UGNEET-25: ಅಭ್ಯರ್ಥಿಗಳ ಸ್ಟ್ರೇ ವೇಕೆನ್ಸಿ ಆಯ್ಕೆ ದಾಖಲಾತಿಯ ದಿನಾಂಕ ವಿಸ್ತರಣೆ
ಬೆಂಗಳೂರು, ಡಿಸೆಂಬರ್ 14: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ- ಪದವಿಪೂರ್ವ 2025 (UGNEET) ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆಗೆ ಅವಕಾಶ ನೀಡಲಾಗಿದೆ. ಹೊಸದಾಗಿ ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ತನ್ನ ಅಧಿಕೃತ ಜಾಲತಾಣದಲ್ಲಿ ಲಿಂಕ್ ತೆರೆದಿದೆ. ಅಭ್ಯರ್ಥಿಗಳ ಆಯ್ಕೆ ದಾಖಲಿಸಲು ದಿನಾಂಕ ವಿಸ್ತರಣೆ ಮಾಡಲಾಗಿದೆ ಎಂದು ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಅವರು ತಿಳಿಸಿದರು.
ರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಯುಜಿನೀಟ್ ಅಭ್ಯರ್ಥಿಗಳ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆಗೆ ಮೊದಲು ಡಿಸೆಂಬರ್ 12ರಂದು ಸಂಜೆ 5ಗಂಟೆವರೆಗೆ ಅವಕಾಶ ನೀಡಲಾಗಿತ್ತು. ಇದೀಗ ಅದನ್ನು ಡಿಸೆಂಬರ್ 15ರ ಬೆಳಗ್ಗೆ 11 ಗಂಟೆಗೆ ದಿನಾಂಕ ವಿಸ್ತರಣೆ ಮಾಡಲಾಗಿದೆ. ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದರು.

ಯುಜಿನೀಟ್ ಅಭ್ಯರ್ಥಿಗಳು ಮೂರನೇ ಸುತ್ತಿನಲ್ಲಿ ಪಾವತಿಸಿರುವ ವೈದ್ಯಕೀಯ ಕೋರ್ಸ್ ಶುಲ್ಕದ ಅನ್ವಯ ಇಚ್ಛೆಗಳನ್ನು ದಾಖಲಿಸಬಹುದು. 3ನೇ ಸುತ್ತಿನಲ್ಲಿ ದಂತ ವೈದ್ಯಕೀಯ ಸೀಟು ಸಿಕ್ಕಿರುವವರು ಕೂಡ ವೈದ್ಯಕೀಯ ಕೋರ್ಸ್ ಗೆ ಆಪ್ಷನ್ಸ್ ದಾಖಲಿಸಬಹುದು.
ಕಾಲೇಜಿಗೆ ವರದಿ ಮಾಡಿಕೊಳ್ಳಲು ಸೂಚನೆ
ಈಗಾಗಲೇ ಡಿಸೆಂಬರ್ 13ರಂದು ಬೆಳಗ್ಗೆ 10ಕ್ಕೆ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶ ಹಾಗೂ ಅದೇ ದಿನ ಮಧ್ಯಾಹ್ನ 2ಗಂಟೆಗೆ ವೈದ್ಯಕೀಯ ಕೋರ್ಸ್ ನ ಅಂತಿಮ ಫಲಿತಾಂಶ ಪ್ರಕಟಿಸಲಾಗಿದೆ. ದಂತ ವೈದ್ಯಕೀಯ ಕೋರ್ಸ್ ನ ಅಂತಿಮ ಫಲಿತಾಂಶವನ್ನು ಡಿಸೆಂಬರ್ 13ರಂದು ಮಧ್ಯಾಹ್ನ 3ಗಂಟೆಗೆ ಪ್ರಕಟಿಸಲಾಗಿದೆ. ಸೀಟು ಹಂಚಿಕೆಯಾದವರು ಡಿಸೆಂಬರ್ 15ರೊಳಗೆ ಶುಲ್ಕ ಪಾವತಿಸಿ, ಕಾಲೇಜಿಗೆ ವರದಿ ಮಾಡಿಕೊಳ್ಳುವಂತೆ ಅವರು ಅಭ್ಯರ್ಥಿಗಳಿಗೆ ಸೂಚಿಸಿದರು.
ನೋಂದಣಿ ಮಾಡದಿರುವ ಅಭ್ಯರ್ಥಿಗಳು ಸ್ಟ್ರೇ ವೇಕೆನ್ಸಿ ಸುತ್ತಿನಲ್ಲಿ ಭಾಗವಹಿಸಲು ಇಚ್ಛೆ ಇದ್ದಲ್ಲಿ ತಾವು ತೆಗೆದುಕೊಳ್ಳಬಯಸುವ ಸೀಟಿನ ಸಂಪೂರ್ಣ ಶುಲ್ಕದ ಡಿಡಿ (ಕಾರ್ಯನಿರ್ವಾಹಕ ನಿರ್ದೇಶಕರು ಕೆಇಎ) ತೆಗೆದುಕೊಂಡು ಮನವಿ ಸಲ್ಲಿಸಬೇಕೆಂದು ತಿಳಿಸಲಾಗಿತ್ತು. ಅಂಥವರಿಗೂ ಟಿಕೆಟ್ ಹಂಚಿಕೆಯಲ್ಲಿ ಅವಕಾಶ ನೀಡಲಾಗುತ್ತದೆ ಎಂದು ಕೆಇಎ ಪ್ರಕಟಣೆಯಲ್ಲಿ ತಿಳಿಸಲಾಗಿದೆ.












Click it and Unblock the Notifications