ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಧಾನಸೌಧದಲ್ಲಿ ಕೆಂಪೇಗೌಡರ ಜಯಂತಿ ಆಚರಣೆ: ಸಾಧರಿಕಗೆ ಪ್ರಶಸ್ತಿ ಪ್ರಧಾನ

|
Google Oneindia Kannada News

ಬೆಂಗಳೂರು ಜೂ.27: ಕೆಂಪೇಗೌಡರ 513ನೇ ಜಯಂತಿ ಪ್ರಯುಕ್ತ ವಿಧಾನಸೌಧದ ಬ್ಯಾಂಕ್ವೇಟ್ ಹಾಲ್ ನಲ್ಲಿ 'ನಾಡಪ್ರಭು ಕೆಂಪೇಗೌಡರ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ ಆಯೋಜಿಸಿದ್ದ ಸಮಾರಂಭವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿದರು. ಇದೇ ವೇಳೆ ಮುಖ್ಯಮಂತ್ರಿಗಳು ಸೇರಿದಂತೆ ಗಣ್ಯರು ಕೇಂಪೇಗೌಡರ ಮೂರ್ತಿಗೆ ಪುಪ್ಪಾರ್ಚನೆ ನೇರವೇರಿಸಿದರು.

ಕಾರ್ಯಕ್ರಮದ ಭಾಗವಾಗಿ ನಾಡಪ್ರಭು ಕೆಂಪೇಗೌಡ ಸ್ಮರಣಾರ್ಥ ನೀಡುವ 'ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ'ಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೂವರು ಪುರಸ್ಕೃತರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

Kempegowda Jayanthi celebrated in Vidhansoudha and Award distribution

ಪ್ರಶಸ್ತಿ ಪುರಸ್ಕೃತರು;

ಮಾಜಿ ಮುಖ್ಯಮಂತ್ರಿ ಎಸ್. ಎಂ ಕೃಷ್ಣ, ಇನ್ಫೋಸಿಸ್ ಸಂಸ್ಥೆಯ ಸಹ ಸಂಸ್ಥಾಪಕ ಎನ್. ಆರ್ ನಾರಾಯಣಮೂರ್ತಿ ಹಾಗೂ ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಚಾಂಪಿಯನ್ ಪ್ರಕಾಶ ಪಡುಕೋಣೆ ಅವರಿಗೆ ಕೆಂಪೇಗೌಡ ಪ್ರಶಸ್ತಿ ಪ್ರದಾನ ಮಾಡಲಾಯಿತು. ನಾರಾಯಣಮೂರ್ತಿ ಪರವಾಗಿ ಸುಧಾ ನಾರಾಯಣಮೂರ್ತಿ, ಪಡುಕೋಣೆ ಪರವಾಗಿ ವಿಪುಲಕುಮಾರ ಪ್ರಶಸ್ತಿ ಸ್ವೀಕರಿಸಿದರು.

Kempegowda Jayanthi celebrated in Vidhansoudha and Award distribution

ಈ ಸಂದರ್ಭದಲ್ಲಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಗುರುಗುಂಡ ಮಠದ ನಂಜಾವಧೂತ ಶ್ರೀಗಳು, ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ್ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಸಚಿವರಾದ ಡಾ.ಸಿ.ಎನ್. ಅಶ್ವತ್ಥನಾರಾಯಣ, ಆರ್. ಅಶೋಕ್, ಕೆ.ಗೋಪಾಲಯ್ಯ, ಸುನೀಲ್ ಕುಮಾರ್, ಮುನಿರತ್ನ, ಸಂಸದ ತೇಜಸ್ವಿ ಸೂರ್ಯ ಮತ್ತಿತರರು ಉಪಸ್ಥಿತರಿದ್ದರು.

English summary
In the Bengaluru city Nadaprabhu Kempegowder's 513 Jayanti celbrated by Karnataka Government on Monday, kempegowda international award distribute to three achievers by CM Bommai,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X