ನೂತನ ರಾಜ್ಯಸಭಾ ಸದಸ್ಯರು ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕಾರಕ್ಕೆ ಆಗ್ರಹ
ಬೆಂಗಳೂರು, ಮಾರ್ಚ್ 24: ಕರ್ನಾಟಕದಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿರುವ ನಾಲ್ವರು ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಎಸ್.ಜಿ. ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಈ ಕುರಿತು ಪ್ರಾಧಿಕಾರದ ಅಧ್ಯಕ್ಷ ಎಸ್. ಜಿ. ಸಿದ್ದರಾಮಯ್ಯ ನೂತನವಾಗಿ ರಾಜ್ಯಸಭೆಗೆ ಆಯ್ಕೆಯಾದ ರಾಜ್ಯಸಭಾ ಸದಸ್ಯರಾದ ಡಾ. ಎಲ್. ಹನುಮಂತಯ್ಯ, ನಾಸಿರ್ ಹುಸೇನ್, ಜಿ.ಸಿ. ಚಂದ್ರಶೇಖರ್ ಹಾಗೂ ಬಿಜೆಪಿಯ ರಾಜೀವ್ ಚಂದ್ರಶೇಖರ್ ಅವರಿಗೆ ವಯಕ್ತಿಕವಾಗಿ ಪತ್ರವನ್ನು ಬರೆದಿದ್ದಾರೆ.

ಕರ್ನಾಟಕವನ್ನು ಪ್ರತಿನಿಧಿಸುವ ಕ್ಷೇತ್ರದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಪ್ರಾದೇಶಿಕತೆ ಮಹತ್ವವನ್ನು ಕಾಪಾಡುವುದು ಹಾಗೂ ಕರ್ನಾಟಕದ ಜಲ, ನೆಲ, ಭಾಷೆ ವಿಚಾರದಲ್ಲಿ ಸ್ಪಂದಿಸಲು ರಾಜ್ಯ ಸಭೆಯಲ್ಲಿ ಧ್ವನಿಯಾಗಬೇಕು ಅದಕ್ಕಾಗಿ ರಾಜ್ಯಸಭೆ ಪ್ರವೇಶಿಸುತ್ತಲೇ ಪ್ರಮಾಣ ವಚನವನ್ನು ಕನ್ನಡದಲ್ಲಿಯೇ ಸ್ವೀಖರಿಸಬೇಕು ಎಂದು ಪ್ರಾಧಿಕಾರದ ಅಧ್ಯಕ್ಷೆ ಎಸ್.ಜಿ. ಸಿದ್ದರಾಮಯ್ಯ ತಮ್ಮ ಪತ್ರದಲ್ಲಿ ಮನವಿ ಮಾಡಿದ್ದಾರೆ.
ರಾಜೀವ್ ಚಂದ್ರಶೇಖರ್ ಅವರು ಕನ್ನಡದಲ್ಲಿಯೇ ಪ್ರಮಾಣವಚನ ಸ್ವೀಕರಿಸುವ ನಿರೀಕ್ಷೆ ಇದೆ.












Click it and Unblock the Notifications