commission scam ಬಿಜೆಪಿ - ಕಾಂಗ್ರೆಸ್ ಸರ್ಕಾರದ "ಕಮಿಷನ್ ದಂಧೆ" ಏನಂದಿದ್ರು ಗೊತ್ತಾ ಕೆಂಪಣ್ಣ
commission scam in Karnataka: ಕರ್ನಾಟಕದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಅವರು ಗುರುವಾರ ನಿಧನರಾಗಿದ್ದಾರೆ. ಕೆಂಪಣ್ಣ ಅವರು ಕರ್ನಾಟಕದ ಭ್ರಷ್ಟ ರಾಜಕಾರಣಿಗಳ ಪಾಲಿಗೆ ದುಸ್ವಪ್ನವಾಗಿದ್ದರು. ಬಿಜೆಪಿಗೆ ಅವರು ನೀಡಿದ್ದ ಪೆಟ್ಟು ಅಧಿಕಾರಿಂದಲೇ ಕೆಳಗಿಳಿಯುವಂತೆ ಮಾಡಿತ್ತು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಶೇ 40ರಷ್ಟು ಕಮಿಷನ್ ಕೊಡಬೇಕು ಎನ್ನುವ ವಿಚಾರ ದೇಶದಾದ್ಯಂತ ಸುದ್ದಿಯಾಗಿತ್ತು. ಇದಾದ ಮೇಲೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೂ ಅವರು ಗುಡುಗಿದ್ದು ಇದೆ. ಕಾಂಗ್ರೆಸ್ ಸರ್ಕಾರದಲ್ಲೂ ಅದೇ ಕಮಿಷನ್ ಪದ್ಧತಿ ಮುಂದುವರಿದಿದೆ ಎಂದು ಕಿಡಿಕಾರಿದ್ದರು.
ಕೆಲವು ಗುತ್ತಿಗೆದಾರರು ಭ್ರಷ್ಟರು ಅವರು ಕೆಲವು ರಾಜಕಾರಣಿಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡು ಕಳಪೆ ಕಾಮಗಾರಿ ಹಾಗೂ ಕಳಪೆ ಕೆಲಸಗಳನ್ನು ಮಾಡುತ್ತಾರೆ. ಈ ಮೂಲಕ ಅವರೂ ಸಹ ಭ್ರಷ್ಟರೇ ಎನ್ನುವ ಆರೋಪಗಳು ಇವೆ. ಆದರೆ, ಕೆಂಪಣ್ಣ ಅವರು ಇದನ್ನು ಸುಳ್ಳು ಮಾಡಿದ್ದರು.

ಈ ಹಿಂದೆ ಕರ್ನಾಟಕದಲ್ಲಿ ಅಧಿಕಾರದಲ್ಲಿ ಇದ್ದ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ಶೇಕಡ 40 ಪರ್ಸೆಂಟ್ ಕಮಿಷನ್ ದಂಧೆ ನಡೆದಿದೆ ಎಂದು ಕೆಂಪಣ್ಣ ಅವರು ಆರೋಪಿಸಿದ್ದರು. ಇದೇ ಸಂದರ್ಭದಲ್ಲಿ ಗುತ್ತಿಗೆದಾರರೊಬ್ಬರು ಅಂದಿನ ಪ್ರಮುಖ ಸಚಿವ ಹೆಸರನ್ನು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು ದೇಶಾದ್ಯಂತ ಸುದ್ದಿಯಾಗಿತ್ತು.
ಕರ್ನಾಟಕದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಶೇ 40ರಷ್ಟು ಕಮಿಷನ್ ದಂಧೆಯ ಬಗ್ಗೆ ಮಾತನಾಡಿದ್ದನ್ನೇ ಕಾಂಗ್ರೆಸ್ ಚುನಾವಣಾ ಅಸ್ತ್ರವನ್ನಾಗಿ ಮಾಡಿಕೊಂಡಿತ್ತು. ಮುಂದೆ ಪಿ.ಸಿಎಂ,40 ಪರ್ಸೆಂಟ್ ಕಮಿಷನ್ ಸರ್ಕಾರ ಎಂದು ಹೇಳಿ ಅಭಿಯಾನವನ್ನೇ ಪ್ರಾರಂಭಿಸಿತ್ತು.
