Breaking: ಜುಲೈ 30 ರಂದು ಸಿಇಟಿ ಫಲಿತಾಂಶ- ಸಚಿವ ಸಿ ಎನ್ ಅಶ್ವತ್ಥ ನಾರಾಯಣ
ಬೆಂಗಳೂರು, ಜುಲೈ 25: ಜೂನ್ ಮಧ್ಯಭಾಗದಲ್ಲಿ ನಡೆಸಲಾಗಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶವನ್ನು ಇದೇ ತಿಂಗಳ 30 ರಂದು ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದರು.
ಬೆಂಗಳೂರಿನಲ್ಲಿ ಸೋಮವಾರ ಈ ವಿಚಾರ ತಿಳಿಸಿರುವ ಅವರು, ವಿವಿಧ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆದುಕೊಳ್ಳಲು ನಡೆದಿದ್ದ ಸಿಇಟಿ ಪರೀಕ್ಷೆಯನ್ನು ಈ ಬಾರಿ ಬಿಗಿ ಭದ್ರತೆ ನಡುವೆ ಕಟ್ಟುನಿಟ್ಟಾಗಿ ನಡೆಸಲಾಗಿತ್ತು' ಎಂದರು.
ಕಳೆದ ಜೂನ್ 16 ರಿಂದ 18ರವರೆಗೆ ನಡೆದಿದ್ದ ಕೆ-ಸಿಇಟಿ ಫಲಿತಾಂಶವನ್ನು ಈ ಮೊದಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಜು.17 ಕ್ಕೆ ಪ್ರಕಟಿಸುವುದಾಗಿ ಹೇಳಿತ್ತು. ಆದರೆ ಸಿಬಿಎಸ್‌ಇ ಮತ್ತು ಐಸಿಎಸ್‌ಇ 12ನೇ ತರಗತಿ ಫಲಿತಾಂಶಗಳು ಪ್ರಕಟವಾಗುವುದು ತಡವಾದ ಹಿನ್ನೆಲೆಯಲ್ಲಿ ಸಿಇಟಿ ಫಲಿತಾಂಶ ಪ್ರಕಟಿಸಲು ಸಾಧ್ಯವಾಗಿರಲಿಲ್ಲ.

ಸಿಇಟಿ ಪರೀಕ್ಷೆ ನಡೆಸುವಾಗ ಸಿಬಿಎಸ್ ಸಿ ಮತ್ತು ಐಸಿಎಸ್ಇ ಪಠ್ಯಕ್ರಮದಲ್ಲಿ 12ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳಿಗೂ ಅವಕಾಶ ಕೊಡಲಾಗಿತ್ತು. ಈಗ ಸಿಬಿಎಸ್‌ಇ ಮತ್ತು ಐಸಿಎಸ್‌ಇ 12ನೇ ತರಗತಿ ಫಲಿತಾಂಶಗಳು ಪ್ರಕಟವಾಗಿದ್ದು, ಸಿಇಟಿ ಬರೆದಿದ್ದ ವಿದ್ಯಾರ್ಥಿಗಳು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ತಮ್ಮ ಅಂಕಗಳನ್ನು ಮಂಗಳವಾರ (ಜು.26) ಸಂಜೆಯೊಳಗೆ ಅಪ್ಲೋಡ್ ಮಾಡಬೇಕು ಎಂದು ಸಚಿವ ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ.












Click it and Unblock the Notifications