ಮುಂದಿನ 25 ವರ್ಷಗಳ ಕಾಲ ರಾಜ್ಯದಲ್ಲಿ ಬಿಜೆಪಿಯದ್ದೇ ಅಧಿಕಾರ!

ಬೆಂಗಳೂರು, ಅ. 27: ಹಾಸನ-ಮಂಡ್ಯ ಎರಡು ಕಣ್ಣುಗಳಿದ್ದಂತೆ ಎಂದು ಹೇಳುತ್ತಿದ್ದವರಿಂದ ಆ ಭಾಗ ಅಭಿವೃದ್ಧಿಯಾಗಲಿಲ್ಲ. ಮಂಡ್ಯ ಹಾಗೂ ಹಾಸನಗಳ ಅಭಿವೃದ್ಧಿಗೆ ಯಡಿಯೂರಪ್ಪ ಅವರೇ ಬರಬೇಕಾಯ್ತು. ಅವರು ಸಿಎಂ ಆದ್ಮೇಲೆ ಎರಡೂ ಜಿಲ್ಲೆಗಳ ಅಭಿವೃದ್ಧಿಗೆ ಸಾವಿರಾರು ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದರು ಎಂದು ತೋಟಗಾರಿಕಾ ಸಚಿವ ಡಾ. ನಾರಾಯಣಗೌಡ ಅವರು ಪರೋಕ್ಷವಾಗಿ ಜೆಡಿಎಸ್ ನಾಯಕರ ಮೇಲೆ ವಾಗ್ದಾಳಿ ಮಾಡಿದರು.

ಆರ್‌.ಆರ್. ನಗರದಲ್ಲಿ ಕಂದಾಯ ಸಚಿವ ಆರ್. ಅಶೋಕ್ ಅವರೊಂದಿಗೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರ ಪರವಾಗಿ ಪ್ರಚಾರ ಮಾಡಿದರು. ಪ್ರಚಾರ ಭಾಷಣದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರಂತೆ ಸಿಎಂ ಯಡಿಯೂರಪ್ಪ ಕೂಡ ಅಭಿವೃದ್ಧಿ ಕೆಲಸ ಮಾಡುತ್ತಿದ್ದಾರೆ. ಮಂಡ್ಯದ ಅಭಿವೃದ್ಧಿಗೆ ಯಡಿಯೂರಪ್ಪ ಅವರೇ ಬರಬೇಕಾಯ್ತು. ಹಾಸನ-ಮಂಡ್ಯ ಎರಡು ಕಣ್ಣುಗಳಿದ್ದಂತೆ ಎಂದು ಹಿಂದೆ ಕೇವಲ ಬಾಯಿಮಾತಿಗೆ ಹೇಳ್ಕೊಂಡು ಬಂದರು. ಆದರೆ ಅನುದಾನ ಮಾತ್ರ ಏನೂ ಕೊಡಲಿಲ್ಲ.

Kc Narayana Gowda Indirectly Rebuked Jds Leaders In RR Nagar By Election Campaign

ಯಡಿಯೂರಪ್ಪ ಅವರು ಸಿಎಂ ಆದ್ಮೇಲೆ ಸಾವಿರಾರು ಕೋಟಿ ರೂ. ಅನುದಾನ ಕೊಟ್ಟಿದ್ದಾರೆ. ಅದೇ ರೀತಿ ಆರ್ ಆರ್ ನಗರದ ಅಭಿವೃದ್ಧಿಗೆ ಮುನಿರತ್ನ ಅವರನ್ನ ಹೆಚ್ಚಿನ ಮತದಿಂದ ಗೆಲ್ಲಿಸಿ. ಕೆಲವೇ ದಿನಗಳಲ್ಲಿ ಮುನಿರತ್ನ ಸಚಿವರಾಗಿ ಈ ಭಾಗಕ್ಕೆ ಬರುತ್ತಾರೆ ಎಂದು ಸಚಿವ ಡಾ. ನಾರಾಯಣ ಗೌಡ ಹೇಳಿದರು.

Kc Narayana Gowda Indirectly Rebuked Jds Leaders In RR Nagar By Election Campaign

Recommended Video

      ಕಾಂಗ್ರೆಸ್ ನಲ್ಲಿ ಗೊಂದಲ ! | DK Shivkumar | RR Nagar By Election | Oneindia Kannada

      ಲಗ್ಗೆರೆ ಭಾಗದಲ್ಲಿ ನಡೆಯುತ್ತಿರುವ ಚುನಾವಣಾ ಪ್ರಚಾರದಲ್ಲಿ ಮಾತನಾಡಿದರು. ಅಧಿಕಾರದಲ್ಲಿ ಇಲ್ಲದಿದ್ದರೂ ಮುನಿರತ್ನ ಸೇವೆ ಮಾಡುತ್ತಲೇ ಇದ್ದಾರೆ. ಲಾಕ್‌ಡೌನ್ ಸಂದರ್ಭದಲ್ಲಿ ಪ್ರತಿಯೊಬ್ಬರ ಸಂಕಷ್ಟಕ್ಕೂ ನೆರವಾಗಿದ್ದಾರೆ. ಸದಾ ಜನರ ಸಮಸ್ಯೆಗೆ ಸ್ಪಂದಿಸುವ ಮುನಿರತ್ನ ಅವರನ್ನ ಗೆಲ್ಲಿಸಿ ಎಂದು ಜನರಲ್ಲಿ ಮನವಿ ಮಾಡಿದರು. 25 ವರ್ಷ ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಆಡಳಿತದಲ್ಲಿ ಇರುತ್ತದೆ. ಹೀಗಾಗಿ ಅಭಿವೃದ್ಧಿಗೋಸ್ಕರ ಜನರು ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರಿಗೆ ಮತ ನೀಡಿ ಎಂದು ಸಚಿವರು ಮನವಿ ಮಾಡಿದ್ರು. ಸಚಿವರಾದ ಆರ್ ಅಶೋಕ್, ಗೋಪಾಲಯ್ಯ, ಅಭ್ಯರ್ಥಿ ಮುನಿರತ್ನ, ಬಿಜೆಪಿ ಮುಖಂಡೆ ಶೃತಿ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+