ಕೆಂಪಯ್ಯ ನೇಮಕ ಕೇವಲ ವದಂತಿ : ಸಿದ್ದರಾಮಯ್ಯ

ಬೆಂಗಳೂರು, ಜೂ. 12 : ನಿವೃತ್ತ ಐಪಿಎಸ್ ಅಧಿಕಾರಿ ಕೆಂಪಯ್ಯ ಅವರನ್ನು ಆಂತರಿಕ ಭದ್ರತಾ ಸಲಹೆಗಾರರನ್ನಾಗಿ ನೇಮಕ ಮಾಡಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಕೆಂಪಯ್ಯ ನೇಮಕಕ್ಕೆ ಕೆಲವು ಸಚಿವರು ಮತ್ತು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದರು.

ಗುರುವಾರ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೆಂಪಯ್ಯ ಅವರನ್ನು ಆಂತರಿಕಾ ಭದ್ರತಾ ಸಲಹಗಾರರನ್ನಾಗಿ ನೇಮಕ ಮಾಡಿಕೊಳ್ಳುವುದು ಕೇವಲ ವದಂತಿ ಎಂದು ಹೇಳಿದರು. ಕೆಂಪಯ್ಯ ನೇಮಕ ಕುರಿತು ಯಾವುದೇ ಪ್ರಸ್ತಾಪವೂ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದರು.

Siddaramaiah

ನಿವೃತ್ತ ಐಪಿಎಸ್‌ ಅಧಿಕಾರಿ ಕೆಂಪಯ್ಯ ಅವರನ್ನು ಮುಖ್ಯಮಂತ್ರಿಗಳ ಆಂತರಿಕ ಭದ್ರತಾ ಸಲಹೆಗಾರರನ್ನಾಗಿ ನೇಮಕ ಮಾಡಿ, ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಲಾಗುತ್ತದೆ ಎಂಬ ಮಾತುಗಳು ಹಬ್ಬಿದ್ದವು. ಇದಕ್ಕೆ ಕೆಲವು ಸಚಿವರು ಸಹ ವಿರೋಧ ವ್ಯಕ್ತಪಡಿಸಿದ್ದರು. ಸದ್ಯ ಸಿಎಂ ಸ್ಪಷ್ಟನೆ ನೀಡುವ ಮೂಲಕ ಗೊಂದಲಗಳಿಗೆ ತೆರೆಎಳೆದಿದ್ದಾರೆ. [ಸಿದ್ದರಾಮಯ್ಯ ಸಲಹೆಗಾರರಾಗಿ ಕೆಂಪಯ್ಯ ನೇಮಕ?]

ಹೈಕಮಾಂಡ್ ಗೆ ದೂರು : ನಿವೃತ್ತ ಐಪಿಎಸ್‌ ಅಧಿಕಾರಿ ಕೆಂಪಯ್ಯ ಮತ್ತು ರಾಜಭವನದ ಕಾನೂನು ಸಲಹೆಗಾರರಾದ ವಿಕಾಸ್‌ ಅವರನ್ನು ಲೋಕಾಯುಕ್ತ ಸಂಸ್ಥೆ ಅಡಿ ಕಾರ್ಯ ನಿರ್ವಹಿಸುವ ಅಕ್ರಮ ಗಣಿಗಾರಿಕೆ ತನಿಖೆಗೆ ರಚನೆಯಾಗಿರುವ ವಿಶೇಷ ತನಿಖಾ ತಂಡಕ್ಕೆ ಸಲಹೆಗಾರರನ್ನಾಗಿಸಲು ಸರ್ಕಾರ ಚಿಂತನೆ ನಡೆಸಿದೆ ಎಂಬ ಮಾತುಗಳಿದ್ದವು.

ಕೆಲವು ಶಾಸಕರು ಮಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಕೆಲವು ಸಚಿವರು ಮತ್ತು ಶಾಸಕರು ಈ ಇಬ್ಬರ ನೇಮಕಾತಿಯನ್ನು ವಿರೋಧಿಸಿ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+