ಗುದದ್ವಾರದಲ್ಲಿ ಚಿನ್ನ ಬಚ್ಚಿಟ್ಟುಕೊಂಡು ಸಾಗಣೆ ಮಾಡುತ್ತಿದ್ದ ಮಹಿಳೆ ಬಂಧನ
ಗುದದ್ವಾರದಲ್ಲಿ ಚಿನ್ನ ಬಚ್ಚಿಟ್ಟುಕೊಂಡು ಸಾಗಣೆ ಮಾಡುತ್ತಿದ್ದ ಚೆನ್ನೈ ಮೂಲದ ಮಹಿಳೆಯನ್ನು ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಬೆಂಗಳೂರು, ಫೆಬ್ರವರಿ. 19 : ಗುದದ್ವಾರದಲ್ಲಿ ಚಿನ್ನವನ್ನು ಬಚ್ಚಿಟ್ಟುಕೊಂಡು ಸಾಗಣೆ ಮಾಡುತ್ತಿದ್ದ ಚೆನ್ನೈ ಮೂಲದ ಮಹಿಳೆಯನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತ ಮಹಿಳೆಯಿಂದ 12.84 ಲಕ್ಷ ಮೌಲ್ಯದ ಚಿನ್ನವನ್ನು ಜಪ್ತಿ ಮಾಡಿದ್ದಾರೆ. 'ಥಾಯ್ ಏರ್ಲೈನ್ಸ್ ನ ಟಿ.ಜಿ. 325 ವಿಮಾನದಲ್ಲಿ ಬ್ಯಾಂಕಾಕ್ನಿಂದ ಬಂದಿದ್ದ ಮಹಿಳೆಯ ಬಳಿ ಚಿನ್ನವಿರುವ ಬಗ್ಗೆ ಲೋಹ ಶೋಧಕವು ಸುಳಿವು ನೀಡಿತ್ತು.
ಅವರ ಬ್ಯಾಗ್ ಪರಿಶೀಲಿಸಿದರೂ ಚಿನ್ನ ಪತ್ತೆಯಾಗಿರಲಿಲ್ಲ. ಬಳಿಕ ಮಹಿಳಾ ಸಿಬ್ಬಂದಿ, ಅವರನ್ನು ಕೊಠಡಿಗೆ ಕರೆದೊಯ್ದು ಹೆಚ್ಚಿನ ತಪಾಸಣೆ ನಡೆಸಿದರು. ಈ ವೇಳೆ ಗುದದ್ವಾರದಲ್ಲಿ ಚಿನ್ನ ಬಚ್ಚಿಟ್ಟುಕೊಂಡಿದ್ದು ಬೆಳಕಿಗೆ ಬಂದಿದೆ'ಎಂದು ಅಧಿಕಾರಿಗಳು ತಿಳಿಸಿದ್ದಾರೆ.

'ಗುದದ್ವಾರದಲ್ಲಿ ಸಾಗಿಸಲೆಂದೇ ಸಣ್ಣ ಗಾತ್ರದ ಮೊಳೆಗಳ ಮಾದರಿಯಲ್ಲಿ ಚಿನ್ನವನ್ನು ಸಿದ್ಧಪಡಿಸಲಾಗಿತ್ತು. ಅವುಗಳನ್ನು ಗುದದ್ವಾರದಲ್ಲಿ ಇಟ್ಟುಕೊಂಡಿದ್ದ ಮಹಿಳೆಯು ಬ್ಯಾಂಕಾಕ್ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಕಣ್ತಪ್ಪಿಸಿ ಬಂದಿದ್ದು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದಾರೆ' ಎಂದು ಹೇಳಿದ್ದಾರೆ.
-
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ












Click it and Unblock the Notifications