳ್ಳುವುದು ಅತ್ಯಗತ್ಯವಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಅಭಿಪ್ರಾಯಪಟ್ಟಿದ್ದಾರೆ.

ಕೃತಕ ಬುದ್ಧಿಮತ್ತೆ ನಮ್ಮನ್ನು ಕಾಪಾಡುವ ರಕ್ಷಕನಲ್ಲ. ಅದಕ್ಕೆ ಆತ್ಮಸಾಕ್ಷಿ, ಧೈರ್ಯ ಅಥವಾ ಕರುಣೆ ಇಲ್ಲ. ಆದರೆ ಆತ್ಮಸಾಕ್ಷಿ, ಧೈರ್ಯ ಮತ್ತು ಕರುಣೆ ಹೊಂದಿರುವ ಮನುಷ್ಯನ ಕೈಯಲ್ಲಿ ಅದು ಅತ್ಯಂತ ಶಕ್ತಿಯುತ ಸಾಧನವಾಗುತ್ತದೆ. ಎಐ ನಮ್ಮ ಸಮಸ್ಯೆಗಳನ್ನು ಪರಿಹರಿಸಬಹುದೇ ಎಂಬುದಕ್ಕಿಂತ, ಸಮಾಜಕ್ಕೆ ಅತ್ಯಂತ ಅಗತ್ಯವಿರುವ ಸಮಸ್ಯೆಗಳ ಪರಿಹಾರಕ್ಕಾಗಿ ನಾವು ಅದನ್ನು ಎಷ್ಟು ಜವಾಬ್ದಾರಿಯಿಂದ ಬಳಸುತ್ತೇವೆ ಎಂಬುದೇ ಮುಖ್ಯ.

ಸುಸ್ಥಿರ ಅಭಿವೃದ್ಧಿ ಗುರಿಗಳ ಸಾಧನೆಯತ್ತ ಸಾಗುವ ಸಂದರ್ಭದಲ್ಲಿ ತಂತ್ರಜ್ಞಾನ ಸದಾ ಮಾನವ ಕೇಂದ್ರಿತವಾಗಿರಬೇಕು. ವೈದ್ಯರಿಗೆ ಜೀವ ಉಳಿಸಲು, ರೈತರಿಗೆ ಉತ್ಪಾದಕತೆ ಹೆಚ್ಚಿಸಲು, ಸರ್ಕಾರಗಳಿಗೆ ನಾಗರಿಕ ಸೇವೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನೀಡಲು ಹಾಗೂ ಯುವ ನವೋದ್ಯಮಿಗಳಿಗೆ ಸಮಾಜಮುಖಿ ಪರಿಹಾರಗಳನ್ನು ರೂಪಿಸಲು ಎಐ ನೆರವಾಗಬೇಕು. ಇದೇ ನಮ್ಮ ಭವಿಷ್ಯದ ದಿಕ್ಕಾಗಬೇಕು.

ಕರ್ನಾಟಕ ಸರ್ಕಾರವು ದೇಶದ ಮೊದಲ ವಿಶೇಷ ಎಐ ವಿಶ್ವವಿದ್ಯಾಲಯ, ಜಗತ್ತಿನಲ್ಲೇ ಅತ್ಯಂತ ಕೈಗೆಟಕುವ ದರದ ಎಐ ಸಿದ್ಧ ವೈಯಕ್ತಿಕ ಕಂಪ್ಯೂಟರ್ (AI-ready Personal Computer) ಅಭಿವೃದ್ಧಿ, ELEVATE Next ಮೂಲಕ ಡೀಪ್-ಟೆಕ್ ಸ್ಟಾರ್ಟ್‌ಅಪ್‌ಗಳಿಗೆ ಉತ್ತೇಜನ, ನಿಪುಣ ಕರ್ನಾಟಕ , ಜಾಗತಿಕ ನಾವೀನ್ಯತಾ ಸಹಭಾಗಿತ್ವಗಳು ಹಾಗೂ ಎಐ ಆಧಾರಿತ ಇ-ಆಡಳಿತ ಕಾರ್ಯಕ್ರಮಗಳ ಮೂಲಕ ಜವಾಬ್ದಾರಿಯುತ ಮತ್ತು ಭವಿಷ್ಯೋನ್ಮುಖ ಎಐ ಇಕೋ ಸಿಸ್ಟಂ ನಿರ್ಮಿಸುವ ಬದ್ಧತೆಯನ್ನು ಮುಂದುವರಿಸಿದೆ.

ಅಲ್ಲದೆ ಕರ್ನಾಟಕ ಸರ್ಕಾರವು ಡೀಪ್‌ಟೆಕ್, ಸ್ಟಾರ್ಟ್‌ಅಪ್‌ಗಳು, ಸಂಶೋಧನೆ, ಕೌಶಲ್ಯಾಭಿವೃದ್ಧಿ ಮತ್ತು ನಾವೀನ್ಯತೆಯ ಮೂಲಕ ಕರ್ನಾಟಕವನ್ನು ಭಾರತದ ಮುಂಚೂಣಿ AI ರಾಜ್ಯವನ್ನಾಗಿ ರೂಪಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+