ಈ ಅಭಿಯಾನಕ್ಕೆ ಪರೋಕ್ಷವಾಗಿ ಕಾರಣವಾಗಿದ್ದು ಕೆಂಪಣ್ಣ ಅವರು. ಈ ಸಂದರ್ಭದಲ್ಲಿ ಕೆಂಪಣ್ಣ ಅವರು ಕಾಂಗ್ರೆಸ್ ಪರವಾಗಿದ್ದಾರೆ. ಕಾಂಗ್ರೆಸ್‌ನ ಕುಮ್ಮಕ್ಕಿನ ಮೇಲೆ ಈ ದೂರು ನೀಡಿದ್ದಾರೆ ಎನ್ನುವ ಆರೋಪಗಳು ಕೇಳಿ ಬಂದಿದ್ದವು. ಅದೆಲ್ಲದ್ದಕ್ಕೂ ಕೆಂಪಣ್ಣ ಅವರು ಮುಂದೆ ತಮ್ಮದೇ ಸ್ಟೈಲ್‌ನಲ್ಲಿ ಉತ್ತರಿಸಿದ್ದರು.
ಬಿಜೆಪಿ - ಕಾಂಗ್ರೆಸ್ ಯಾವ ಪಕ್ಷವನ್ನೂ ಬಿಡಲಿಲ್ಲ
ಕರ್ನಾಟಕದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಕೇವಲ ಬಿಜೆಪಿ ಸರ್ಕಾರದ ವಿರುದ್ಧ ತಿರುಗಿ ಬೀಳಲಿಲ್ಲ. ಕಾಂಗ್ರೆಸ್‌ನ ವಿರುದ್ಧವೂ ಹೇಳಿಕೆಗಳನ್ನು ನೀಡಿದ್ದು, ಇದೆ. ಬಿಜೆಪಿಯ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಯಾವ ಸರ್ಕಾರ ಬಂದರೂ ಕಮಿಷನ್ ಪಡೆಯೋದು ಮಾತ್ರ ನಿಂತಿಲ್ಲ ಬಿಡ್ರಿ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೂ ಕಮಿಷನ್ ದಂಧೆ ಮುಂದುವರಿದಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು. ಬಾಕಿ ಬಿಲ್ ಬಿಡುಗಡೆಯಾಗುತ್ತಿಲ್ಲ. ಇದನ್ನು ಬಿಡುಗಡೆ ಮಾಡಿ ಎಂದರೆ ಕಮಿಷನ್ ಕೊಡಿ ಅಂತಿದ್ದಾರೆ ಎಂದು ಕೆಂಪಣ್ಣ ದೂರಿದ್ದರು.
ಸಿ.ಎಂ ಸಿದ್ದರಾಮಯ್ಯ ಸಂತಾಪ
ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರ ನಿಧನವಾರ್ತೆ ನೋವುಂಟುಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ. ಈ ಹಿಂದಿನ ಸರ್ಕಾರದ ಅವಧಿಯಲ್ಲಿ ದೇಶಾದ್ಯಂತ ಸುದ್ದಿ ಮಾಡಿದ್ದ 40% ಕಮಿಷನ್ ಹಗರಣವನ್ನು ಹೊರತಂದು, ಗುತ್ತಿಗೆ ಕಾಮಗಾರಿಗಳಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರದ ವಿರುದ್ಧ ಅವರು ಸೆಟೆದು ನಿಂತಿದ್ದರು. ಯಾವುದೇ ಒತ್ತಡ, ಆಮಿಷಗಳಿಗೆ ಒಳಗಾಗದ ನಿರ್ಭೀತ ಧ್ವನಿಯೊಂದನ್ನು ನಾಡು ಇಂದು ಕಳೆದುಕೊಂಡಿದೆ ಎಂದು ಸಿ.ಎಂ ಹೇಳಿದ್ದಾರೆ. ಅಲ್ಲದೇ
ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.












Click it and Unblock the Notifications