ಕೆಪಿಎಸ್ಸಿ ಆಯ್ಕೆ ಪಟ್ಟಿಗೆ ತಡೆಯಾಜ್ಞೆ ತೆರವು
ಬೆಂಗಳೂರು, ಜು.2: ಕರ್ನಾಟಕ ಲೋಕಸಭಾ ಆಯೋಗ(ಕೆಪಿಎಸ್‌ಸಿ)ದ 2011ನೇ ಸಾಲಿನ ಗೆಜೆಟಡ್ ಪ್ರೊಬೆಷರಿ ಅಧಿಕಾರಿಗಳ ಆಯ್ಕೆ ಪಟ್ಟಿಗೆ ನೀಡಲಾಗಿದ್ದ ತಡೆಯಾಜ್ಞೆ ತೆರವುಗೊಂಡಿದೆ. ಕರ್ನಾಟಕ ಆಡಳಿತ ನ್ಯಾಯಮಂಡಳಿ (ಕೆಎಟಿ) ಬುಧವಾರ ತಡೆಯಾಜ್ಞೆ ತೆರವುಗೊಳಿಸಿದ್ದು, ಕೆಪಿಎಸ್ ಸಿ ಎ, ಬಿ ಗುಂಪಿನ ಅಧಿಕಾರಿಗಳ ಆಯ್ಕೆ ಪಟ್ಟಿ ಪ್ರಕಟಿಸಬಹುದಾಗಿದೆ.
2011ನೇ ಸಾಲಿನ ಗೆಜೆಟೆಡ್ ಪ್ರೊಬೆಷನರ್ಸ್ ಹುದ್ದೆಗಳ ನೇಮಕಕ್ಕೆ ಸಂಬಂಧಿಸಿ ಅವ್ಯವಹಾರ ನಡೆದಿದೆ. ಆಯ್ಕೆ ಪಟ್ಟಿ ಪ್ರಕಟಣೆಗೆ ತಡೆ ನೀಡಬೇಕು ಎಂದು ಡಾ. ಮೈತ್ರಿ ಸೇರಿದಂತೆ ಹಲವು ಅಭ್ಯರ್ಥಿಗಳು ಕರ್ನಾಟಕ ಸರ್ಕಾರಕ್ಕೆ ದೂರು ಸಲ್ಲಿಸಿದ್ದರು. ದೂರಿನ ಅನ್ವಯ ಸರ್ಕಾರ ಪ್ರಕರಣದ ವಿಚಾರಣೆಯನ್ನು ಸಿಐಡಿಗೆ ವಹಿಸಿತ್ತು. ಅರ್ಜಿ ವಿಚಾರಣೆ ನಡೆಸಿದ್ದ ಕೆಎಟಿ ಏಪ್ರಿಲ್ 16 ರಂದು ಆಯ್ಕೆ ಪಟ್ಟಿಗೆ ತಡೆಯಾಜ್ಞೆ ವಿಧಿಸಿತ್ತು.
ಈ ನಡುವೆ ರಾಜ್ಯ ಸರ್ಕಾರದ ವಿರೋಧದ ನಡುವೆಯೂ ಕೆಪಿಎಸ್‌ಸಿ 2011ನೇ ಸಾಲಿನ ಕೆಎಎಸ್ ಅಧಿಕಾರಿಗಳ ನೇಮಕಾತಿ ಪಟ್ಟಿ ಪ್ರಕಟಿಸಿತ್ತು. ಪ್ರಕರಣದ ವಿಚಾರಣೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಇಂದು ತಡೆಯಾಜ್ಞೆಯನ್ನು ತೆರವುಗೊಳಿಸಿ ಕೆಎಟಿ ಆದೇಶಿಸಿದೆ. ಇದರಿಂದಾಗಿ 2011ನೇ ಬ್ಯಾಚಿನ ಗ್ರೂಪ್ ಎ ಹಾಗೂ ಬಿ ನ 362 ಹುದ್ದೆಗಳಿಗೆ ಆಯ್ಕೆಯಾಗಿದ್ದ ಅಭ್ಯರ್ಥಿಗಳಿಗೆ ರಿಲೀಫ್ ಸಿಕ್ಕಿದೆ.[ಸೋಲಿಲ್ಲದ ಸೋಲಿಗ ಕೆಎಎಸ್ ಆದ ಕಥೆ!]

