ಕರ್ನಾಟಕಕ್ಕೂ ಒಳ್ಳೇ ಸುದ್ದಿ ಸಿಗಲಿದೆ; ಆರ್. ಅಶೋಕ್
ಬೆಂಗಳೂರು, ಫೆಬ್ರುವರಿ 01: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಕೇಂದ್ರ ಬಜೆಟ್ ಮಂಡನೆ ಮಾಡಲಿದ್ದು, ಕೊರೊನಾ ಸೋಂಕಿನ ಕಾರಣದಿಂದಾಗಿ ಈ ಬಾರಿ ಬಜೆಟ್ ಕುರಿತು ಸಾಕಷ್ಟು ನಿರೀಕ್ಷೆಗಳು ವ್ಯಕ್ತವಾಗಿವೆ.
Recommended Video
ರಾಜ್ಯ ಕಂದಾಯ ಸಚಿವ ಆರ್.ಅಶೋಕ್ ಕೇಂದ್ರ ಬಜೆಟ್ ಬಗ್ಗೆ ತಮ್ಮ ನಿರೀಕ್ಷೆಗಳನ್ನು ವ್ಯಕ್ತಪಡಿಸಿದ್ದಾರೆ. "ಕಷ್ಟದ ಸಮಯದಲ್ಲಿ, ಕೊರೊನಾ ಸೋಂಕಿನ ಈ ಸಂಕಷ್ಟ ಕಾಲದಲ್ಲಿ ಕೇಂದ್ರ ಸರ್ಕಾರ ಬಜೆಟ್ ಮಂಡನೆ ಮಾಡುತ್ತಿದೆ. ಇದು ಕೇಂದ್ರ ಸರ್ಕಾರಕ್ಕೆ ದೊಡ್ಡ ಸವಾಲು ಕೂಡ ಹೌದು" ಎಂದು ಹೇಳಿದ್ದಾರೆ.
ಈ ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಸಾಕಷ್ಟು ಅನುದಾನ ಸಿಗುವ ಭರವಸೆಯಿದೆ. ಈ ಬಾರಿ ಬಜೆಟ್ ನಲ್ಲಿ ರೈಲ್ವೇ, ಬೆಂಗಳೂರು ಅಭಿವೃದ್ಧಿ ಮತ್ತು ನೀರಾವರಿಗೆ ಹೆಚ್ಚು ಆದ್ಯತೆ ಸಿಗಬೇಕು ಎನ್ನುವುದು ನಮ್ಮ ಬೇಡಿಕೆ" ಎಂದಿದ್ದಾರೆ.

ಕರ್ನಾಟಕ ರಾಜ್ಯಕ್ಕೂ ಆದ್ಯತೆ ನೀಡುವಂತೆ ಮುಖ್ಯಮಂತ್ರಿಗಳು ಹಾಗೂ ಸಚಿವರು ಸೇರಿ ಕೇಂದ್ರ ಸರ್ಕಾರಕ್ಕೆ ವಿನಂತಿ ಮಾಡಿದ್ದೇವೆ. ಕರ್ನಾಟಕಕ್ಕೂ ಒಳ್ಳೆಯ ಸುದ್ದಿ ಸಿಗುವ ನಿರೀಕ್ಷೆ ಇದೆ. ಕಷ್ಟದ ಸಮಯದಲ್ಲೂ ಅಭಿವೃದ್ಧಿ ಕುರಿತು ಯೋಚಿಸಲು ಸಾಧ್ಯವಾಗಲಿದೆ ಎಂದು ಹೇಳಿದ್ದಾರೆ. ಈ ಬಜೆಟ್ ಕರ್ನಾಟಕದ ಅಭಿವೃದ್ಧಿಗೆ ಪೂರಕ ಆಗಿರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.












Click it and Unblock the Notifications