ಬೆಂಗಳೂರು ವಿಮಾನ ನಿಲ್ದಾಣದ ಮುಖ್ಯ ರಸ್ತೆ ಜೂ.10 ರಿಂದ ಬಂದ್

ಬೆಂಗಳೂರು, ಜೂನ್ 06 : ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌ಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ಜೂನ್ 10ರಿಂದ ಬಂದ್ ಆಗಲಿದೆ. ವಿಮಾನ ನಿಲ್ದಾಣದ ಆವರಣದ ಎಲ್ಲಾ ವಾಹನಗಳನ್ನು ಹೊಸ ಆರು ಪಥದ ರಸ್ತೆಗೆ ಬದಲಾಯಿಸಲಾಗುತ್ತದೆ.

ವಿಮಾನ ನಿಲ್ದಾಣದ ಟರ್ಮಿನಲ್‌ಗೆ ಸಂಪರ್ಕಿಸುವ ಮುಖ್ಯ ರಸ್ತೆಯನ್ನು ಅಗಲೀಕರಣ ಮಾಡಲಾಗುತ್ತಿದೆ. ಈಗಿರುವ 4 ಪಥದ ರಸ್ತೆಯನ್ನು 10 ಪಥವಾಗಿ ವಿಸ್ತರಣೆ ಮಾಡಲಾಗುತ್ತದೆ. ಈ ಕಾಮಗಾರಿಯ ಹಿನ್ನಲೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳ್ಳಲಿದೆ.

ವಿಮಾನ ನಿಲ್ದಾಣದಲ್ಲಿ ಈಗ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಪೂರಕವಾಗಿ ರಸ್ತೆಯನ್ನು ಅಗಲೀಕರಣ ಮಾಡಲಾಗುತ್ತಿದೆ. ಇದರಿಂದಾಗಿ ಮುಖ್ಯ ರಸ್ತೆಯಲ್ಲಿ ವಾಹನ ಸಂಚಾರ ಬಂದ್ ಆಗಲಿದ್ದು, ವಾಹನಗಳು ಹೊಸ ಆರುಪಥದ ರಸ್ತೆ ಮೂಲಕ ನಿಲ್ದಾಣಕ್ಕೆ ತೆರಳಬಹುದು.

Kempegowda International Airport main access road closed from June 10

ಜೂನ್ 10 ರಿಂದ ಕಾಮಗಾರಿ ಆರಂಭವಾಗಲಿದ್ದು, ವಾಹನ ಸವಾರರಿಗೆ ಈ ಕುರಿತು ಮಾಹಿತಿ ನೀಡಲಾಗುತ್ತಿದೆ. Main Access Road (MAR) ಕಾಮಗಾರಿ 2021ಕ್ಕೆ ಅಂತ್ಯಗೊಳ್ಳುವ ನಿರೀಕ್ಷೆ ಇದೆ. ಅಲ್ಲಿಯ ತನಕ ಪರ್ಯಾಯ ಮಾರ್ಗದಲ್ಲೇ ಸಂಚಾರ ನಡೆಸಬೇಕಿದೆ.

ವರ್ಷದಿಂದ ವರ್ಷಕ್ಕೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಭೇಟಿ ನೀಡುವ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿದೆ. 2018-19ನೇ ಸಾಲಿನಲ್ಲಿ 33.1 ಮಿಲಿಯನ್ ಜನರು ಭೇಟಿ ನೀಡಿದ್ದಾರೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಶೇ 23.8ರಷ್ಟು ಹೆಚ್ಚು ಪ್ರಯಾಣಿಕರು ಆಗಮಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+