ಬಿಬಿಎಂಪಿ ಉಪ ಚುನಾವಣೆ : ಬಿಜೆಪಿ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ

ಬೆಂಗಳೂರು, ಮೇ 15 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕಾವೇರಿ ಪುರ ವಾರ್ಡ್ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಪಲ್ಲವಿ.ಸಿ. ಅವರು ನಾಮಪತ್ರ ಸಲ್ಲಿಸಿದರು. ಮೇ 29ರಂದು ಉಪ ಚುನಾವಣೆ ನಡೆಯಲಿದೆ.

ಬುಧವಾರ ಬಿಜೆಪಿ ಅಭ್ಯರ್ಥಿ ಪಲ್ಲವಿ.ಸಿ. ಅವರು ನಾಮಪತ್ರವನ್ನು ಸಲ್ಲಿಕೆ ಮಾಡಿದರು. ಗೋವಿಂದರಾಜನಗರ ವಾರ್ಡ್ ಬಿಬಿಎಂಪಿ ಸದಸ್ಯ ಕೆ.ಉಮೇಶ್ ಶೆಟ್ಟಿ, ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ಚನ್ನಪ್ಪ ಮತ್ತು ಬಿಜೆಪಿಯ ಹಲವು ಮುಖಂಡರು ಉಪಸ್ಥಿತರಿದ್ದರು.

ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ

ಕಾವೇರಿಪುರ ವಾರ್ಡ್ ಬಿಬಿಎಂಪಿ ಸದಸ್ಯರಾಗಿದ್ದ ರಮೀಳಾ ಅವರು ನಿಧನರಾದ ಕಾರಣ ಉಪ ಚುನಾವಣೆ ಎದುರಾಗಿದೆ. ಈಗಾಗಲೇ ಚುನಾವಣೆ ಅಧಿಸೂಚನೆ ಪ್ರಕಟಗೊಂಡಿದೆ. ಮೇ 29ರಂದು ಚುನಾವಣೆ ನಡೆಯಲಿದ್ದು, ಮೇ 31ರಂದು ಫಲಿತಾಂಶ ಪ್ರಕಟವಾಗಲಿದೆ.

Kaveripura ward by election : BJP candidate files nomination

ಪ್ರಚಾರ ಆರಂಭ : ಕಾವೇರಿಪುರ ವಾರ್ಡ್ ಉಪ ಚುನಾವಣೆಗೆ ಬಿಜೆಪಿ ಪ್ರಚಾರ ಕಾರ್ಯವನ್ನು ಆರಂಭಿಸಿದೆ. ಗೋವಿಂದರಾಜನಗರ ವಾರ್ಡ್ ಬಿಬಿಎಂಪಿ ಸದಸ್ಯ ಕೆ.ಉಮೇಶ್ ಶೆಟ್ಟಿ ಅವರು ಸ್ಥಳೀಯ ಬಿಜೆಪಿ ಮುಖಂಡರು, ಸಾರ್ವಜನಿಕರನ್ನು ಭೇಟಿಯಾಗಿ ಪ್ರಚಾರ ಆರಂಭಿಸಿದ್ದಾರೆ.

ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಉಪ ಚುನಾವಣೆ ಎದುರಿಸಲಿವೆ. ಕಾವೇರಿಪುರ ವಾರ್ಡ್ ಬಿಬಿಎಂಪಿ ಸದಸ್ಯರಾಗಿದ್ದ ರಮೀಳಾ ಅವರು ಜೆಡಿಎಸ್ ಪಕ್ಷದವರಾಗಿದ್ದರು. ಆದ್ದರಿಂದ, ವಾರ್ಡ್‌ನಲ್ಲಿ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ.

ಕಾವೇರಿಪುರ ವಾರ್ಡ್‌ ಜೊತೆಗೆ ಸಗಾಯಪುರ ವಾರ್ಡ್‌ಗೂ ಉಪ ಚುನಾವಣೆ ನಡೆಯಲಿದೆ.. ಸಗಾಯಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಣಕ್ಕಿಳಿಯಲಿದ್ದು, ಜೆಡಿಎಸ್ ಅವರಿಗೆ ಬೆಂಬಲ ನೀಡಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+