ಬಿಬಿಎಂಪಿ ಉಪ ಚುನಾವಣೆ : ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ
ಬೆಂಗಳೂರು, ಮೇ 17 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕಾವೇರಿಪುರ ವಾರ್ಡ್ ಉಪ ಚುನಾವಣೆಗೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿಯಿಂದ ಸಿ.ಪಲ್ಲವಿ ಅವರು ಕಣದಲ್ಲಿದ್ದಾರೆ.
ಉಪ ಚುನಾವಣೆ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಯಾಗಿ ಸುಶೀಲಾ ಸುರೇಶ್ ಅವರು ನಾಮಪತ್ರ ಸಲ್ಲಿಸಿದರು. ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ರವರು ಮಾಜಿ ಶಾಸಕ ಪ್ರಿಯಕೃಷ್ಣ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಮೇ 29ರಂದು ಬಿಬಿಎಂಪಿಯ ಕಾವೇರಿಪುರ ವಾರ್ಡ್ ಉಪ ಚುನಾವಣೆ ನಡೆಯಲಿದ್ದು, ಮೇ 31ರಂದು ಚುನಾವಣಾ ಫಲಿತಾಂಶವನ್ನು ಘೋಷಣೆ ಮಾಡಲಾಗುತ್ತದೆ. ಬಿಜೆಪಿ ಅಭ್ಯರ್ಥಿಯಾಗಿ ಸಿ.ಪಲ್ಲವಿ ಅವರು ನಾಮಪತ್ರವನ್ನು ಸಲ್ಲಿಸಿದ್ದಾರೆ.

ಕಾವೇರಿಪುರ ವಾರ್ಡ್ ಸದಸ್ಯರಾಗಿದ್ದ ರಮೀಳಾ ಅವರು ನಿಧನರಾದ ಕಾರಣ ಉಪ ಚುನಾವಣೆ ಎದುರಾಗಿದೆ. ರಮೀಳಾ ಅವರು ಜೆಡಿಎಸ್‌ನಿಂದ ಗೆಲುವು ಸಾಧಿಸಿದ್ದರು. ಉಪ ಚುನಾವಣೆಯಲ್ಲಿಯೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಜೆಡಿಎಸ್‌ಗೆ ಕ್ಷೇತ್ರ ಬಿಟ್ಟುಕೊಡಲಾಗಿದೆ.
ಕಾವೇರಿಪುರ ವಾರ್ಡ್ ಜೊತೆಗೆ ಸಗಾಯಪುರ ವಾರ್ಡ್‌ಗೂ ಉಪ ಚುನಾವಣೆ ನಡೆಯಲಿದೆ. ಸಗಾಯಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ. ಮೈತ್ರಿಕೂಟ ಮತ್ತು ಬಿಜೆಪಿ ನಡುವೆ ಎರಡೂ ವಾರ್ಡ್‌ಗಳಲ್ಲಿ ನೇರ ಹಣಾಹಣಿ ನಡೆಯಲಿದೆ.












Click it and Unblock the Notifications