Namma Metro: ಬೆಂಗಳೂರು ಮೆಟ್ರೋ ನಿಲ್ದಾಣಗಳಲ್ಲಿ ಮಹಿಳೆಯರಿಗೆ 'ಆರೈಕೆ ಕೇಂದ್ರ' ಸ್ಥಾಪನೆಗೆ ಮನವಿ
ಬೆಂಗಳೂರು, ಸೆಪ್ಟಂಬರ್ 18: ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ರೈಲುಗಳಲ್ಲಿ ಓಡಾಡುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಮೆಟ್ರೋ ನಿಲ್ದಾಣಗಳಲ್ಲಿ ಅತ್ಯಧಿಕ ಜನರು ಕಂಡು ಬರುತ್ತಾರೆ. ಈ ಕಾರಣದಿಂದಲೇ ಮೊನ್ನೆ ಟ್ರಿನಿಟಿ ಮೆಟ್ರೋ ನಿಲ್ದಾಣದಲ್ಲಿ ತಾಯಿಯೊಬ್ಬರು ಮಗುವಿಗೆ ಹಾಲುಣಿಸಲು ಸೂಕ್ತ ಸ್ಥಳವಿಲ್ಲದೇ ಪರದಾಡಿದ್ದಾರೆ. ಇದರ ಬೆನ್ನಲ್ಲೆ ಮೆಟ್ರೋ ನಿಲ್ದಾಣ ಹಾಗೂ ಕೆಎಸ್‌ಆರ್‌ಟಿಸಿ ನಿಲ್ದಾಣಗಳಲ್ಲಿ ಮಹಿಳಾ ಆರೈಕೆ ಕೇಂದ್ರ ಸ್ಥಾಪನಗೆ ಪತ್ರ ಬರೆಯಲಾಗಿದೆ.
ಹೌದು, ತಾಯಿಯೊಬ್ಬರು ಮಗುವಿಗೆ ಹಾಲುಣಿಸಲು ಮೆಟ್ರೋ ನಿಲ್ದಾಣದಲ್ಲಿ ಸೂಕ್ತ ಜಾಗವಿಲ್ಲದೇ ಒದ್ದಾಡಿದ ಘಟನೆ ಬಗ್ಗೆ ಸುದ್ದಿ ಮಾಧ್ಯಮಗಳು ವರದಿ ಮಾಡಿದ್ದವು. ಇದರ ಬೆನ್ನಲ್ಲೆ ಎಚ್ಚೆತ್ತು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಪತ್ರ ಬರೆದಿದ್ದಾರೆ. ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಮಹಿಳಾ ಆರೈಕೆ ಕೇಂದ್ರ ಸ್ಥಾಪಿಸುವಂತೆ ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ (BMRCL) ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

BMRCL ಎಂಡಿಗೆ ಆಯೋಗ ಮನವಿ
ತಾಯಿಯೊಬ್ಬರು ತನ್ನ ಮಗುವಿಗೆ ಹಾಲುಣಿಸಲು ಜಾಗವಿಲ್ಲದೇ ತೊಂದರೆ ಅನುಭವಿಸಿದ್ದಾರೆ. ಆದ್ದರಿಂದ ಬೆಂಗಳೂರ ಮೆಟ್ರೋ ನಿಲ್ದಾಣಗಳಲ್ಲಿ ಆರೈಕೆ ಕೇಂದ್ರ ಸ್ಥಾಪಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರದ ಮುಖೇನ ತಿಳಿಸಿದ್ದಾರೆ.
ಇದು ಬೆಂಗಳೂರು ಮೆಟ್ರೋ ನಿಲ್ದಾಣಗಳ ರೀತಿಯಲ್ಲಿ ಈ ಹಿಂದೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ ನಿಲ್ದಾಣಗಳಲ್ಲಿ ತಾಯಂದಿರು ಇಂತಹ ಸಮಸ್ಯೆ ಎದುರಿಸಿದ್ದರಿಂದಲೇ ಅವರಿಗಾಗಿ ಆರೈಕೆ ಕೇಂದ್ರ ಸ್ಥಾಪಿಸಲಾಗಿದೆ. ಅದೇ ರೀತಿ ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ನಿರ್ಮಿಸುವಂತೆ ಕೋರಿದ್ದಾರೆ.

ಕೈಗೊಂಡ ಕ್ರಮಗಳನ್ನು ಆಯೋಗದ ಗಮನಕ್ಕೆ ತನ್ನಿ
ಈ ಆರೈಕೆ ಕೇಂದ್ರ ಸ್ಥಾಪನೆ ಕುರಿತು ಕ್ರಮ ಕೈಗೊಂಡಿದ್ದರ ಕುರಿತು ರಾಜ್ಯ ಮಹಿಳಾ ಆಯೋಗದ ಗಮನಕ್ಕೆ ತರುವಂತೆಯು ಅವರು ಅಧ್ಯಕ್ಷ ಡಾ. ನಾಗಲಕ್ಷ್ಮೀ ಚೌಧರಿ ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ.
ಈ ಮಹಿಳಾ ಆಯೋಗದ ಈ ಪತ್ರಕ್ಕೆ ಬೆಂಗಳೂರು ಮೆಟ್ರೋ ರೈಲು ನಿಗಮದ ಅಧಿಕಾರಿಗಳಿಂದ ಯಾವುದೇ ಪ್ರತ್ಯುತ್ತರ ಬಂದಿಲ್ಲ. ಈ ಬಗ್ಗೆ ಯಾವ ಕ್ರಮ ಕೈಗೊಳ್ಳಲಿದ್ದಾರೆ ಎಂದು ಸಾರ್ವಜನಿಕರು ಕಾದು ನೋಡುತ್ತಿದ್ದಾರೆ.
ಸದ್ಯ ಬೆಂಗಳೂರಿನಲ್ಲಿ 60ಕ್ಕೂ ಹೆಚ್ಚು ಮೆಟ್ರೋ ರೈಲು ನಿಲ್ದಾಣಗಳು ಇವೆ. ಹೊಸದಾಗಿ ನವೆಂಬರ್‌ಗೆ ಮಾದಾವರ ನಾಗಸಂದ್ರ ಹಸಿರು ಮಾರ್ಗದಲ್ಲಿ 3.7 ಕಿಲೋ ಮೀಟರ್ ಸಂಚಾರ ಶುರುವಾಗಲಿದೆ. ಇಲ್ಲಿ ಸಹ ಮೂರು ನಿಲ್ದಾಣಗಳು ಇವೆ. ಹಾಲಿ ಮೆಟ್ರೋ ನಿಲ್ದಾಣಗಳಲ್ಲಿ ಸ್ಥಳಾವಕಾಶ ಇದೆ.
ಮಹಿಳಾ ಆಯೋಗದ ಮನವಿಗೆ ಒಪ್ಪಿದಲ್ಲಿ, ನಮ್ಮ ಮೆಟ್ರೋ ಅಧಿಕಾರಿಗಳು ಯಾವಾಗಿನಿಂದ ಆರೈಕೆ ಕೇಂದ್ರ ಸ್ಥಾಪಿಸುತ್ತಾರೆ. ಹೇಗೆ ಎಂಬ ಮಾಹಿತಿ ಮುಂದಿನ ದಿನಗಳಲ್ಲಿ ಸಿಗಲಿದೆ.












Click it and Unblock the Notifications