HRD ಸಚಿವರಿಗೆ ಕನ್ನಡಿಗರ ಪರವಾಗಿ ಸಿದ್ದರಾಮಯ್ಯರಿಂದ ಪತ್ರ
ಬೆಂಗಳೂರು, ಜೂನ್ 04: ಕೇಂದ್ರ ಸರ್ಕಾರ ಎಂದಿಗೂ ಹಿಂದಿ ಹೇರಿಕೆ ಮಾಡುವುದಿಲ್ಲ, ಪ್ರಸ್ತಾವಿತ ತ್ರಿಭಾಷಾ ಸೂತ್ರ ಶಿಕ್ಷಣ ನೀತಿಯ ಕರಡು ಪ್ರತಿಯನ್ನು ಹಿಂಪಡೆಯಲಾಗಿದೆ ಎಂದು ಮಾನವ ಸಂಪನ್ಮೂಲ ಸಚಿವಾಲಯವು ಸ್ಪಷ್ಟನೆ ನೀಡಿದೆ.
ಹೀಗಾಗಿ, ಹಿಂದಿ ಹೇರಿಕೆ ಪ್ರತಿಭಟನೆ ಸದ್ಯಕ್ಕೆ ತಣ್ಣಗಾಗಿದೆ. ಆದರೆ, ಇದಕ್ಕೆ ತಾರ್ಕಿಕ ಅಂತ್ಯ ಹಾಗೂ ಅಗತ್ಯ ಬದಲಾವಣೆ ತರಬೇಕಾಗಿರುವ ನಿಟ್ಟಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಮೊದಲ ಹೆಜ್ಜೆ ಇಟ್ಟಿದೆ.

ಕೇಂದ್ರ ಸರ್ಕಾರದ ಕರಡು ರಾಷ್ಟ್ರೀಯ ಶಿಕ್ಷಣ ನೀತಿಯ ಹಲವು ಪ್ರಾದೇಶಿಕ ವಿರೋಧಿ ಅಂಶಗಳ ಕುರಿತಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರೊ.ಎಸ್.ಜಿ.ಸಿದ್ಧರಾಮಯ್ಯರವರು ಕೇಂದ್ರ ಸರ್ಕಾರದ ಗಮನ ಸೆಳೆದು ರಾಷ್ಟ್ರದ ಒಕ್ಕೂಟ ತತ್ವಗಳನ್ನು ಗೌರವಿಸುವ ರೀತಿಯಲ್ಲಿ ಈ ನೀತಿಯು ರೂಪಿತವಾಗಬೇಕಿದೆ ಎಂದು ಅಗ್ರಹಿಸಿದ್ದಾರೆ.
ಕೇಂದ್ರ ಸರ್ಕಾರದ ಕರಡು ರಾಷ್ಟ್ರೀಯ ಶಿಕ್ಷಣ ನೀತಿಯ ಹಲವು ಪ್ರಾದೇಶಿಕ ವಿರೋಧಿ ಅಂಶಗಳ ಕುರಿತಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರೊ.ಎಸ್.ಜಿ.ಸಿದ್ಧರಾಮಯ್ಯರವರು ಕೇಂದ್ರ ಸರ್ಕಾರದ ಗಮನ ಸೆಳೆದು ರಾಷ್ಟ್ರದ ಒಕ್ಕೂಟ ತತ್ವಗಳನ್ನು ಗೌರವಿಸುವ ರೀತಿಯಲ್ಲಿ ಈ ನೀತಿಯು ರೂಪಿತವಾಗಬೇಕಿದೆ ಎಂದು ಅಗ್ರಹಿಸಿದ್ದಾರೆ. pic.twitter.com/j9tkqc7fC8
— ಕ.ಅ.ಪ್ರಾ. (@kdabengaluru) June 3, 2019
ಭಾರತದ ಸಂಸತ್ತು 1963ರಲ್ಲಿ ಮಾಡಿದ "ಅಫಿಶಿಯಲ್ ಲಾಂಗ್ವೇಜ್ ಆಕ್ಟ್ - 1963"ರಲ್ಲಿ ಹಿಂದೀ ಭಾಷೆಯನ್ನು ಒಕ್ಕೂಟದ ಏಕೈಕ ಆಡಳಿತ ಭಾಷೆ ಮಾಡಿದಾಗ ಕರ್ನಾಟಕ, ತಮಿಳುನಾಡು ಮತ್ತು ಬಂಗಾಳ ಸೇರಿದಂತೆ ಅನೇಕ ಹಿಂದೀಯೇತರ ಪ್ರದೇಶಗಳಲ್ಲಿ ಇದಕ್ಕೆ ವಿರೋಧ ತೀವ್ರ ಹೋರಾಟದ ರೂಪದಲ್ಲಿ ವ್ಯಕ್ತವಾಯಿತು. ತಮಿಳುನಾಡಿನಲ್ಲಂತೂ ಈ ಹೋರಾಟದಲ್ಲಿ ನೂರಾರು ಜನ ಸಾವಿಗೀಡಾದರು.
