Kempegowda airport: ನವೆಂಬರ್‌ನಲ್ಲಿ ದಾಖಲೆ ಪ್ರಮಾಣದಲ್ಲಿ ವಿದೇಶಗಳಿಗೆ ಪ್ರಯಾಣಿಕರ ಪ್ರಯಾಣ, ಅಂಕಿಅಂಶಗಳ ವಿವರ ತಿಳಿಯಿರಿ

ದೇವನಹಳ್ಳಿ, ಡಿಸೆಂಬರ್‌, 27: ಸಾಮಾನ್ಯವಾಗಿ ಅಂತಾಷ್ಟ್ರೀಯ ವಿಮಾನ ನಿಲ್ದಾಣಗಳಿಂದ ಬೇರೆ ದೇಶಗಳಿಗೆ ಇಂತಹ ತಿಂಗಳಿನಲ್ಲಿ ಇಂತಿಷ್ಟು ಪ್ರಯಾಣಿಕರು ಪ್ರಯಾಣ ಮಾಡಿರುತ್ತಾರೆ ಎನ್ನುವ ದಾಖಲೆ ಇರುತ್ತದೆ. ಅದೇ ರೀತಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನವೆಂಬರ್‌ನಲ್ಲಿ ಅತೀ ಹೆಚ್ಚು ಪ್ರಯಾಣಿಕರು ವಿದೇಶಗಳಿಗೆ ಪ್ರಯಾಣ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದ್ದು, ಇದು ದಾಖಲೆಯಾಗಿದೆ .

ನವೆಂಬರ್‌ ತಿಂಗಳಲ್ಲಿ ಒಟ್ಟು 3,98,792 ಪ್ರಯಾಣಿಕರು ಟರ್ಮಿನಲ್‌-2ರಿಂದ ವಿದೇಶ ಪ್ರಯಾಣ ಮಾಡಿದ್ದಾರೆ. 2022ರ ನವೆಂಬರ್‌ ತಿಂಗಳಿಗೆ ಹೋಲಿಸಿದರೆ ಈ ಬಾರಿ ಪ್ರಯಾಣಿಕರ ಸಂಖ್ಯೆ ಶೇಕಡಾ 8.6ರಷ್ಟು ಹೆಚ್ಚಾಗಿದೆ ಎಂದು ಕೇಂದ್ರ ಸರ್ಕಾರದ ವಿಮಾನ ನಿಲ್ದಾಣ ಪ್ರಾಧಿಕಾರ ವರದಿ ತಿಳಿಸಿದೆ.

Kempegowda airport: Highest Numbers passengers traveled to abroad in November

ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ 2023ರ ನವೆಂಬರ್‌ನಲ್ಲಿ 30,75,234 ಪ್ರಯಾಣಿಕರು ದೇಶದ ವಿವಿಧ ನಗರಗಳಿಗೆ ಸಂಚರಿಸಿದ್ದಾರೆ. ಇದೇ ವರ್ಷ ವಿಮಾನ ಸಂಚಾರ ಆರಂಭಿಸಿದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೂ ಹೆಚ್ಚು ವಿಮಾನಗಳು ಸಂಚರಿಸುತ್ತಿವೆ. ಆಗಸ್ಟ್‌ನಲ್ಲಿ ಕೇವಲ 145 ಪ್ರಯಾಣಿಕರು ಶಿವಮೊಗ್ಗಕ್ಕೆ ಪ್ರಯಾಣ ಬೆಳೆಸಿದ್ದಾರೆ. ಅಕ್ಟೋಬರ್‌ 3,338 ಪ್ರಯಾಣಿಕರು, ನವೆಂಬರ್‌ 4,622 ಪ್ರಯಾಣಿಕರು ಶಿವಮೊಗ್ಗಕ್ಕೆ ಪ್ರಯಾಣ ಬೆಳೆಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಬೆಂಗಳೂರು ವಿಮಾನ ನಿಲ್ದಾಣದಿಂದ ನವೆಂಬರ್‌ ತಿಂಗಳಿನಲ್ಲಿ ವಾಣಿಜ್ಯ ನಗರಿ ಹುಬ್ಬಳ್ಳಿಗೆ 31,447 ಪ್ರಯಾಣಿಕರು, ಕುಂದಾನಗರಿ ಬೆಳಗಾವಿಗೆ 32,059 ಪ್ರಯಾಣಿಕರು ಸಂಚರಿಸಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಮಾರ್ಗದಲ್ಲಿ ಪ್ರಯಾಣಿಸುವ ಪ್ರಯಾಣಿಕರ ಸಂಖ್ಯೆಯಲ್ಲಿ ಶೇಕಡಾ 44.7ರಷ್ಟು ಹೇಚ್ಚಳ ಆಗಿದೆ ಎಂದು ತಿಳಿದುಬಂದಿದೆ.