ಭಾರೀ ವಿವಾದಕ್ಕೆ ಕಾರಣವಾಗಿದ್ದ ಕೆಪಿಎಸ್ಸಿ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದ ಸಿಐಡಿ ಕೆಪಿಎಸ್‍ಸಿ ಮಾಜಿ ಅಧ್ಯಕ್ಷ ಗೋನಾಳ್ ಭೀಮಪ್ಪ ಸೇರಿದಂತೆ 6 ಮಂದಿಯ ವಿರುದ್ಧ 10,521 ಪುಟಗಳ ಚಾರ್ಚ್ ಶೀಟ್ ಅನ್ನು ನ್ಯಾಯಲಯಕ್ಕೆ ಸಲ್ಲಿಸಿತ್ತು. [ವಿವರ ಇಲ್ಲಿ ಓದಿ]
ಆಮ್ ಆದ್ಮಿ ಪಕ್ಷ ಹೋರಾಟ: 1988-89 ಮತ್ತು 2004ರಲ್ಲಿ ನಡೆದ ನೇಮಕಾತಿಯಲ್ಲಿ ಶೇ 20ಕ್ಕಿಂತ ಹೆಚ್ಚಿನ ಅಕ್ರಮ ನಡೆದಿದ್ದರೆ ಎಲ್ಲಾ ಅಧಿಕಾರಿಗಳನ್ನು ವಜಾ ಮಾಡಬೇಕು. ಸುಪ್ರೀಂಕೋರ್ಟ್ ಸಹ ತನ್ನ ತೀರ್ಪಿನಲ್ಲಿ ಶೇ 20ಕ್ಕಿಂತ ಅಕ್ರಮ ನಡೆದಿದ್ದರೆ ವಜಾ ಮಾಡಬಹದು ಎಂದು ಹೇಳಿದೆ. ಈ ಅವಧಿಯಲ್ಲಿ ನೇಮಕವಾದ ಹಲವು ಅಧಿಕಾರಿಗಳು ಸದ್ಯ ಸರ್ಕಾರದ ಆಯಕಟ್ಟಿನ ಜಾಗಗಳಲ್ಲಿ ಕೆಲಸ ಮಾಡುತ್ತಿದ್ದಾರೆ.
'ಕೆಪಿಎಸ್ಸಿಯಲ್ಲಿ ಅಧಿಕಾರದಲ್ಲಿರುವವರು ಅಕ್ರಮಗಳ ಮೂಲಕ ತಮಗೆ ಬೇಕಾದವರಿಗೆ ಉದ್ಯೋಗ ನೀಡುತ್ತಿದ್ದಾರೆ. ಆದ್ದರಿಂದ ಪ್ರತಿಭಾವಂತ ಅಭ್ಯರ್ಥಿಗಳಿಗೆ ಅನ್ಯಾಯವಾಗುತ್ತಿದೆ. ಕೇಂದ್ರ ಲೋಕಸೇವಾ ಆಯೋಗದ ಮಾದರಿಯಲ್ಲಿ ಕೆಪಿಎಸ್ಸಿ ನೇಮಕಾತಿಯಲ್ಲಿ ಬದಲಾವಣೆ ತಂದು ಅಭ್ಯರ್ಥಿಗಳಿಗೆ ಆಗುವ ಅನ್ಯಾಯ ತಪ್ಪಿಸಬೇಕೆಂದು ಆಮ್ ಆದ್ಮಿ ಪಕ್ಷದ ರವಿಕೃಷ್ಣಾ ರೆಡ್ಡಿ ಒತ್ತಾಯಿಸಿದ್ದನ್ನು ಇಲ್ಲಿ ಸ್ಮರಿಸಬಹುದು[ ಇನ್ನಷ್ಟು ವಿವರಕ್ಕೆ ಕ್ಲಿಕ್ ಮಾಡಿ]












Click it and Unblock the Notifications