ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆರ್‌ಆರ್‌ ನಗರ ಪೊಲೀಸ್ ಠಾಣೆಗೆ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರ ಮುತ್ತಿಗೆ!

|
Google Oneindia Kannada News

ಬೆಂಗಳೂರು, ಅ. 16: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಕುಸುಮ ಅವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆಯ ಸುಳ್ಳು ಆರೋಪದ ಮೇಲೆ ಎಫ್ಐಆರ್ ದಾಖಲಿಸಿರುವುದನ್ನು ಖಂಡಿಸಿ ಕರ್ನಾಟಕ ಮಹಿಳಾ ಕಾಂಗ್ರೆಸ್ ನಾಯಕಿಯರು ಶುಕ್ರವಾರ ರಾಜರಾಜೇಶ್ವರಿ ನಗರ ಪೋಲಿಸ್ ಠಾಣೆಯ ಎದುರು ಪ್ರತಿಭಟನೆ ನಡೆಸಿದರು. ತಕ್ಷಣ ಎಫ್‌ಐಆರ್ ಹಿಂಪಡೆಯುವಂತೆ ಆಗ್ರಹಿಸಿದರು.

ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ, ಮಾಜಿ ಸಚಿವೆ ಉಮಾಶ್ರೀ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಮಹಿಳಾ ಕಾರ್ಯಕರ್ತರು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಮಾತನಾಡಿದ ಉಮಾಶ್ರೀ ಅವರು, ಬಿಜೆಪಿ ನಾಯಕರಿಂದ ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ಆದರೆ ಅವರ ವಿರುದ್ಧ ಯಾಕೆ ದೂರು ದಾಖಲಿಸಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.

Karnataka Women Congress Party workers staged protest in front of RR Nagar police station

ನಾನು ಕುಗ್ಗುವುದಿಲ್ಲ: ಎಫ್‌ಐಆರ್‌ಗೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪ್ರತಿಕ್ರಿಯೆನಾನು ಕುಗ್ಗುವುದಿಲ್ಲ: ಎಫ್‌ಐಆರ್‌ಗೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪ್ರತಿಕ್ರಿಯೆ

ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಕಾಂಗ್ರೆಸ್ ಪಕ್ಷದ ಮಹಿಳಾ ಅಭ್ಯರ್ಥಿಯ ಮೇಲೆ ಎಫ್‌ಐಆರ್ ದಾಖಲಿಸಿರುವ ಪೊಲೀಸ್ ಅಧಿಕಾರಿಯನ್ನು ತಕ್ಷಣ ಅಮಾನತು ಮಾಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

Karnataka Women Congress Party workers staged protest in front of RR Nagar police station

Recommended Video

Chris Gayle ಮೊದಲ ಪಂದ್ಯದಲ್ಲೇ ಸುನಾಮಿ | Oneindia Kannada

ಪ್ರತಿಭನೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ, ಮಾಜಿ ಸಚಿವೆ ಉಮಾಶ್ರೀ, ಶಾಸಕಿಯರಾದ ಲಕ್ಷ್ಮಿ ಹೆಬ್ಬಾಳ್ಕರ್, ಸೌಮ್ಯ ರೆಡ್ಡಿ ಹಾಗೂ ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು.

English summary
Karnataka Women Congress Party workers staged a protest in front of Rajarajeshwari Nagar police station on Friday, condemning the FIR filed against congress candidate H. Kusuma. Women congress leaders demanded the immediate withdrawal of the FIR. Know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X