ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹೆಬ್ಬಾಳದ ಕ್ಷೇತ್ರದ ಟಿಕೆಟ್‌ಗಾಗಿ ಬೇಡಿಕೆ ಇಟ್ಟ ಕಟ್ಟಾ!

|
Google Oneindia Kannada News

ಬೆಂಗಳೂರು, ಜನವರಿ 20 : ಹೆಬ್ಬಾಳ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿಯನ್ನು ಆಯ್ಕೆ ಮಾಡುವುದು ಬಿಜೆಪಿಗೆ ಸವಾಲಾಗಿ ಪರಿಣಮಿಸಿದೆ. ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಅವರು ತಮಗೆ ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಸೋಮವಾರ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿಯೂ ಹೆಬ್ಬಾಳ ಕ್ಷೇತ್ರದ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಒಮ್ಮತ ಮೂಡಿರಲಿಲ್ಲ. ನಿಧನರಾದ ಶಾಸಕ ಜಗದೀಶ್ ಕುಮಾರ್ ಪತ್ನಿ ಲತಾ ಮತ್ತು ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡ ಅವರ ಸೊಸೆ ಸೌಮ್ಯ ಜಗದೀಶ್ ಅವರಿಗೆ ಟಿಕೆಟ್ ನೀಡುವ ಬಗ್ಗೆ ಚರ್ಚೆ ನಡೆಸಲಾಗಿದೆ. [ಹೆಬ್ಬಾಳದಲ್ಲಿ ಬಿಜೆಪಿ ಅಭ್ಯರ್ಥಿ ಯಾರು?]

hebbal

ಆದರೆ, ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಅವರು 'ಕ್ಷೇತ್ರದ ಟಿಕೆಟ್ ನೀಡುವುದಾದದರೆ ನನಗೆ ಮಾತ್ರ ಕೊಡಿ. ನನ್ನ ಕುಟುಂಬದ ಯಾವುದೇ ಸದಸ್ಯರಿಗೆ ಟಿಕೆಟ್ ಕೊಟ್ಟರೆ, ಚುನಾವಣೆಗೆ ಸ್ಪರ್ಧಿಸುವುದಿಲ್ಲ' ಎಂದು ಪಕ್ಷದ ನಾಯಕರಿಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. [ಹೆಬ್ಬಾಳ ಟಿಕೆಟ್ ಪಡೆಯಲು ಕಾಂಗ್ರೆಸ್ಸಿನಲ್ಲಿಯೂ ಪೈಪೋಟಿ]

ವೈ.ಎ.ನಾರಾಯಣ ಸ್ವಾಮಿಗೆ ಟಿಕೆಟ್? : ಒಂದು ವೇಳೆ ಕಟ್ಟಾ ಸುಬ್ರಮಣ್ಯ ನಾಯ್ಡು ಅವರು ಟಿಕೆಟ್ ನಿರಾಕರಿಸಿದರೆ ಹಾಲಿ ವಿಧಾನಪರಿಷತ್ ಸದಸ್ಯ ವೈ.ಎ.ನಾರಾಯಣ ಸ್ವಾಮಿ ಅವರಿಗೆ ಟಿಕೆಟ್ ನೀಡಲು ಬಿಜೆಪಿ ನಿರ್ಧರಿಸಿದೆ. ಜನವರಿ 21ರಂದು ಬೆಂಗಳೂರಿನಲ್ಲಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಅಂದು ಅಂತಿಮ ತಿರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

ಅತ್ತ ಕಾಂಗ್ರೆಸ್ ಪಕ್ಷದಲ್ಲಿಯೂ ಹೆಬ್ಬಾಳ ಕ್ಷೇತ್ರದ ಟಿಕೆಟ್‌ಗಾಗಿ ಜಟಾಪಟಿ ನಡೆಯುತ್ತಿದೆ. ಟಿಕೆಟ್ ಪಡೆಯಲು ಎಚ್.ಎಂ.ರೇವಣ್ಣ ಮತ್ತು ಭೈರತಿ ಸುರೇಶ್ ಪೈಪೋಟಿ ನಡೆಸುತ್ತಿದ್ದಾರೆ. ಯಾರಿಗೆ ಟಿಕೆಟ್ ದೊರೆಯಲಿದೆ? ಎನ್ನುವುದು ಇನ್ನೂ ತೀರ್ಮಾನವಾಗಿಲ್ಲ.

ಮಾಜಿ ಸಚಿವ ಕಟ್ಟಾಸುಬ್ರಮಣ್ಯ ನಾಯ್ಡು ಅವರ ವಿರುದ್ಧ ಭ್ರಷ್ಟಾಚಾರದ ಆರೋಪಗಳಿವೆ. ಆದ್ದರಿಂದ, 2013ರ ಚುನಾವಣೆಯಲ್ಲಿ ಕಟ್ಟಾ ಅವರ ಪರಮಾಪ್ತರಾಗಿದ್ದ ಜಗದೀಶ್ ಕುಮಾರ್ ಅವರಿಗೆ ಬಿಜೆಪಿ ಕ್ಷೇತ್ರದಲ್ಲಿ ಟಿಕೆಟ್ ನೀಡಿತ್ತು. 38,162 ಮತಗಳನ್ನು ಪಡೆದು ಅವರು ಜಯಗಳಿಸಿದ್ದರು.

ಜಗದೀಶ್ ಕುಮಾರ್ ಅವರ ಅಕಾಲಿಕ ಮರಣದಿಂದಾಗಿ ಉಪ ಚುನಾವಣೆ ಎದುರಾಗಿದೆ. ಬುಧವಾರ ಚುನಾವಣಾ ಅಧಿಸೂಚನೆ ಪ್ರಕಟಗೊಳ್ಳಲಿದ್ದು, ಜನವರಿ 27ರ ತನಕ ನಾಮಪತ್ರ ಸಲ್ಲಿಸಲು ಅವಕಾಶವಿದೆ. ಫೆ.13ರಂದು ಮತದಾನ ನಡೆಯಲಿದ್ದು, ಫೆ.16ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

English summary
The former minister and BJP leader Katta Subramanya Naidu demand for party ticket from Hebbal assembly constituency by poll scheduled on February 13, 2016.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X