ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಜೆಪಿಗರಿಗೆ ಮುಕ್ತಾಹ್ವಾನ ಕೊಟ್ಟ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್

|
Google Oneindia Kannada News

ಬೆಂಗಳೂರು, ಅಕ್ಟೋಬರ್ 15: ನಮ್ಮ ಪಕ್ಷಕ್ಕೆ ಯಾರೇ ಬಂದರೂ ಸ್ವಾಗತ, ಬಿಜೆಪಿಯಿಂದ ಬರುವವರಿಗೂ ಸ್ವಾಗತ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆಸಿ ವೇಣುಗೋಪಾಲ್ ಹೇಳಿದ್ದಾರೆ.

Recommended Video

ಶಾಸಕರ ರಾಜೀನಾಮೆ ಬಗ್ಗೆ ಮಾತನಾಡಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸಚಿವರು | Oneindia Kannada

ಮಂಗಳವಾರ ಸುದ್ದಿಗಾರರೊಂದಿಗೆ ಮಾತಣಾಡಿದ ಅವರು, ಪಕ್ಷಕ್ಕೆ ಬರುವವರಿಗೆ ಟಿಕೆಟ್ ನೀಡಬೇಕೋ ಬೇಡವೋ ಎಂಬುದರ ಕುರಿತು ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಕ್ಷೇತ್ರಗಳ ಸ್ಥಳೀಯ ಮುಖಂಡರು, ಕಾರ್ಯಕರ್ತರ ಜೊತೆ ಚರ್ಚಿಸಿ ಆದಷ್ಟು ಬೇಗ ನಿರ್ಧಾರ ತೆಗೆದುಕೊಳ್ಳುತ್ತೇವೆ.

ಕೇಂದ್ರ ಸರ್ಕಾರ ಸಾಂವಿಧಾನಿಕ ಸಂಸ್ಥೆಗಳನ್ನು ಪ್ರತಿಪಕ್ಷಗಳ ವಿರುದ್ಧ ಆಯುಧಗಳಂತೆ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಇದು ಹೆಚ್ಚು ದಿನ ನಡೆಯೊಲ್ಲ. ಚುನಾವಣಾ ಆಯೋಗವನ್ನೂ ಕೇಂದ್ರ ಸರ್ಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ. ಚುನಾವಣಾ ಆಯೋಗ ಯಾವುದರ ಬಗ್ಗೆಯೂ ಧ್ವನಿ ಎತ್ತುತ್ತಿಲ್ಲ ಎಂದರು.

ಕಾಂಗ್ರೆಸ್‌ಗೆ ಸೇರಲಿರುವ ಮುಖಂಡರು ಯಾರು?

ಕಾಂಗ್ರೆಸ್‌ಗೆ ಸೇರಲಿರುವ ಮುಖಂಡರು ಯಾರು?

ಯಾರ್ಯಾರು ಕಾಂಗ್ರೆಸ್ ಸೇರಲಿದ್ದಾರೆ?ಬಿಜೆಪಿಯ ರಾಜು ಕಾಗೆ, ಅಶೋಕ್ ಪೂಜಾರಿ, ಯುಬಿ ಬಣಕಾರ್, ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ನಾವು 15 ಕ್ಷೇತ್ರಗಳಲ್ಲೂ ಗೆಲ್ತೀವಿ

ನಾವು 15 ಕ್ಷೇತ್ರಗಳಲ್ಲೂ ಗೆಲ್ತೀವಿ

ನಾವು 15 ಕ್ಷೇತ್ರಗಳ ಉಪ ಚುನಾವಣೆಯಲ್ಲೂ ಗೆಲ್ಲುತ್ತೇವೆ, ಬಿಜೆಪಿ ಪರಾಜಿತ ಅಭ್ಯರ್ಥಿಗಳು ಕಾಂಗ್ರೆಸ್ ಸೇರ್ಪಡೆ ಬಗ್ಗೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ.

ಐಟಿ ದಾಳಿ ರಾಜಕೀಯ ಪ್ರೇರಿತ

ಐಟಿ ದಾಳಿ ರಾಜಕೀಯ ಪ್ರೇರಿತ

ಐಟಿ ದಾಳಿ ರಾಜಕೀಯ ಪ್ರೇರಿತವಾಗಿದೆ. ಪೊಲಿಟಿಕಲ್ ಅಜೆಂಡಾ ಇದರ ಹಿಂದೆ ಕೆಲಸ ಮಾಡುತ್ತಿದೆ. ಐಟಿ, ಇ.ಡಿ. ಸಿಬಿಐ ಒನ್‌ಸೈಡ್ ಆಗಿ ಕೆಲಸ ಮಾಡುತ್ತಿದೆ. ಈ ಸಂಸ್ಥೆಗಳು ಕೇಂದ್ರದ ಕೈಗೊಂಬೆಗಳಾಗಿವೆ. ಚುನಾವಣೆ ಬಂದಾಗಲೇ ದಾಳಿಗಳು ನಡೆಯುತ್ತಿವೆ.

ಬಿಜೆಪಿ ನಾಯಕರ ಮೇಲೂ ಸಾಕಷ್ಟು ದೂರುಗಳು ಸಲ್ಲಿಕೆಯಾಗಿವೆ

ಬಿಜೆಪಿ ನಾಯಕರ ಮೇಲೂ ಸಾಕಷ್ಟು ದೂರುಗಳು ಸಲ್ಲಿಕೆಯಾಗಿವೆ

ಬಿಜೆಪಿ ನಾಯಕರ ಮೇಲೂ ಸಾಕಷ್ಟು ದೂರುಗಳು ಸಲ್ಲಿಕೆಯಾಗಿವೆ. ಅವರ ವಿರುದ್ಧ ಏಕೆ ಕ್ರಮ ತೆಗೆದುಕೊಳ್ಳುತ್ತಿಲ್ಲ. ಸಮ್ಮಿಶ್ರ ಸರ್ಕಾರ ಪತನಗೊಳ್ಳುವಾಗ ಕುದುರೆ ವ್ಯಾಪಾರ ನಡೆದಿದೆ. ಸಾಕಷ್ಟು ಕಪ್ಪು ಹಣ ವರ್ಗಾವಣೆಯಾಗಿದೆ. ಅದರ ಬಗ್ಗೆ ತನಿಖೆ ಯಾಕೆ ನಡೆದಿಲ್ಲ ಎಂದು ಪ್ರಶ್ನಿಸಿದರು.

English summary
KC Venugopal said that Anyone who comes to our party, most welcome.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X