ಕೆಂಪೇಗೌಡ ವಿಮಾನ ನಿಲ್ದಾಣ 3 ತಿಂಗಳು ಭಾಗಶಃ ಬಂದ್

ಬೆಂಗಳೂರು, ನವೆಂಬರ್, 6: ಇಲ್ಲಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು 2017 ಫೆಬ್ರುವರಿ 19ರಿಂದ ಏಪ್ರಿಲ್ 30 ರವರೆಗೆ ಭಾಗಶಃ ವಿಮಾನ ಹಾರಾಟ ಸ್ಥಗಿತಗೊಳಿಸಲಾಗುತ್ತದೆ.

ಈ ಅವಧಿಯಲ್ಲಿ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ಕಾರ್ಯ, ಮತ್ತು ರನ್ ವೇ ಕಾಮಗಾರಿ ನಡೆಯುವುದರಿಂದ ಹಗಲು ಸಮಯದಲ್ಲಿ ವಿಮಾನ ಹಾರಾಟ ಮತ್ತು ವಿಮಾನ ಆಗಮನ ಭಾಗಶಃ ಸ್ಥಗಿತಗೊಳ್ಳಲಿದೆ.

Kempegowda airport to be partially closed for 3 monts in 2017

ಈ ಕುರಿತಂತೆ ಬೆಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರವು ಅಧಿಕೃತ ಹೇಳಿಕೆ ನೀಡಿದ್ದು, ಮುಂದಿನ ವರ್ಷ ಮೂರು ತಿಂಗಳು ವಿಮಾನ ಸೇವೆಯನ್ನು ಭಾಗಶಃ ರದ್ದುಗೊಳಿಸಲಾಗುವುದು ಎಂದು ತಿಳಿಸಿದೆ.

ಕಾರ್ಯ ಸ್ಥಗಿತಗೊಳ್ಳುವುದರಿಂದ ಪ್ರಯಾಣಿಕರಿಗೆ ತೊಂದರೆಆಗುವುದನ್ನು ತಪ್ಪಿಸಲು ಬೆಳಿಗ್ಗೆ 10:30ಯಿಂದ 5ಗಂಟೆ ಒಳಗೆ ವಿಮಾನಯಾನ ಸೌಲಭ್ಯವನ್ನು ಯಾವುದೇ ಸಮಸ್ಯೆಯಿಲ್ಲದೆ ಒದಗಿಸಲಾಗುವುದು ಎಂದು ಪ್ರಾಧಿಕಾರ ತಿಳಿಸಿದೆ.

ಈ ಕುರಿತಂತೆ ಕೇಂದ್ರ ನಾಗರಿಕ ವಿಮಾನಯಾನ ಇಲಾಖೆಯಿಂದ ಅನುಮತಿ ಪಡೆದಿದ್ದು, ಎಲ್ಲ ವಿಮಾನಯಾನ ಸಂಸ್ಥೆಗಳ ಸಹಕಾರ ಪಡೆದು ಪ್ರಯಾಣಿಕರಿಗೆ ತೊಂದರೆ ಆಗದಂತೆ ವಿಮಾನಯಾನ ಸೇವೆ ಕಲ್ಪಿಸಲಾಗುವುದು ಎಂದು ಪ್ರಾಧಿಕಾರ ಮಾಧ್ಯಮಗಳಿಗೆ ತಿಳಿಸಿದೆ.

ಮುಂದಿನ ಮಾನ್ಸೂನ್ ನೊಳಗೆ ವಿಮಾನನಿಲ್ದಾಣ ಅಭಿವೃದ್ಧಿ ಕಾರ್ಯಗಳನ್ನು ಪೂರ್ಣಗೊಳಿಸಲಾಗುವುದು ಎಂದು ಪ್ರಾಧಿಕಾರ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+