ಬೀದರ್‌-ಬೆಂಗಳೂರು ವಿಮಾನ ಸೇವೆ ಸ್ಥಗಿತ

ಇತ್ತೀಚೆಗಷ್ಟೇ ಪ್ರಯಾಣಿಕರು ಕ್ಷೀಣಿಸುತ್ತಿರುವ ಹಿನ್ನೆಲೆ ಮೈಸೂರು ವಿಮಾನ ನಿಲ್ದಾಣದಿಂದ ಹಲವು ವಿಮಾನಗಳ ಸೇವೆಯನ್ನು ರದ್ದುಪಡಿಸಲಾಗಿತ್ತು. ಇದೀಗ ಬೀದರ್-ಬೆಂಗಳೂರು ನಡುವೆ ಸ್ಟಾರ್‌ಏರ್‌ ವಿಮಾನ ಹಾರಾಟ ಸೇವೆಯನ್ನು ಸ್ಥಗಿತಗೊಳಿಸಿದೆ. ಇದಕ್ಕೆ ಪ್ರಮುಖ ಕಾರಣ ಏನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಬೀದರ್-ಬೆಂಗಳೂರು ನಡುವೆ ಸಂಚರಿಸುವ ವಿಮಾನ ಪ್ರಯಾಣಿಕರು ಈ ಮಾಹಿತಿಯನ್ನು ಗಮನಿಸಲೇಬೇಕಿದೆ. ನಷ್ಟದ ಕಾರಣದಿಂದ 'ಸ್ಟಾರ್ ಏರ್' ತನ್ನ ವಿಮಾನ ಸೇವೆಯನ್ನು ಮಂಗಳವಾರದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಈ ಬಗ್ಗೆ ಸ್ಟಾರ್ ಏರ್ ಕಂಪನಿಯ ಅಧಿಕಾರಿಗಳು ಮಾಹಿತಿ ನೀಡಿದ್ದು, ವಿಮಾನಯಾನ ಸೇವೆಯು ನಷ್ಟದಲ್ಲಿ ನಡೆಯುತ್ತಿದ್ದ ಹಿನ್ನೆಲೆ ಈ ತೀರ್ಮಾನ ಕೈಗೊಳ್ಳಲಾಗಿದೆ ಎನ್ನುವ ಮಾಹಿತಿಯನ್ನು ನೀಡಿದ್ದಾರೆ. ಇನ್ನು ಈವರೆಗೆ ಬೀದರ್-ಬೆಂಗಳೂರು, ಬೆಂಗಳೂರು-ಬೀದರ್ ನಡುವೆ ಸ್ಟಾರ್ ಏರ್ ನಿತ್ಯ ಒಂದು ಬಾರಿ ತನ್ನ ವಿಮಾನ ಹಾರಾಟ ನಡೆಸುತ್ತಿದ್ದು, ನಷ್ಟ ಹಿನ್ನೆಲೆ ಈಗ ಒಪ್ಪಂದದ ಅವಧಿಗೂ ಮುನ್ನವೇ ತನ್ನ ಸೇವೆಯನ್ನು ಸ್ಥಗಿತಗೊಳಿಸಿದೆ ಎಂದು ತಿಳಿದುಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+