KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಬೆಂಗಳೂರು: ಕರ್ನಾಟಕ ಪದವಿ ಪೂರ್ವ ಸಾಮಾನ್ಯ ಪ್ರವೇಶ ಪರೀಕ್ಷೆ (UGCET-2026) ಹಾಗೂ ರಾಷ್ಟ್ರೀಯ ಸಾಮಾನ್ಯ ಮತ್ತು ಪ್ರವೇಶ ಪರೀಕ್ಷೆ-ಸ್ನಾತಕೋತ್ತರ (PGNEET 2026) ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮಹತ್ವದ ಮಾಹಿತಿ ನೀಡಿದೆ. ವೃತ್ತಿಪರ ಕೋರ್ಸ್‌ಗಳ ಪ್ರವೇಶದ ಅರ್ಜಿ ಸಲ್ಲಿಕೆ ಹಾಗೂ ನೋಂದಣಿ ದಿನಾಂಕವನ್ನು ವಿಸ್ತರಣೆ ಮಾಡಿದೆ.

ಯುಜಿಸಿಇಟಿ ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಿರುವ ಹಾಗೂ ನೋಂದಣಿ ಮಾಡಿರುವ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಗೆ ಮಾರ್ಚ್ 7 ರವರೆಗೆ ಅವಕಾಶ ನೀಡಿ ಸಮಯ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ಮಾಹಿತಿ ನೀಡಿದರು.

KEA

ವೃತ್ತಿಪರ ಕೋರ್ಸ್‌ಗಳ ಪ್ರವೇಶ ಬಯಸಿ ಒಟ್ಟು 3.47 ಲಕ್ಷ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಒಟ್ಟು 3.36 ಲಕ್ಷ ಮಂದಿ ನಿಗದಿತ ಶುಲ್ಕ ಪಾವತಿಸಿದ್ದಾರೆ. ಇನ್ನೂ 9 ಸಾವಿರ ಮಂದಿ ಶುಲ್ಕ ಪಾವತಿಸುವುದು ಬಾಕಿ ಇದೆ. ಅವರಿಗೆ ಅನುಕೂಲ ಆಗಲಿ ಎಂದು ದಿನಾಂಕ ವಿಸ್ತರಣೆ ಮಾಡಲಾಗಿದೆ.

ಇನ್ನು ಪಿಜಿನೀಟ್ ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ 3ನೇ ಸುತ್ತಿನಲ್ಲಿ ಸೀಟು ಹಂಚಿಕೆಯಾದವರಿಗೆ ಶುಲ್ಕ ಪಾವತಿಸಿ ಕಾಲೇಜಿಗೆ ವರದಿ ಮಾಡಿಕೊಳ್ಳಲು ಮಾರ್ಚ್ 5ರವರೆಗೆ ದಿನಾಂಕವನ್ನು ವಿಸ್ತರಿಸಲಾಗಿತ್ತು. ಕೆಲವು ಅಭ್ಯರ್ಥಿಗಳಿಗೆ ಶುಲ್ಕ ಪಾವತಿಗೆ ಸಮಯ ವಿನಂತಿಸಿಕೊಂಡಿದ್ದರು. ಅವರ ಮನವಿ ಪುರಸ್ಕರಿಸಿದ್ದು, ಅಂದು ಸಂಜೆ 4ರೊಳಗೆ ಶುಲ್ಕ ಪಾವತಿಸಿ ಸಂಜೆ 5.30ರೊಳಗೆ ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳಲು ಸೂಚಿಸಲಾಗಿದೆ. ಮುಖ್ಯವಾಗಿ ಈ ಅವಧಿ ಬಳಿಕ ಶುಲ್ಕ ಪಾವತಿಸಿದ ಅಭ್ಯರ್ಥಿಗಳು ನಿಗದಿತ ಸಮಯದೊಳಗೆ ಕಾಲೇಜಿನಲ್ಲಿ ಪ್ರವೇಶ ಪಡೆಯಬೇಕು. ಇಲ್ಲವಾದರೆ ಅಂಥವರ ಸೀಟುಗಳನ್ನು 4ನೇ ಸುತ್ತಿನ ಹಂಚಿಕೆಗೆ ಪರಿಗಣಿಸಲಾಗುತ್ತದೆ ಎಂದು ತಿಳಿಸಿದೆ.

ವಿವಿಧ ಹುದ್ದೆಗಳ ನೇಮಕಾತಿ: ತಾತ್ಕಾಲಿಕ ಅಂಕ ಪ್ರಕಟ, ಆಕ್ಷೇಪಣೆ ಆಹ್ವಾನ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ್ದ ಕಲ್ಯಾಣ ಕರ್ನಾಟಕ ವೃಂದದ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಫೆಬ್ರವರಿ 21 ರಂದು ಮತ್ತು 22 ರಂದು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಕೀ ಉತ್ತರಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಫೆಬ್ರವರಿ 23ರಂದು ಪ್ರಕಟಿಸಲಾಗಿತ್ತು. ಆಕ್ಷೇಪಣೆಗಳ ಸಲ್ಲಿಕೆಗೂ ಅವಕಾಶ ನೀಡಲಾಗಿತ್ತು.

ಸ್ವೀಕೃತವಾದ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿಯ ಮೂಲಕ ಪರಿಶೀಲಿಸಿ, ವಿಷಯ ತಜ್ಞರ ಸಮಿತಿಯ ಶಿಫಾರಸ್ಸಿನಂತೆ ಪರಿಷ್ಕೃತಗೊಂಡ ಕೀ ಉತ್ತರಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಮಾರ್ಚ್ 02ರಂದು ಅಪ್ಲೋಡ್ ಮಾಡಲಾಗಿತ್ತು. ಸದರಿ ಪರೀಕ್ಷೆಗಳ ಅಂತಿಮ ಕೀ ಉತ್ತರಗಳನ್ನು ಹಾಗೂ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ತಾತ್ಕಾಲಿಕ ಅಂಕಪಟ್ಟಿಗೆ ಆಕ್ಷೇಪಣೆಗಳಿದ್ದರೆ ಪೂರಕ ದಾಖಲೆ ಸಹಿತ ಮಾರ್ಚ್ 6ರ ಬೆಳಗ್ಗೆ 11 ಗಂಟೆಯೊಳಗೆ ಸಲ್ಲಿಸುವಂತೆ ಕೋರಲಾಗಿದೆ. ಬಳಿಕ ಅಂತಿಮ ಪಟ್ಟಿ ಪ್ರಕಟವಾಗಲಿದೆ. ಹೆಚ್ಚಿನ ಮಾಹಿತಿ, ತಾತ್ಕಾಲಿಕ ಅಂಕಪಟ್ಟಿಗೆ ಅಧಿಕೃತ ವೆಬ್‌ಸೈಟ್‌ https://cetonline.karnataka.gov.in/kea/ಗೆ ಭೇಟಿ ನೀಡಬೇಕು ಎಂದು ಕೆಇಎ ಪ್ರಕಟಣೆಯಲ್ಲಿ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+