ಭಾರತದಿಂದಲೇ ಸಿಡಿದು ಹೋಗುವ ದನಿ ಹೋರಾಟದಲ್ಲಿ ಕೇಳಿ ಬಂತು. ಆಗ ಅಂದಿನ ಪ್ರಧಾನಿ ಜವಾಹರ್‌ಲಾಲ್ ನೆಹರೂರವರು "ನೀವೆಲ್ಲಾ ಒಪ್ಪೋ ತನಕ ಭಾರತದ ಆಡಳಿತ ಭಾಷೆಯಾಗಿ ಇಂಗ್ಲೀಷನ್ನೂ ಮುಂದುವರೆಸುತ್ತೇವೆ" ಎಂಬ ಭರವಸೆ ಕೊಟ್ಟರು. ಇದು ಸಂಸತ್ತಿನಲ್ಲಿ ಮುಂದೆ ಪ್ರಾದೇಶಿಕ ಭಾಷೆಗಳನ್ನು ಕೇಂದ್ರಸರ್ಕಾರಿ ನೌಕರಿಯ ನೇಮಕಾತಿ ಪರೀಕ್ಷೆಗಳಲ್ಲಿ ಬಳಸುವ ಅವಕಾಶ ನೀಡುವ, ಪ್ರಾದೇಶಿಕ ಭಾಷೆಗಳನ್ನೂ ಉಳಿಸಿಕೊಳ್ಳುವ ಉದ್ದೇಶದ "ತ್ರಿಭಾಷಾ ಸೂತ್ರ"ದ ರಚನೆಗೆ ಕಾರಣವಾಯಿತು.
-
Prem: ಸರ್ಸೆ ಸೆರಗ ಹಾಡನ್ನ ಎಲ್ರೂ ತಪ್ಪಾಗಿ ಅರ್ಥ ಮಾಡ್ಕೊಂಡಿದ್ದಾರೆ, ನನ್ನ ಉದ್ದೇಶ ಅದಾಗಿರಲಿಲ್ಲ: ಪ್ರೇಮ್ -
ಸಿನಿಮಾಗಳಲ್ಲಿ ಅಶ್ಲೀಲ ಸಾಹಿತ್ಯಕ್ಕೆ ಕಡಿವಾಣ ಹಾಕಿ: ಪ್ರೇಮ್ ವಿವಾದದ ಬೆನ್ನಲ್ಲೇ ಫಿಲ್ಮ್ ಚೇಂಬರ್ಗೆ ಮಹಿಳಾ ಆಯೋಗ ಪತ್ರ -
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಆಗ್ರಹ; ರಾಜ್ಯದ ಎಲ್ಲ ಸಂಸದರಿಗೆ ಪುರುಷೋತ್ತಮ ಬಿಳಿಮಲೆ ಪತ್ರ -
ಇಂದಿನಿಂದ SSLC ಪರೀಕ್ಷೆ: 8.66 ಲಕ್ಷ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಶುಭಹಾರೈಕೆ; ಆತಂಕಬೇಡ ಎಂದ ಸರ್ಕಾರ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ?












Click it and Unblock the Notifications