ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಜೆಪಿಗೆ ವಿದಾಯ ಹೇಳಿದ ಮುಖ್ಯಮಂತ್ರಿ ಚಂದ್ರು

By Mahesh
|
Google Oneindia Kannada News

ಬೆಂಗಳೂರು, ಅ.10: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ ಎಂಬ ಸುದ್ದಿ ಟಿವಿ ಮಾಧ್ಯಮಗಳಲ್ಲಿ ಗುರುವಾರ ಮಧ್ಯಾಹ್ನದ ವೇಳೆಗೆ ಪ್ರಸಾರವಾಗಿತ್ತು. ಈ ಸುದ್ದಿಯನ್ನು ಮುಖ್ಯಮಂತ್ರಿ ಚಂದ್ರು ಸ್ಪಷ್ಟೀಕರಿಸಿ, ಇದು ನನ್ನ ವೈಯಕ್ತಿಕ ನಿರ್ಧಾರ ಎಂದು ಹೇಳಿದ್ದಾರೆ.

ಬಿಜೆಪಿ ಹಿರಿಯ ನಾಯಕರ ವರ್ತನೆಯಿಂದ ಬೇಸತ್ತಿರುವ ಮುಖ್ಯಮಂತ್ರಿ ಚಂದ್ರು ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ ವೈಯಕ್ತಿಕ ಕಾರಣಗಳಿಂದಾಗಿ ಬಿಜೆಪಿ ಬಿಟ್ಟಿರುವುದಾಗಿ ಅಧಿಕೃತ ಘೋಷಣೆ ಮಾಡಿದ್ದಾರೆ. ಸಂಸತ್ತಿನಲ್ಲಿ ಕನ್ನಡಪರ ದನಿ ಬೇಕಿದೆ. ಹೀಗಾಗಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಚಂದ್ರು ಹೇಳಿದ್ದಾರೆ. ಅದರೆ, ಯಾವ ಪಕ್ಷದಿಂದ ಸ್ಪರ್ಧಿಸಲಿದ್ದಾರೆ ಎಂಬುದರ ಬಗ್ಗೆ ಸುಳಿವು ನೀಡಿಲ್ಲ. ಮುಖ್ಯಮಂತ್ರಿ ಚಂದ್ರು ಅವರು ಸುದ್ದಿಗೋಷ್ಠಿ ನಡೆಸಿ ತಮಗೆ ಬಿಜೆಪಿಯಿಂದ ಅದ ನೋವು, ಮುಂದಿನ ಯೋಜನೆಗಳ ಬಗ್ಗೆ ವಿವರಿಸುವ ನಿರೀಕ್ಷೆಯಿದೆ.

ರಾಜೀನಾಮೆ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ ಸದಾನಂದ ಗೌಡ, ಜಗದೀಶ್ ಶೆಟ್ಟರ್ ಹಾಗೂ ಮಾಜಿ ಉಪಮುಖ್ಯಮಂತ್ರಿಗಳಾದ ಆರ್ ಅಶೋಕ್, ಕೆಎಸ್ ಈಶ್ವರಪ್ಪ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತಕುಮಾರ್ ಹಾಗೂ ಮುಖಂಡ ಸಂತೋಷ್ ಅವರಿಗೆ ಪ್ರತ್ಯೇಕ ಪತ್ರ ಬರೆದು ಪಕ್ಷದ ಪ್ರಾಥಮಿಕ ಸದಸ್ಯತ್ವ ರಾಜೀನಾಮೆ ಸಲ್ಲಿಸಿದ್ದಾರೆ.

ಸುಮಾರು ಎರಡು ದಶಕಗಳಿಂದ ಬಿಜೆಪಿಯಲ್ಲಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ಧನ್ಯವಾದ ಹೇಳಿದ್ದಾರೆ. ತಕ್ಷಣವೇ ರಾಜೀನಾಮೆ ಅಂಗೀಕರಿಸಬೇಕು ಎಂದು ಚಂದ್ರು ಕೇಳಿಕೊಂಡಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರ ಹೋದರೂ ಕನ್ನಡಕ್ಕಾಗಿ ಸದಾ ದುಡಿಯುತ್ತೇನೆ. ಕನ್ನಡ ಪರ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತೇನೆ ಎಂದು ಚಂದ್ರು ಹೇಳಿದ್ದಾರೆ.

Mukhyamantri Chandru resign BJP

ಕರ್ನಾಟಕದ ಮುಖ್ಯಮಂತ್ರಿಯಾಗಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಸಹ ತಮ್ಮ ಸ್ಥಾನ ತೊರೆಯಬೇಕಾಗಿದೆ ಎಂಬ ಸುದ್ದಿ ಕಳೆದ ಮೇ ತಿಂಗಳಿನಲ್ಲಿ ನಡೆದಿತ್ತು. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ನಿಗಮ ಮಂಡಳಿಗೆ ಹೊಸಬರನ್ನು ತಂದು ಕೂರಿಸುವುದು ನಿರೀಕ್ಷಿತ.

ಆದರೆ, ಕನ್ನಡದ ಕಂದ ಮುಖ್ಯಮಂತ್ರಿ ಚಂದ್ರು ಅವರು ಈಗ ಸಿಟ್ಟಾಗಿರುವುದು ಬಿಜೆಪಿ ಮೇಲೆ. ಬಿಜೆಪಿ ಯಾವುದೇ ಪ್ರಮುಖ ಸಭೆ ಸಮಾರಂಭ, ಚುನಾವಣಾ ಪ್ರಚಾರ ಕಾರ್ಯಕ್ಕೆ ಚಂದ್ರು ಅವರಿಗೆ ಆಹ್ವಾನ ನೀಡಿಲ್ಲ ಎನ್ನಲಾಗಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮೂಲಕ ಕನ್ನಡ ಅನುಷ್ಠಾನ, ಅಭಿವೃದ್ಧಿ, ಜಾಗೃತಿ ಮೂಡಿಸಿದರೂ ಪ್ರಯೋಜನವಾಗುತ್ತಿಲ್ಲ. ಬಿಜೆಪಿಯಾಗಲಿ, ಆಡಳಿತರೂಢ ಕಾಂಗ್ರೆಸ್ಸಿನಿಂದಾಗಲಿ ಸೂಕ್ತ ಸ್ಪಂದನೆ ಸಿಗುತ್ತಿಲ್ಲ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

English summary
Kannada Development Authority president Mukhyamantri Chandru has submitted resignation to primary membership of BJP. In a letter written to state president Prahlad Joshi and others separately, he has expressed his displeasure about leadership. MM Chandru intends to contest in forthcoming Lok Sabha election.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X