• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ವಿಮಾನ ತಪ್ಪಿದ್ದಕ್ಕೆ ಬಾಂಬ್ ಇದೆ ಎಂದು ಬೆದರಿಕೆ ಕರೆ ಮಾಡಿದ

|

ಬೆಂಗಳೂರು, ಫೆಬ್ರವರಿ 26: ವಿಮಾನ ತಪ್ಪಿದ್ದಕ್ಕೆ ಬಾಂಬ್ ಇದೆ ಎಂದು ಬೆದರಿಕೆ ಕರೆ ಮಾಡಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ವಿಮಾನ ತಪ್ಪಿದ್ದಕ್ಕೆ ಬಾಂಬ್ ಬೆದರಿಕೆ ಕರೆ ಮಾಡಿದ್ದ ಯುವಕನನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಸಿಬ್ಬಂದಿ ವ್ಯಕ್ತಿಯೊಬ್ಬನನ್ನು ಬಂಧಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ಮೈಸೂರು ರೈಲ್ವೆ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ:ತಡರಾತ್ರಿಯಿಂದಲೂ ತಪಾಸಣೆ

ಗುಜರಾತ್ ರಾಜ್ಯದ ಸೂರತ್ ಮೂಲದ ಸಾಫ್ಟ್‌ ವೇರ್ ಎಂಜಿನಿಯರ್ ಪ್ರತೀಕ್ ಬಂಧಿತ ಆರೋಪಿ, ಈತ ತನ್ನ ಪತ್ನಿ, ಮಗುವಿನೊಂದಿಗೆ ನಗರದಲ್ಲಿ ವಿವಾಹ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಗಮಿಸಿದ್ದ, ಗುಜರಾತ್ ಗೆ ತೆರಳಲು ಸಂಜೆ 6.75ಕ್ಕೆ ಏರ್ ಇಂಡಿಯಾ ವಿಮಾನಕ್ಕೆ ಟಿಕೆಟ್ ಬುಕ್ ಮಾಡಿದ್ದ.

ಬಾಗಲಕೋಟೆ, ಚಾಮರಾಜನಗರ, ಮೈಸೂರು ರೈಲ್ವೆ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ

ಆದರೆ ಆತ ವಿಮಾನ ನಿಲ್ದಾಣಕ್ಕೆ ಬರುವುದುತಡವಾಗಿದ್ದರಿಂದ ಬೋರ್ಡಿಂಗ್ ಪಾಸ್ ನೀಡಲು ನಿರಾಕರಿಸಿತ್ತು. ಇದರಿಂದ ಬೇಸರಗೊಂಡ ಆತ ತಕ್ಷಣ ವಿಮಾನದಲ್ಲಿ ಬಾಂಬ್ ಇದೆ ಎಂದು ಕರೆ ಮಾಡಿದ್ದ. ತಕ್ಷಣ ವಿಮಾನವನ್ನು ತಪಾಸಣೆ ನಡೆಸಿದಾಗ ಹುಸಿ ಬಾಂಬ್ ಕರೆ ಎಂದು ತಿಳಿಯಿತು. ಕರೆ ಮಾಡಿದ್ದ ಸಂಖ್ಯೆಯನ್ನು ಪರಿಶೀಲಿಸಿದಾಗ ಪ್ರತೀಕ ಸುಳಿವು ಸಿಕ್ಕಿತ್ತು ತಕ್ಷಣ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

English summary
A passenger missed the scheduled flight, later he call to airport police and made fake bomb claims.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X